ಅಂತಾರಾಷ್ಟ್ರೀಯ ಸ್ಪರ್ಧೆಗೆ 24 ವಿದ್ಯಾರ್ಥಿಗಳು ಆಯ್ಕೆ

ಆಗಸ್ಟ್‌ ತಿಂಗಳಲ್ಲಿ ನೇಪಾಳದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Team Udayavani, Jun 11, 2022, 6:25 PM IST

ಅಂತಾರಾಷ್ಟ್ರೀಯ ಸ್ಪರ್ಧೆಗೆ 24 ವಿದ್ಯಾರ್ಥಿಗಳು ಆಯ್ಕೆ

ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಿಜಿಎಸ್‌ ಸ್ಫೋರ್ಟ್ಸ್ ಕ್ಲಬ್‌ನ 24 ವಿದ್ಯಾರ್ಥಿಗಳು ಕಳೆದ ವಾರ ಪುದುಚೇರಿಯಲ್ಲಿ ನಡೆದ ರಾಷ್ಟ್ರಮಟ್ಟದ ಆಲ್‌ ಸ್ಫೋರ್ಟ್ಸ್ ಮತ್ತು ಗೇಮ್ಸ್‌ ಫೆಡರೇಷನ್‌ ಆಫ್ ಇಂಡಿಯಾ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶ್ರೀಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ, ಮಠದ ಕಾರ್ಯದರ್ಶಿ, ಕ್ಲಬ್‌ನ ಪ್ರಧಾನ ಪೋಷಕ ಪ್ರಸನ್ನನಾಥ ಸ್ವಾಮೀಜಿ ಅವರ ಮಾರ್ಗದರ್ಶನ ಪಡೆದು ಜೂ.3ರಿಂದ 6ರವರೆಗೆ ಪುದುಚೇರಿಯಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟ ದಲ್ಲಿ ಭಾಗವಹಿಸಿ 19 ವರ್ಷದೊಳಗಿನ ಬಾಲಕರ ವಿಭಾಗದ ಕಬಡ್ಡಿ, ವಾಲಿಬಾಲ್‌ನಲ್ಲಿ ಪ್ರಥಮ, 17ವರ್ಷದೊಳಗಿನ ಬಾಲಕರ ವಿಭಾಗದ ಷಟಲ್‌ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ, 14 ವರ್ಷದೊಳಗಿನ ಗುಂಡು ಎಸೆತ
ಸ್ಪರ್ಧೆಯಲ್ಲಿ ಪ್ರಥಮ, 12 ವರ್ಷದೊಳಗಿನ 400 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದು ಆಗಸ್ಟ್‌ ತಿಂಗಳಲ್ಲಿ ನೇಪಾಳದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾ ಶಿಕ್ಷಕರಾದ ಟಿ.ಎಸ್‌. ವೆಂಕಟೇಶ್‌, ಪಿ.ಮಣಿ ಅವರಿಂದ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿರುವ ಶ್ರೀಮಠದ ಶಾಲಾ ಕಾಲೇಜುಗಳ 24 ವಿದ್ಯಾರ್ಥಿಗಳನ್ನು ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ ಸೇರಿ ಸ್ಫೋರ್ಟ್ಸ್ ಕ್ಲಬ್‌ನ ಕಾರ್ಯದರ್ಶಿ, ಕಾರ್ಯಕಾರಿ ಸಮಿತಿ ಎಲ್ಲಾ ಸದಸ್ಯರು, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ.ಎ.ಟಿ.ಶಿವರಾಮು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್‌, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಎನ್‌.ಪರಮಶಿವಯ್ಯ, ಎಲ್ಲಾ ದೈಹಿಕ ಶಿಕ್ಷಕರು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.