ಗ್ರಾಮೀಣ ಬ್ಯಾಂಕ್‌ : 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ


Team Udayavani, Jun 13, 2022, 6:10 AM IST

ಗ್ರಾಮೀಣ ಬ್ಯಾಂಕ್‌ : 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಬಿಪಿಎಸ್‌ ಮೂಲಕ ದೇಶದ 43 ಗ್ರಾಮೀಣ ಬ್ಯಾಂಕ್‌ ಗಳಲ್ಲಿ 8,106 ಹುದ್ದೆಗಳಿಗೆ ನೇಮಕಕ್ಕೆ ಅಧಿ ಸೂಚನೆ ಹೊರಡಿಸಲಾಗಿದೆ. ಈ ಪೈಕಿ ರಾಜ್ಯದ ಬಳ್ಳಾರಿ ಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮತ್ತು ಧಾರ ವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳ 832 ಹುದ್ದೆಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.

ಜೂನ್‌ 7ರಂದು ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್‌ 27 ಅರ್ಜಿ ಸಲ್ಲಿಸಲು ಕೊನೆಯ ದಿನ. ಸೆಪ್ಟಂಬರ್‌ ಅಥವಾ ಅಕ್ಟೋಬರ್‌ನಲ್ಲಿ ಪರೀಕ್ಷೆ ನಡೆಸಿ, ನವೆಂಬರ್‌ನಲ್ಲಿ ಸಂದರ್ಶನ ನಡೆಸಲು ಐಬಿ  ಪಿಎಸ್‌ ನಿರ್ಧರಿಸಿದೆ. ರಾಜ್ಯದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್‌ ಜತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್‌ ನೀಡಿದೆ.

ಹುದ್ದೆಗಳ ವಿವರ
ಈ ಬಾರಿ 8,106 ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂದು ಪ್ರಕಟಿಸಲಾಗಿದೆ. ಇದರಲ್ಲಿ ಆಫೀಸ್‌ ಅಸಿಸ್ಟೆಂಟ್‌ (ಮಲ್ಟಿ ಪರ್ಪಸ್‌) ಹುದ್ದೆಗಳ ಸಂಖ್ಯೆಯೇ 4,483, ಆಫೀಸರ್‌ ಸ್ಕೇಲ್‌- ಐರ ಹುದ್ದೆ 2,676, ಆಫೀಸರ್‌ ಸ್ಕೇಲ್‌-ಐಐ ರ ಹುದ್ದೆ 867 ಮತ್ತು ಆಫೀಸರ್‌ ಸ್ಕೇಲ್‌-ಐಐಐರ 80 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಬ್ಯಾಂಕ್‌ಗಳಲ್ಲಿ ಆಫೀಸ್‌ ಅಸಿಸ್ಟೆಂಟ್‌ ಹುದ್ದೆಗಳ ಸಂಖ್ಯೆಯೇ 173, ಆಫೀಸರ್‌ ಸ್ಕೇಲ್‌- ಐರ 429 ಮತ್ತು ಆಫೀಸರ್‌ ಸ್ಕೇಲ್‌-ಐಐ ರ 230 (ಜನರಲ್‌ ಬ್ಯಾಂಕಿಂಗ್‌) ಹುದ್ದೆಗಳಿಗೆ ನೇಮಕ ನಡೆಯಲಿದೆ.

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?
ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಡ್ಯ ಮೈಸೂರು,ಶಿವಮೊಗ್ಗ, ಮಂಗಳೂರು ಮತ್ತು ಉಡುಪಿ.
ಮುಖ್ಯಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ.

ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 850 ರೂ. ಹಾಗೂ ಎಸ್‌ಸಿ/ಎಸ್‌ಟಿ/ಅಂಗವಿಕಲರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ.ಶುಲ್ಕ ನಿಗದಿಪಡಿಸಲಾಗಿದೆ. ಬ್ಯಾಂಕ್‌ ಸೇವಾ ಶುಲ್ಕ ಮತ್ತು ಇಂಟಿಮೇಶನ್‌ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ಆನ್‌ಲೈನ್‌ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ವಯೋಮಿತಿ
ಆಫೀಸ್‌ ಅಸಿಸ್ಟೆಂಟ್‌ (ಮಲ್ಟಿಪರ್ಪಸ್‌) ಹುದ್ದೆಗೆ 18ರಿಂದ 28 ವರ್ಷ. ಆಫೀಸರ್‌ ಸ್ಕೇಲ್‌-ಐ ಹುದ್ದೆಗೆ ಅಭ್ಯರ್ಥಿಗಳು 18ರಿಂದ 30 ವರ್ಷದೊಳಗಿನವರಾಗಿರಬೇಕು. ಆಫೀಸರ್‌ ಸ್ಟೇಲ್‌-ಐಐ ಹುದ್ದೆಗೆ 21ರಿಂದ 32 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಆಫೀಸರ್‌ ಸ್ಟೇಲ್‌-ಐಐಐ ಹುದ್ದೆಯ ಆಕಾಂಕ್ಷಿಗಳು 21ರಿಂದ 40 ವರ್ಷದೊಳಗಿನವರಾಗಿರಬೇಕು.

ಪರೀಕ್ಷಾ ಪೂರ್ವ ತರಬೇತಿ
ಐಬಿಪಿಎಸ್‌ ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾಕ ಅಭ್ಯರ್ಥಿಗಳು ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಆಫೀಸ್‌ ಅಸಿಸ್ಟೆಂಟ್‌ (ಮಲ್ಟಿ ಪರ್ಪಸ್‌ ) ಮತ್ತು ಆಫೀಸರ್‌ ಸ್ಕೇಲ್‌-ಐ ಹುದ್ದೆಗಳಿಗೆ ತರಬೇತಿ ಪಡೆಯಬಹುದು. ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ತರಬೇತಿ ಸ್ಥಳದ ಖರ್ಚು ವೆಚ್ಚಗಳನ್ನು ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಅರ್ಹತೆಗಳೇನು?
ಆಫೀಸ್‌ ಅಸಿಸ್ಟೆಂಟ್‌: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ಸ್ಥಳೀಯ ಭಾಷೆಯನ್ನು ತಿಳಿದಿರಬೇ ಕಾದುದು ಅವಶ್ಯಕ. ಕಂಪ್ಯೂಟರ್‌ ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರಬೇಕು.

ಆಫೀಸರ್‌ ಸ್ಕೇಲ್‌-ಐ: ಕೃಷಿ, ತೋಟಗಾರಿಕೆ, ಅರಣ್ಯ, ಪ್ರಾಣಿಶಾಸ್ತ್ರ, ಪಶು ವಿಜ್ಞಾನ, ಅಗ್ರಿಕಲ್ಚರ್‌ ಎಂಜಿನಿಯರಿಂಗ್‌, ಫಿಸಿಕಲ್ಚರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಆ್ಯಂಡ್‌ ಕೋ- ಆಪರೇಷನ್‌, ಇನ್‌ಫಾರ್ಮೇಷನ್‌ ಟೆಕ್ನಾಲಜಿ, ಮ್ಯಾನೇಜ್‌ ಮೆಂಟ್‌ ಲಾ, ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ- ಈ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಪಡೆದವರು ಆಫೀಸರ್‌ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.

ಆಫೀಸರ್‌ ಸ್ಕೇಲ್‌ – ಐಐ : ಅಂಗೀಕೃತ ವಿವಿಯಿಂದ ಶೇ. 50 ಅಂಕಗಳೊಂದಿಗೆ ಪದವಿ ಪಡೆದಿರುವುದು ಕಡ್ಡಾಯ. ಆಫೀಸರ್‌ ಸ್ಕೇಲ್‌-ಐ ಗೆ ತಿಳಿಸಿದ ವಿಷಯಗಳಲ್ಲಿ ಪದವಿ ಪಡೆದಿದ್ದರೆ ನೇಮಕದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ಇದರೊಂದಿಗೆ ಯಾವುದೇ ಬ್ಯಾಂಕ್‌ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಎರಡು ವರ್ಷಗಳ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು. ಆಫೀಸರ ಸ್ಕೇಲ್‌-2ನ ಸ್ಪೆಶಲಿಸ್ಟ್‌ ಆಫೀಸರ್‌ಗಳಾದ ಇನ್‌ಫಾರ್ಮೇ ಷನ್‌ ಆಫೀಸರ್‌, ಚಾರ್ಟರ್ಡ್‌ ಅಕೌಂಟೆಂಟ್‌, ಲಾ ಆಫೀಸರ್‌, ಟ್ರೆಸರಿ ಆಫೀಸರ್‌, ಮಾರ್ಕೆಟಿಂಗ್‌ ಆಫೀಸರ್‌ ಮತ್ತು ಅಗ್ರಿಕಲ್ಚರ್‌ ಆಫೀಸರ್‌ ಹುದ್ದೆಗಳಿಗೆ ಪದವಿ ಮತ್ತು ಒಂದು ವರ್ಷದ ಸೇವಾನುಭವ ಹೊಂದಿರಬೇಕು.

ಆಫೀಸರ್‌ ಸ್ಕೇಲ್‌-ಐಐಐ: ಮಾರ್ಕೆಟಿಂಗ್‌ ಫೈನಾನ್ಸ್, ಅಗ್ರಿಕಲ್ಚರ್‌, ಹಾರ್ಟಿಕಲ್ಚರ್‌, ಫಾರೆಸ್ಟ್ರಿ ಅಗ್ರಿಕಲ್ಚರ್‌, ಅಗ್ರಿಕಲ್ಚರಲ್‌ ಮಾರ್ಕೆಟಿಂಗ್‌, ಕೊ-ಆಪರೇಷನ್‌, ಇನ್‌ಫಾರ್ಮೇಶನ್‌ ಟೆಕ್ನಾಲಜಿ, ಮ್ಯಾನೇಜ್‌ಮೆಂಟ್‌ ಮತ್ತು ಕಾನೂನು ವಿಷಯದಲ್ಲಿ ಶೇ. 50 ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜತೆಗೆ ಬ್ಯಾಂಕ್‌ ಅಥವಾ ವಿತ್ತೀಯ ಸಂಸ್ಥೆಗಳಲ್ಲಿ ಐದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.

ಈ ಬಾರಿಯ ಬದಲಾವಣೆಗಳೇನು?
ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ನೀವು ತರುವ ಐಡಿ ಪ್ರೂಫ್‌ನ ಸಂಖ್ಯೆ ನೀಡುವುದು ಕಡ್ಡಾಯ ಹಾಗೂ ಅದು ನೀವು ಅರ್ಜಿ ಸಲ್ಲಿಸಿದ ಹೆಸರಿನೊಂದಿಗೆ ಹೊಂದಾ ಣಿಕೆಯಾಗಬೇಕು. ಈ ಬಾರಿ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಾಗಿ ಇದನ್ನು ಪರೀಕ್ಷಾ ಕೇಂದ್ರದ ಸಿಬಂದಿಯಿಂದ ಧೃಡಪಡಿಸಿಕೊಳ್ಳುವ ಆಗತ್ಯವಿದೆ. ಮೇನ್ಸ್‌ ಪರೀಕ್ಷೆಗೆ ಅರ್ಹಗೊಂಡ ಅಭ್ಯರ್ಥಿಗಳು ಮೇನ್ಸ್‌ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನು ಕೂಡ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಬಹುದು.

ಮುಖ್ಯ ಸೂಚನೆಗಳು
ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಆಫೀಸ್‌ ಅಸಿಸ್ಟೆಂಟ್‌ ಮತ್ತು ಆಫೀಸರ್‌ ಹುದ್ದೆ ಎರಡಕ್ಕೂ ಅರ್ಜಿ ಸಲ್ಲಿಸಬಹುದು. ಆದರೆ ಆಫೀಸರ್‌ ಕೇಡರ್‌ನಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು. ಆಫೀಸ್‌ ಅಸಿಸ್ಟೆಂಟ್‌ ಮತ್ತು ಆಫೀಸರ್‌ ಸ್ಕೇಲ್‌-ಐಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರಬೇಕಾದುದು ಕಡ್ಡಾಯ. ಆಫೀಸ್‌ ಅಸಿಸ್ಟೆಂಟ್‌ ಮತ್ತು ಆಫೀಸರ್‌ ಸ್ಕೇಲ್‌- ಐಕ್ಕೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿರುವುದು ಅವಶ್ಯ. 8ನೇ ತರಗತಿಯವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವರನ್ನು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಪಡೆದ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ.

ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿಯು ಪ್ರವೇಶಪತ್ರದ ಜತೆಗೆ ನೀಡಲಾಗುವ “ಮಾಹಿತಿ ಕೈಪಿಡಿ’ಯಲ್ಲಿ ಇರುತ್ತದೆ. ಆಫೀಸ್‌ ಅಸಿಸ್ಟೆಂಟ್‌ ಹುದ್ದೆಗೆ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸುವಾಗ ಅಭ್ಯರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ. ಆಫೀಸರ್‌ ಸ್ಟೇಲ್‌-ಐ ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ಐಬಿಪಿಎಸ್‌ ನ ಅಧಿಕೃತ ವೆಬ್‌ ಸೈಟ್‌ನಲ್ಲಿ ಪಡೆದು ಅರ್ಜಿ ಸಲ್ಲಿಸಿ.

ಲಿಂಕ್‌: https://www.ibps.in/
ಹೆಚ್ಚಿನ ಮಾಹಿತಿಗೆ: https://www.ibps.in/

ಟಾಪ್ ನ್ಯೂಸ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.