ಅಪಘಾತ ತಡೆಗೆ ರಸ್ತೆ ನಿಯಮ ಪಾಲಿಸಿ

Team Udayavani, Jun 12, 2022, 12:09 PM IST

Untitled-1

ದೇವನಹಳ್ಳಿ: ಅಪಘಾತ ತೀವ್ರತೆ ತಡೆಯಲು ರಸ್ತೆ ಸುರಕ್ಷಾ ನಿಯಮ ಪಾಲಿಸಬೇಕು. ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ವಾಹನ ಚಾಲನೆ ಮಾಡುವ ಮೂಲಕ ಮುಂದು ಆಗಬಹುದಾದ ಅಪಾಯ ತಪ್ಪಿಸಬೇಕು ಎಂದು ಸಂಚಾರ ಪೊಲೀಸ್‌ ಠಾಣೆಯ ಡಿಸಿಪಿ ಸವಿತಾ ತಿಳಿಸಿದರು.

ಪಟ್ಟಣದ ಬೈಚಾಪುರ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್‌ ಸಂಚಾರ ಉತ್ತರ ವಿಭಾಗ ಹಾಗೂ ಸಂಚಾರ ಈಶಾನ್ಯ ಉಪವಿಭಾಗ ಹಾಗೂ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ಪೊಲೀಸ್‌ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಸಂಚಾರ ಸಂಪರ್ಕ ದಿನದ ಅಂಗವಾಗಿ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಮನೆಯಿಂದ ಹೊರಗೆ ಹೋದವರು ತಮಗಾಗಿ ಕುಟುಂಬಸ್ಥರು ಕಾಯುತ್ತಾರೆ. ಜೀವ ತುಂಬಾ ಮುಖ್ಯ ಎಂದು ಅರಿತುಕೊಂಡು ಜಾಗ್ರತೆಯಿಂದ ಚಾಲನೆ ಮಾಡಬೇಕು. ವಾಹನ ಸವಾರರು ಸುರಕ್ಷಾ ನಿಯಮ ಅನುಸರಿಸಬೇಕು ಎಂದರು.

ನಿಯಂತ್ರಣಕ್ಕೆ ಹೆಚ್ಚಿನ ಕ್ರಮ: ಅತಿ ಹೆಚ್ಚು ವೇಗವಾಗಿ ಬರುವ ವಾಹನಗಳ ಬರುವಿಕೆ ಹೆಚ್ಚಾಗುತ್ತಿದ್ದು, ಅವುಗಳ ನಿಯಂತ್ರಣಕ್ಕೆ ಹೆಚ್ಚಿನ ಕ್ರಮವಹಿಸಬೇಕಾಗುತ್ತದೆ. ಅಪಘಾತಗಳು ಹೆಚ್ಚು ಆಗುತ್ತಿರುವುದರಿಂದ ಸಾವು-ನೋವುಗಳು ಹೆಚ್ಚಾಗುತ್ತಿರುದರಿಂದ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ಅಪಘಾತಗಳು ತಪ್ಪಬೇಕಾಗಿದೆ. ಸುಗಮ ಸಂಚಾರದಿಂದ ಜನರಿಗೆ ಅನು ಕೂಲವಾಗುತ್ತದೆ. ಹೆಚ್ಚು ಪ್ರಕರಣಗಳು ದಾಖಲಾದ ಸ್ಥಳಗಳನ್ನು ಕಪ್ಪು ಪ್ರದೇಶ ಎಂದು ಗುರುತಿಸಿ ಅಲ್ಲಿ ಟ್ರಾಫಿಕ್‌ ಎಂಜಿನಿಯರ್‌ನಿಂದ ಪೊಲೀಸರು ಏನು ಮಾಡಬೇಕು ಎಂಬುದರ ಬಗ್ಗೆ ಅಧ್ಯಯನವನ್ನು ಮಾಡುತ್ತೇವೆ. ಮುಂದಿನ ಹಂತದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಗುಣಮಟ್ಟದ ಹೆಲ್ಮೆಟ್‌ ಧರಿಸಿ: ಬೆಂಗಳೂರು ಕಮಿಷನರ್‌ ವ್ಯಾಪ್ತಿಗೆ ದೇವನಹಳ್ಳಿ ಪಟ್ಟಣವನ್ನು ಸೇರಿಸಲಾಗಿದೆ. ಜನರು ಇದಕ್ಕೆ ಇನ್ನು ಒಗ್ಗಿಕೊಂಡಿಲ್ಲ. ತಮ್ಮ ಸುರಕ್ಷಿತ ಪ್ರಯಾಣ ಮಾಡಬೇಕಾದರೆ ಗುಣ ಮಟ್ಟದ ಹೆಲ್ಮೆಟ್‌ ಧರಿಸಬೇಕು. ಅಪಘಾತವಾದಾಗ ತಲೆಗೆ ಹೆಚ್ಚು ಪೆಟ್ಟು ಬೀಳುವುದರಿಂದ ಸಾವಿನ ಪ್ರಕರಣ ಕಂಡುಬರುತ್ತಿದೆ. ಸೊಪ್ಪು ತರಕಾರಿ ಕಾರಣಗಳನ್ನು ನೆಪಕ್ಕೆ ಸಾರ್ವಜನಿಕರು ಹೇಳುತ್ತಾರೆ. ಅದನ್ನು ಬಿಟ್ಟು ಹೆಲ್ಮೆಟ್‌ ಹಾಕಿಕೊಂಡು ಓಡಾಡಬೇಕು ಎಂದು ಹೇಳಿದರು.

ಪಾರ್ಕಿಂಗ್‌ ವ್ಯವಸ್ಥೆಯಿಲ್ಲ: ನಾಗರಿಕ ವಿಜಯ್‌ ಕುಮಾರ್‌ ಮಾತನಾಡಿ, ಪಟ್ಟಣದಲ್ಲಿ ಸರಿಯಾದ ರೀತಿ ಪಾರ್ಕಿಂಗ್‌ ವ್ಯವಸ್ಥೆಯಿಲ್ಲ. ಪಾರ್ಕಿಂಗ್‌ ವ್ಯವಸ್ಥೆಯನ್ನು ಮಾಡಬೇಕು. ಪಟ್ಟಣದಲ್ಲಿ ಪ್ರತಿಯೊಂದಕ್ಕೂ ದ್ವಿಚಕ್ರ ವಾಹನದಲ್ಲಿ ಹೋಗಬೇಕಾಗುತ್ತದೆ. ಹೆಲ್ಮೆಟ್‌ ಹಾಕದಿರಲು ವಿನಾಯಿತಿ ನೀಡಬೇಕು. ಈಗಾಗಲೇ ದ್ವಿಚಕ್ರ ವಾಹನಗಳ ಮೇಲೆ ಸಾಕಷ್ಟು ಕೇಸ್‌ ಹಾಕಲಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬರೂ ಹೆಲ್ಮೆಟ್‌ ಧರಿಸಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಲಕ್ಷ್ಮಣ್‌ ನಾಯಕ್‌ ಮಾತ ನಾಡಿ, ಕನ್ನಮಂಗಲ ಗೇಟ್‌ನಲ್ಲಿ ಹೆಚ್ಚು ಅಪಘಾತಗಳು ಆಗುತ್ತಿದ್ದವು. ಅಲ್ಲಿ ರಸ್ತೆ ಮುಚ್ಚಿದ ಮೇಲೆ ಅಪಘಾತ ಪ್ರಕರಣ ಕಡಿಮೆಯಾಗಿದೆ. ಪ್ರತಿಯೊಬ್ಬರೂ ಹೆಲ್ಮೆಟ್‌ ಧರಿಸಿ ಸುರಕ್ಷಿತ ಪ್ರಯಾಣ ಮಾಡುವಂತೆ ಆಗಬೇಕು ಎಂದರು.

ಪುರಸಭಾ ಮುಖ್ಯಾಧಿಕಾರಿ ಎ.ಎಚ್‌. ನಾಗರಾಜ್‌, ಸಂಚಾರ ಪೊಲೀಸ್‌ ಠಾಣೆಯ ಪಿಎಸ್‌ಐ, ಎಎಸ್‌ಐ ಹಾಗೂ ಸಿಬ್ಬಂದಿ ವರ್ಗ ಹಾಗೂ ಜನಪ್ರತಿನಿಧಿಗಳು ಇದ್ದರು.

ಜನಸಂದಣಿ ಜಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆ: ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ಪೊಲೀಸ್‌ ಠಾಣೆಯ ಜನರ ಕುಂದುಕೊರತೆ ಆಲಿಸಲಾಗಿದೆ. ಮುಂದೆ ಇವುಗಳ ಸಮಸ್ಯೆಗೆ ಆದ್ಯತೆ ನೀಡಲಾಗುವುದು. ಎಲ್ಲಿ ಪರ್ಯಾಯ ಮಾರ್ಗಗಳನ್ನು ಸಂಚಾರಕ್ಕೆ ಹುಡುಕಬೇಕಾಗುತ್ತದೆ. ಪುರಸಭೆಗೆ ಪಾರ್ಕಿಂಗ್‌ ವ್ಯವಸ್ಥೆ ಸಂಬಂಧಪಟ್ಟಂತೆ ಇದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜನಸಂದಣಿ ಇರುವ ಜಾಗಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಂಚಾರ ಪೊಲೀಸ್‌ ಠಾಣೆಯ ಡಿಸಿಪಿ ಸವಿತಾ ಹೇಳಿದರು.

ರಸ್ತೆ ಗುಂಡಿ ಮುಚ್ಚಲು ಆಗ್ರಹ: ಪಟ್ಟಣದಲ್ಲಿ ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು ಅವುಗಳನ್ನು ಮುಚ್ಚುವ ಕೆಲಸ ಆಗಬೇಕು. ಭಾರೀ ವಾಹನಗಳು ಪಟ್ಟಣದಲ್ಲಿ ಸಂಚಾರ ಮಾಡುತ್ತಿರುವುದರಿಂದ ಧೂಳು ಹೆಚ್ಚು ಬರುತ್ತಿರುವುದರಿಂದ ವಾಹನ ಸವಾರರು ಓಡಿಸಲು ಕಷ್ಟಪಡುತ್ತಿದ್ದಾರೆ ಎಂದು ಹಿರಿಯ ನಾಗರಿಕ ಡಾ. ಮೂರ್ತಿ ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.