ಬೆಂಗಳೂರು: ವಿಚ್ಛೇದಿತ ಮಹಿಳೆ ಮೇಲೆ ಆ್ಯಸಿಡ್ ದಾಳಿ; ಆರೋಪಿ ಬಂಧನ
Team Udayavani, Jun 10, 2022, 11:56 PM IST
ಬೆಂಗಳೂರು: ನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದ ಪ್ರಕರಣ ಮಾಸುವ ಮುನ್ನವೇ ಶುಕ್ರವಾರ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ.
ಅಗರಬತ್ತಿ ಫ್ಯಾಕ್ಟರಿಯಲ್ಲಿ ದುಡಿಯುತ್ತಿದ್ದ ವಿಚ್ಛೇದಿತ ಮಹಿಳೆ ಮೇಲೆ ಗೋರಿಪಾಳ್ಯ ನಿವಾಸಿ ಅಹ್ಮದ್ ಎಂಬಾತ ಶುಕ್ರವಾರ ಬೆಳಗ್ಗೆ ಸಾರಕ್ಕಿ ಸಿಗ್ನಲ್ ಬಳಿ ಆ್ಯಸಿಡ್ ಎರಚಿದ್ದಾನೆ.
ಪರಿಣಾಮ 34 ವರ್ಷದ ಮಹಿಳೆಯ ಕಣ್ಣಿಗೆ ಗಾಯವಾಗಿದ್ದು, ಸಂಜಯ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣದ ವಿವರ
ಅಗರಬತ್ತಿ ಕಾರ್ಖಾನೆಯಲ್ಲಿ ವಿಚ್ಛೇದಿತ ಮಹಿಳೆ ಹಾಗೂ ಆರೋಪಿ ಕೆಲಸ ಮಾಡುತ್ತಿದ್ದು, ಇವರಿಬ್ಬರ ನಡುವೆ ಪ್ರೀತಿ ಮೂಡಿತ್ತು. ಮಹಿಳೆಗೆ ಮೂವರು ಮಕ್ಕಳಿದ್ದು, ಆರೋಪಿ ಅಹ್ಮದ್‌ಗೂ ಮದುವೆಯಾಗಿದೆ ಎನ್ನಲಾಗಿದೆ. ಆದರೂ ತನ್ನನ್ನು ಮದುವೆಯಾಗುವಂತೆ ಆರೋಪಿಯು ಸಂತ್ರಸ್ತೆ ಮೇಲೆ ಒತ್ತಡ ಹಾಕುತ್ತಿದ್ದ. ಆದರೆ ಆಕೆ ಸ್ಪಂದಿಸಿರಲಿಲ್ಲ. ಇದರಿಂದ ಆರೋಪಿ ಕೋಪಗೊಂಡಿದ್ದು, ಗುರುವಾರ ಇದೇ ವಿಚಾರವಾಗಿ ಮಹಿಳೆಯೊಂದಿಗೆ ಜಗಳವಾಡಿದ್ದ ಎನ್ನಲಾಗಿದೆ.
ಆ್ಯಸಿಡ್ ನಿಷೇಧಕ್ಕೆ ಚಿಂತನೆ: ಆರಗ
ಆ್ಯಸಿಡ್ ಅನ್ನು ಬೇರೆ ಕಾರ್ಯಕ್ಕೆ ಬಳಸು ವುದರಿಂದ ನಿಷೇಧ ಹೇರಬಹುದೇ ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತ ನಾಡಿರುವ ಅವರು, ದಾಳಿ ಸಂಬಂಧ ಅಧಿಕಾರಿ ಗಳಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.