ಪೊರಕೆ ಹಿಡಿಯುವ ಕೈಯಲ್ಲಿನ್ನು ಸ್ಟೇರಿಂಗ್‌!

ಸ್ವಚ್ಛತೆ ನಿರ್ವಹಿಸುತ್ತಿದ್ದ ಮಹಿಳೆಯರಿಗೆ ತ್ಯಾಜ್ಯ ವಿಲೇ ಹೊಣೆ ; ಆಸಕ್ತ ಮಹಿಳೆಯರ ಗುರುತಿಸಿ ಚಾಲನಾ ತರಬೇತಿ

Team Udayavani, Jun 13, 2022, 9:42 AM IST

1

ಹುಬ್ಬಳ್ಳಿ: ಪೊರಕೆ ಹಿಡಿದು ಗ್ರಾಮಗಳಲ್ಲಿ ಕಸ ಗುಡಿಸುವ ಮಹಿಳೆಯರು ಇನ್ನು ಮುಂದೆ ಸ್ಟೇರಿಂಗ್‌ ಹಿಡಿಯಲಿದ್ದಾರೆ. ಗ್ರಾಮಗಳಲ್ಲಿ ಸ್ವತ್ಛತಾ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯರು ತ್ಯಾಜ್ಯ ವಿಲೇವಾರಿ ಜವಾಬ್ದಾರಿ ಹೊರಲಿದ್ದಾರೆ. ಘನ ತ್ಯಾಜ್ಯ ವಿಲೇವಾರಿ ಮಾಡುವ ವಾಹನಗಳ (ಆಟೋ ಟಿಪ್ಪರ್‌) ಚಾಲನಾ ಹೊಣೆಯನ್ನು ಮಹಿಳೆಯರಿಗೆ ನೀಡಲಾಗುತ್ತಿದೆ.

ನಗರ, ಗ್ರಾಮಗಳ ಸ್ವಚ್ಛತಾ ಕಾರ್ಯದಲ್ಲಿ ಮಹಿಳಾ ಕಾರ್ಮಿಕರ ಪಾತ್ರ ದೊಡ್ಡದು. ಆದರೆ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ತ್ಯಾಜ್ಯ ವಿಲೇವಾರಿ ಜವಾಬ್ದಾರಿ ಕೂಡ ನೀಡಲಾಗುತ್ತಿದೆ. ಆಸಕ್ತ ಮಹಿಳೆಯರನ್ನು ಗುರುತಿಸಿ ಅವರಿಗೆ ಚಾಲನಾ ತರಬೇತಿ ನೀಡಲು ಸಿದ್ಧತೆಗಳು ನಡೆದಿವೆ.

ಆಯಾ ಜಿಲ್ಲಾ ಪಂಚಾಯಿತಿ ಮೂಲಕ ಮಹಿಳೆಯರನ್ನು ಗುರುತಿಸಿ 30 ದಿನಗಳ ಚಾಲನಾ ತರಬೇತಿ ನೀಡಲಿದ್ದಾರೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರು ಕೂಡ ಸ್ವಾವಲಂಬಿ ಜೀವನ ನಡೆಸಲು ಇದೊಂದು ಒಳ್ಳೆಯ ಯೋಜನೆಯಾಗಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯ ಯಶಸ್ವಿಯಾಗಿದ್ದರಿಂದ ಅಲ್ಲಿನ ಮಾದರಿಯಲ್ಲೇ ಮಹಿಳೆಯರಿಗೆ ಚಾಲನಾ ತರಬೇತಿ ನೀಡಲು ಸರಕಾರ ಜಿಪಂ ಮೂಲಕ ಈ ಕಾರ್ಯ ಅನುಷ್ಠಾನಗೊಳಿಸಲಾಗುತ್ತಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟದ ಅಡಿಯಲ್ಲಿ ಬರುವ ಸ್ವ ಸಹಾಯ ಗುಂಪಿನ ಸದಸ್ಯರು ಈಗಾಗಲೇ ಗ್ರಾಮಗಳಲ್ಲಿ ಮನೆ ಮನೆಯಿಂದ ಘನತ್ಯಾಜ್ಯ ಸಂಗ್ರಹ, ಸಾಗಣೆ, ವಿಂಗಡಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಮೌಲ್ಯಯುತ ವಸ್ತುಗಳನ್ನು ಮಾರಾಟ ಮಾಡಿ ನಿರ್ವಹಣೆ ವೆಚ್ಚ ಸರಿದೂಗಿಸುವ ಕೆಲಸ ಆಗುತ್ತಿದೆ. ಪ್ರಮುಖವಾಗಿ ಮನೆಯ ಹಂತದಲ್ಲೇ ಒಣ-ಹಸಿ ಕಸ ವಿಂಗಡಿಸಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ತ್ಯಾಜ್ಯ ಸಂಗ್ರಹಣಾ ಸುಂಕದ ವಸೂಲಾತಿಯನ್ನೂ ಕೂಡ ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಸಂಜೀವಿನಿ ಒಕ್ಕೂಟದ ಸದಸ್ಯರು ನಿರ್ವಹಿಸುವ ಮಟ್ಟಕ್ಕೆ ತಮ್ಮ ಕಾರ್ಯಸಾಧನೆ ತೋರಿದ್ದಾರೆ. ಹೀಗಾಗಿ ಗ್ರಾಮೀಣ ಅಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಸ್ವತ್ಛ ಭಾರತ ಮಿಷನ್‌ ಮೂಲಕ ಆಸಕ್ತ ಮಹಿಳೆಯರಿಗೆ ಈ ಅವಕಾಶ ಕಲ್ಪಿಸಲಾಗಿದ್ದು, ರಾಜ್ಯಾದ್ಯಂತ 1220 ಮಹಿಳೆಯರಿಗೆ ಚಾಲನಾ ತರಬೇತಿ ದೊರೆಯಲಿದೆ.

ವಾಕರಸಾ ಸಂಸ್ಥೆಯಲ್ಲಿ ತರಬೇತಿ: ಇದೀಗ ಮೊದಲ ಹಂತದಲ್ಲಿ ಆಯ್ಕೆಯಾಗಿರುವ ಮಹಿಳೆಯರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದ ಮೂಲಕ ತರಬೇತಿ ದೊರೆಯಲಿದೆ. ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಧಾರವಾಡ ಜಿಪಂ-59, ಗದಗ-05, ಬಾಗಲಕೋಟೆ-12, ಬೆಳಗಾವಿ-37, ಹಾವೇರಿ-46, ಉತ್ತರ ಕನ್ನಡ-15 ಸೇರಿದಂತೆ ಒಟ್ಟು 174 ಮಹಿಳೆಯರು ಮೊದಲ ಹಂತದಲ್ಲಿ ತರಬೇತಿ ಪಡೆಯಲಿದ್ದಾರೆ.

ನಿತ್ಯ 30 ಜನರಿಗೆ ತರಬೇತಿ ದೊರೆಯಲಿದ್ದು, 30 ದಿನಗಳ ಅವಧಿಯ ತರಬೇತಿಯಾಗಿದೆ. ಆರಂಭದಲ್ಲಿ ಧಾರವಾಡ ಜಿಪಂ ನಂತರ ಇತರೆ ಜಿಪಂ ವ್ಯಾಪ್ತಿಯ ಮಹಿಳೆಯರಿಗೆ ತರಬೇತಿಗೆ ಅವಕಾಶ ಕಲ್ಪಿಸಲಾಗಿದೆ. ತರಬೇತಿಗೆ ಬರುವವರಿಗೆ ಬೆಳಿಗ್ಗೆ ಉಪಾಹಾರ, ಮಧ್ಯಾಹ್ನದ ಊಟ ಕೂಡ ಕೊಡಲಿದ್ದಾರೆ. ತರಬೇತಿ ಪೂರ್ಣಗೊಳಿಸಿದ ನಂತರ ಸಾರಿಗೆ ಸಂಸ್ಥೆ ವತಿಯಿಂದಲೇ ಚಾಲನಾ ತರಬೇತಿ ಪರವಾನಗಿ ಕೊಡಿಸುವ ಕೆಲಸ ಆಗುತ್ತದೆ. ಆಯ್ಕೆಯಾದ ಮಹಿಳೆಯರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎನ್ನುತ್ತಾರೆ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಚಾರ್ಯ ನಾರಾಯಣಪ್ಪ ಕುರುಬರ.

ವಯಸ್ಸಿನ ಗೊಂದಲ: ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆ, ಮುಖ್ಯಮಂತ್ರಿ ಕೌಶಲ ಕರ್ನಾಟಕ ಯೋಜನೆ ಅಡಿಯಲ್ಲಿ 18-40 ವರ್ಷ ವಯೋಮಿತಿ ಹೊಂದಿರುವ ಗ್ರಾಪಂ ವ್ಯಾಪ್ತಿಯಲ್ಲಿ ಆಸಕ್ತ ಮಹಿಳೆಯರನ್ನು ಗುರುತಿಸಿ ಹಂತ ಹಂತವಾಗಿ ಚಾಲನಾ ತರಬೇತಿ ನೀಡಲು ಯೋಜಿಸಲಾಗಿದೆ. ಆದರೆ ಮುಖ್ಯಮಂತ್ರಿಗಳ ಕೌಶಲ ಯೋಜನೆಯಡಿ 35 ವರ್ಷದಗೊಳಗಿನ ಅಭ್ಯರ್ಥಿಗಳಿಗೆ ಮಾತ್ರ ಚಾಲನಾ ತರಬೇತಿ ನೀಡಲು ಅವಕಾಶವಿದೆ. ಆದರೆ ಜಿಪಂ ವತಿಯಿಂದ 18-40 ವರ್ಷದವರೆಗಿನ ಮಹಿಳೆಯರನ್ನು ಆಯ್ಕೆ ಮಾಡಿರುವುದು ವಯಸ್ಸಿನ ಗೊಂದಲ ನಿರ್ಮಾಣವಾಗಿದೆ. ಈ ಕುರಿತು ಇನ್ನೂ ಯಾವುದೇ ಸ್ಪಷ್ಟತೆ ಇಲ್ಲದ ಕಾರಣ 35 ವಯಸ್ಸು ದಾಟಿದವರಿಗೆ ತರಬೇತಿ ಕೊಡಬೇಕೋ ಬೇಡವೋ ಎನ್ನುವ ಗೊಂದಲವಿದೆ.

ಈ ತರಬೇತಿ ವಸತಿ ರಹಿತವಾಗಿರುವುದರಿಂದ ದೂರದ ಜಿಲ್ಲೆಗಳ ಗ್ರಾಮಗಳಿಂದ ಮಹಿಳೆಯರು ಬಂದು ಹೋಗುವುದು ಸುಲಭದ ಮಾತಲ್ಲ ಎನ್ನುವುದು ಫಲಾನುಭವಿಗಳ ಅಳಲಾಗಿದೆ. ಹೀಗಾಗಿ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ತರಬೇತಿ ನೀಡುವುದು, ಅಲ್ಲಿಯ ಸಾರಿಗೆ ಇಲಾಖೆಯಿಂದ ಚಾಲನಾ ಪರವಾನಗಿ ಕೊಡಿಸುವುದು ಸೂಕ್ತ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದು, ವಾಯವ್ಯ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಹುಬ್ಬಳ್ಳಿಯಲ್ಲಿ ಒಂದೇ ತರಬೇತಿ ಕೇಂದ್ರ ಇರುವ ಕಾರಣಕ್ಕೆ ಈ ಗೊಂದಲ ಸೃಷ್ಟಿಯಾಗಿದೆ. ವಸತಿ ಸಹಿತ ತರಬೇತಿ ನೀಡಿದರೆ ಈ ಗೊಂದಲ ಇರುವುದಿಲ್ಲ ಎನ್ನುವ ಮಾತುಗಳಿವೆ.

ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ 6 ಜಿಲ್ಲಾ ಪಂಚಾಯ್ತಿಗಳಿಂದ ಚಾಲನಾ ತರಬೇತಿಗಾಗಿ ಕೋರಿದ್ದಾರೆ. ಮೊದಲ ಹಂತದಲ್ಲಿ 174 ಮಹಿಳೆಯರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದ ಮೂಲಕ ಚಾಲನಾ ತರಬೇತಿ ನೀಡಲಾಗುವುದು. ಗ್ರಾಮೀಣ ಭಾಗದ ಮಹಿಳೆಯರಿಗೆ ಇದೊಂದು ಒಳ್ಳೆಯ ಯೋಜನೆಯಾಗಿದೆ. ಮಹಿಳೆಯರನ್ನು ಸಬಲೆಯರನ್ನಾಗಿ ಮಾಡುವ ಕಾರ್ಯವನ್ನು ನಮ್ಮ ಸಂಸ್ಥೆ ಮೂಲಕ ಅನುಷ್ಠಾನಗೊಳಿಸಲು ಸರಕಾರ ಮುಂದಾಗಿದೆ. ಫಲಾನುಭವಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಆಯೋಜಿಸಲಾಗುವುದು. –ಎಸ್‌.ಭರತ, ವ್ಯವಸ್ಥಾಪಕ ನಿರ್ದೇಶಕ, ವಾಕರಸಾ ಸಂಸ್ಥೆ

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.