ಸೂರ್ಯಕಾಂತಿ ಹೆಚ್ಚು ಬೆಳೆಯಲು ರೈತರಿಗೆ ಕೃಷಿ ಇಲಾಖೆ ಮನವಿ

Team Udayavani, Jun 11, 2022, 5:26 PM IST

24sunflower

ಮುದ್ದೇಬಿಹಾಳ: ಉಕ್ರೇನ್‌-ರಷ್ಯಾ ನಡುವಣ ಯುದ್ಧದಿಂದಾಗಿ ಕಳೆದ 6 ತಿಂಗಳಿಂದ ಭಾರತವು ಬೇರೆ ದೇಶಗಳಿಂದ ಎಣ್ಣೆ ಆಮದು ಮಾಡಿಕೊಳ್ಳುವುದು ಕಷ್ಟಕರವಾಗಿದೆ. ಈ ಹಿನ್ನೆಲೆ ಸ್ವಾವಲಂಬನೆ ಸಾಧಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಬೆನ್ನೆಲುಬಾಗಿರುವ ರೈತರು ಎಣ್ಣೆ ಕಾಳುಗಳ ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವಂತೆ ಕರೆ ನೀಡಿದ್ದಾರೆ.

ಇದು ದೇಶದ ಅಡುಗೆ ಎಣ್ಣೆ ಕೊರತೆ ನಿಭಾಯಿಸಲು ಸಹಕಾರಿಯಾಗಿದೆ. ಪ್ರಧಾನಿಯವರ ಕರೆಯನ್ನು ಗಂಭೀರವಾಗಿ ಪರಿಗಣಿಸಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆಕಾಳು ಬೆಳೆಗಳನ್ನು ಅದರಲ್ಲೂ ಮುಖ್ಯವಾಗಿ ಸೂರ್ಯಕಾಂತಿ ಬೆಳೆಯನ್ನು ಹೆಚ್ಚಿನ ಕ್ಷೇತ್ರಗಳಲ್ಲಿ ಬೆಳೆದು ದೇಶಕ್ಕೆ ಕೊಡುಗೆ ನೀಡಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ರೇವಣೆಪ್ಪ ಮನಗೂಳಿ ಹಾಗೂ ಕೃಷಿ ಉನ್ನತಿ ಯೋಜನೆಯ ತಾಲೂಕು ತಾಂತ್ರಿಕ ವ್ಯವಸ್ಥಾಪಕ ಶಶಿಧರ ಹಾಲ್ಯಾಳ ರೈತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಉಕ್ರೇನ್‌ನಿಂದ ಎಣ್ಣೆ ಆಮದು ಮಾಡಿಕೊಳ್ಳುವ ನಮ್ಮ ದೇಶಕ್ಕೆ ಯುದ್ಧದಿಂದಾಗಿ ಆಮದು ನಿಂತು ಹೋಗಿದೆ. ಇದರಿಂದಾಗಿ ಎಣ್ಣೆಯಲ್ಲಿ ಹೆಚ್ಚಿನ ಬೆಲೆ ಏರಿಕೆ ಕಂಡುಬಂದಿದೆ. ಸೂರ್ಯಕಾಂತಿ ಈ ಭಾಗದ ಪ್ರಮುಖ ಎಣ್ಣೆಕಾಳಿನ ಬೆಳೆಯಾಗಿದೆ. ಈ ವರ್ಷ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ. ಏಕೆಂದರೆ ರೈತರು ಕಳೆದ ವರ್ಷ ತೊಗರಿ ಬೆಳೆದಿದ್ದು, ಹವಾಮಾನ ವೈಪರಿತ್ಯದಿಂದ ಇಳುವರಿ ಕುಂಠಿತವಾಗಿರುತ್ತದೆ. ಆದ್ದರಿಂದ ರೈತರು ಸೂರ್ಯಕಾಂತಿ ಬೆಳೆಯಲು ಆಸಕ್ತಿ ವಹಿಸಬೇಕು. ರೈತರು ಸೂರ್ಯಕಾಂತಿ ಬೆಳೆಯನ್ನು ಕಟಾವು ಮಾಡಿ ಹಿಂಗಾರು ಹಂಗಾಮಿಗೆ ಎರಡನೇಯ ಬೆಳೆಯಾಗಿ ಬಿಳಿಜೋಳ, ಕಡಲೆ ಬೆಳೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಉತ್ಪಾದನೆ-ತಾಂತ್ರಿಕ ಸಲಹೆ: ಎಣ್ಣೆಕಾಳು ಬೆಳೆ ಸೂರ್ಯಕಾಂತಿಯ ಉತ್ಪಾದನೆ ಮತ್ತು ತಾಂತ್ರಿಕತೆ ಕುರಿತು ಮನಗೂಳಿ ಮತ್ತು ಹಾಲ್ಯಾಳ ಅವರು ರೈತರಿಗೆ ಉಪಯುಕ್ತ ಸಲಹೆ ನೀಡಿದ್ದು ಇಂತಿದೆ. ಹವಾಮಾನ ಬದಲಾವಣೆಗೆ ಹೊಂದಿಕೊಂಡು ಬೆಳೆಯುವ ಶಕ್ತಿ ಇರುವುದರಿಂದ ಸೂರ್ಯಕಾಂತಿಯನ್ನು ವರ್ಷದ ಎಲ್ಲ ಹಂಗಾಮಿನಲ್ಲಿ ಎಲ್ಲ ತರಹದ ಮಣ್ಣಿನಲ್ಲಿ ಬೆಳೆಯಬಹುದು. ಗಂಗಾ ಕಾವೇರಿ, ಕಾವೇರಿ ಚಾಂಪ್‌, ಸಂಕ್ರಾಂತಿ, ಐಟಿಸಿ, ಸ್ಯಾಂಡೋಜ್‌ ಸೂರ್ಯಕಾಂತಿಯ ಪ್ರಮುಖ ತಳಿಗಳಾಗಿವೆ.

ಸೂರ್ಯಕಾಂತಿ ಬೆಳೆಗೆ ಪ್ರಮುಖವಾಗಿ ಬರಬಹುದಾದ ರಸ ಹೀರುವ ಕೀಟದ ಬಾಧೆ ತಪ್ಪಿಸಲು ಪ್ರತಿ ಕೆಜಿ ಬೀಜಕ್ಕೆ 2 ಎಂಎಲ್‌ ಕ್ಲೋರೋಪೈರಿಪಾಸ್‌ದಿಂದ ಬೀಜೋಪಚಾರ ಮಾಡಬೇಕು. ಪ್ರತಿ ಎಕರೆಗೆ 2 ಟನ್‌ ಸಾವಯವ ಕೊಟ್ಟಿಗೆ ಗೊಬ್ಬರ ಬಿತ್ತನೆಗೆ 2-3 ವಾರ ಮುಂಚಿವಾಗಿ ಮಣ್ಣಿಗೆ ಸೇರಿಸಬೇಕು. ಪ್ರತಿ ಎಕರೆಗೆ 14 ಕೆಜಿ ಸಾರಜನಕ, 20 ಕೆಜಿ ರಂಜಕ, 14 ಕೆಜಿ ಪೋಟ್ಯಾಸ್‌ ಒದಗಿಸುವ ರಸಗೊಬ್ಬರವನ್ನು ಕೊಡಬೇಕು. ಪ್ರತಿ ಎಕರೆಗೆ 2 ಕೆಜಿ ಬೀಜಗಳನ್ನು ಸಾಲಿನಿಂದ ಸಾಲಿಗೆ 60 ಸೆಂ.ಮೀ. ಅಂತರದಲ್ಲಿ ಹಾಗೂ ಸಸಿಯಿಂದ ಸಸಿಗೆ 30 ಸೆಂಮಿ ಅಂತರದಲ್ಲಿ ಕೈಗೊಳ್ಳಬೇಕು. ಸೂರ್ಯಕಾಂತಿ ಬೆಳೆಯನ್ನು ಜುಲೈ ಮೊದಲ ವಾರದಿಂದ ಆಗಸ್ಟ್‌ 15ರವರೆಗೆ ಬಿತ್ತಬಹುದಾಗಿದೆ.

ಮುಂಗಾರು ಹಂಗಾಮಿನಲ್ಲಿ ಅಂತರ ಬೆಳೆಯಾಗಿ ಬೆಳೆಯಲು ಕ್ರಮ ಕೈಗೊಳ್ಳಬೇಕು. ಸೂರ್ಯಕಾಂತಿ ಹೂವಾಡುವ ಹಂತದಲ್ಲಿ ಪರಾಗಸ್ಪರ್ಶ ಬೆಳೆ ಆಗಿರುವುದರಿಂದ ಪರಾಗಸ್ಪರ್ಶಕ್ಕೆ ಹೆಚ್ಚಿನ ಒತ್ತು ನೀಡಬೇಕಾಗುತ್ತದೆ. ಆದುದರಿಂದ ಮಸಲಿನ್‌ ಬಟ್ಟೆಯಿಂದ ಎಲ್ಲಾ ಹೂವುಗಳ ಮೇಲೆ ಪರಾಗಸ್ಪರ್ಶ ಮಾಡುವದರಿಂದ ಕಾಳು ಕಟ್ಟುವಿಕೆ ಹೆಚ್ಚಾಗಿ ಜೊಳ್ಳು ಹಿಡಿಯುವುದಿಲ್ಲ. ಮೇಲಾಗಿ ಕಾಳುಗಳು ಗಟ್ಟಿ, ದಪ್ಪವಾಗಿ ಇಳುವರಿ ಹೆಚ್ಚುತ್ತದೆ. ಸರಿಯಾದ ಬೇಸಾಯ ಕ್ರಮಗಳನ್ನು ಸಕಾಲದಲ್ಲಿ ಅಳವಡಿಸಿಕೊಂಡರೆ ಎಕರೆಗೆ 8-10 ಕ್ವಿಂಟಲ್‌ ಇಳುವರಿ ಪಡೆಯಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.