ಚಿನ್ನದ ಕಳ್ಳಸಾಗಣೆ ಆರೋಪ: ನನ್ನನ್ನು ಬೆದರಿಸಲು ಪ್ರಯತ್ನಿಸಬೇಡಿ; ಕೇರಳ ಸಿಎಂ
Team Udayavani, Jun 11, 2022, 10:50 PM IST
ಕೊಟ್ಟಾಯಂ: “ನಮಗೆ ಬೆದರಿಕೆ ಹಾಕಲು ಪ್ರಯತ್ನಿಸಬೇಡಿ. ನೀವೆಷ್ಟೇ ಆರೋಪ ಮಾಡಿದರೂ ಅದು ನಮ್ಮ ಮೇಲಾಗಲೀ, ನಮ್ಮ ಸರ್ಕಾರದ ಮೇಲಾಗಲೀ ಪರಿಣಾಮ ಬೀರುವುದಿಲ್ಲ. ಏಕೆಂದರೆ, ನನ್ನ ರಾಜ್ಯದ ಜನ ನಮ್ಮೊಂದಿಗಿದ್ದಾರೆ.’ಹೀಗೆಂದು ಹೇಳಿರುವುದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್.
ಚಿನ್ನದ ಕಳ್ಳ ಸಾಗಣೆ ಪ್ರಕರಣದಲ್ಲಿ ಪಿಣರಾಯಿ ಮತ್ತು ಕುಟುಂಬವೂ ಭಾಗಿಯಾಗಿದೆ ಎಂಬ ಮಾಹಿತಿಯನ್ನು ಆರೋಪಿ ಸ್ವಪ್ನಾ ಸುರೇಶ್ ಬಾಯಿಬಿಟ್ಟಿದ್ದಾರೆ ಎಂದು ಹೇಳಲಾದ ಆಡಿಯೋ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯಾದ್ಯಂತ ಪ್ರತಿಪಕ್ಷಗಳು ಪಿಣರಾಯಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿವೆ.
ಈ ಹಿನ್ನೆಲೆಯಲ್ಲಿ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಪ್ರತಿಪಕ್ಷಗಳಿಗೆ ಸಿಎಂ ಪಿಣರಾಯಿ ಈ ರೀತಿ ತಿರುಗೇಟು ನೀಡಿದ್ದಾರೆ.
ವಿಧಾನಸಭೆ ಚುನಾವಣೆಗೂ ಮುನ್ನವೇ ಇಂಥ ಸಾವಿರಾರು ಆರೋಪಗಳನ್ನು ನನ್ನ ವಿರುದ್ಧ ಹೊರಿಸಲಾಗಿತ್ತು. ಆದರೆ, ಜನರು 99 ಸೀಟುಗಳನ್ನು ನೀಡಿ ನಮ್ಮನ್ನು ಗೆಲ್ಲಿಸಿದರು. ಪಟ್ಟಭದ್ರ ಹಿತಾಸಕ್ತಿಗಳು ಏನೇ ಗಿಮಿಕ್ ಮಾಡಿದರೂ ಸತ್ಯವೇನೆಂಬುದು ಜನರಿಗೆ ಗೊತ್ತು. ಹಾಗಾಗಿ ನನ್ನನ್ನು ಬೆದರಿಸಲು ಬರಬೇಡಿ ಎಂದು ಪಿಣರಾಯಿ ಹೇಳಿದ್ದಾರೆ.
ವರ್ಗಾವಣೆ ಮಾಡಿದ್ದೇಕೆ?:
ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶುಕ್ರವಾರ ರಾತ್ರೋರಾತ್ರಿ ಕೇರಳದ ಎಲ್‌ಡಿಎಫ್ ಸರ್ಕಾರ ಜಾಗೃತ ದಳ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ನಿರ್ದೇಶಕ ಎಂ.ಆರ್.ಅಜಿತ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಕೆಂಡಾಮಂಡಲವಾಗಿರುವ ಕಾಂಗ್ರೆಸ್, ಈ ದಿಢೀರ್ ವರ್ಗಾವಣೆಗೆ ಕಾರಣವನೇನು ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.