ರಾಜ್ಯ ಸಭೆ ಚುನಾವಣೆ: ಬಿಜೆಪಿಗೆ 3, ಕಾಂಗ್ರೆಸ್ ಗೆ 1, ಜೆಡಿಎಸ್ ಗೆ ಆಘಾತ
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ
Team Udayavani, Jun 10, 2022, 8:43 PM IST
ಬೆಂಗಳೂರು:ಕರ್ನಾಟಕದಿಂದ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ಶುಕ್ರವಾರ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಅವರು ಗೆದ್ದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ ಮಾಡಿ ಕೊಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ ಮತ್ತು ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಸೋಲು ಅನುಭವಿಸಿದ್ದಾರೆ.
ನಿರ್ಮಲಾ ಸೀತಾರಾಮನ್ 46 ಮತ,ಜಗ್ಗೇಶ್ 44 ಮೊದಲ ಪ್ರಾಶಸ್ತ್ಯದ ಮತ ಪಡೆದು ನಿರೀಕ್ಷಿತ ಗೆಲುವು ಸಾಧಿಸಿದರು. , ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ 30 ಮತ ಮತ್ತು ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ 25 ಮತ ಪಡೆದು ಸೋಲು ಅನುಭವಿಸಿದ್ದಾರೆ.
ಲೆಹರ್ ಸಿಂಗ್ 36 ಮತಗಳನ್ನು ಪಡೆದು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.