ಬಾಲಕಾರ್ಮಿಕರ ಪದ್ಧತಿ ತಡೆಗೆ ಸಹಕರಿಸಿ


Team Udayavani, Jun 13, 2022, 3:02 PM IST

ಬಾಲಕಾರ್ಮಿಕರ ಪದ್ಧತಿ ತಡೆಗೆ ಸಹಕರಿಸಿ

ದೇವನಹಳ್ಳಿ: ದೇಶದಲ್ಲಿ ಬಾಲಕಾರ್ಮಿಕ ಮತ್ತು ಜೀತ ಪದ್ಧತಿ ಇಂದಿಗೂ ಜೀವಂತವಾಗಿರಲು ಬಡತನ ಹಾಗೂ ಶಿಕ್ಷಣ ಸಮಾಜದ ಭದ್ರತೆಯ ಕೊರತೆಯೇ ಕಾರಣ ಎಂದು ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್‌. ಬಿರಾದಾರ ದೇವಿಂದ್ರಪ್ಪ ತಿಳಿಸಿದರು.

ಪಟ್ಟಣದ ಗಿರಿಯಮ್ಮ ವೃತ್ತದ ಡಾ.ಬಿ.ಆರ್‌.ಅಂಬೇ ಡ್ಕರ್‌ ಭವನದಲ್ಲಿ ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತಾಶ್ರಯ ದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಆಸೆ ಅವರಿಗೂ ಇರುತ್ತದೆ. ಆದರೆ, ಬಡತನದಿಂದ ಮಕ್ಕಳ ದುಡಿಮೆ ಯಿಂದ ಪೋಷಣೆ ಮಾಡಬೇಕಾಗಿರುವ ಕಾರಣ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವ ಪರಿಪಾಠ ಇದೆ ಎಂದರು.

14ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳ ಬಾರದು. ಹಾಗೇನಾದರೂ ಮಕ್ಕಳನ್ನು ಕೆಲಸಕ್ಕೆ ಸೇರಿಸಿದ್ದರೆ ಅದು ಅಪರಾಧವಾಗುತ್ತದೆ. ಅಪರಾಧ ಸಾಬೀತಾ ದಲ್ಲಿ 50 ಸಾವಿರ ರೂ. ದಂಡ ಮತ್ತು 2 ವರ್ಷ ಜೈಲು ಶಿಕ್ಷೆ ಇರುತ್ತದೆ. ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡವರನ್ನು ಕಂಡರೆ ಸಾರ್ವಜನಿಕರು 1098ಗೆ ಕರೆ ಮಾಡಬಹುದು. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಾರೆ. ಮಕ್ಕಳಿಗೆ ಶಿಕ್ಷಣ ನೀಡಿ, ಸಮಾಜದಲ್ಲಿ ಅವರ ಗುರಿ ಸಾಧಿಸಲು ಪ್ರತಿಯೊ ಬ್ಬರ ಜವಾಬ್ದಾರಿ ಎಂದು ಹೇಳಿದರು.

ಮೊದಲು ಶಿಕ್ಷಣ ನೀಡಿ: ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ರಾಮುಮಲ್ಲಯ್ಯ ಮಾತನಾಡಿ, ಮಕ್ಕಳಿಗೆ ಮೊದಲು ಶಿಕ್ಷಣ ನೀಡುವಂತಾಗಬೇಕು. ಮಕ್ಕಳನ್ನು ಕಾರ್ಮಿಕರನ್ನಾಗಿ ಮಾಡುವುದು ಅನಿಷ್ಟ ಪದ್ಧತಿ ಯಾಗಿದೆ. ಈ ದೇಶದಲ್ಲಿ ಸಾಮಾನ್ಯವಾಗಿ ಎಲ್ಲಾ ನಾಗರಿ ಕರು ಜವಾಬ್ದಾರಿಯನ್ನು ತೆಗೆದುಕೊಂಡು ಅನಿಷ್ಟ ಪದ್ಧತಿಯನ್ನು ತೊಲಗಿಸಬೇಕೆ ವಿನಃ ಕೇವಲ ಅಧಿಕಾರಿಗಳಿಂದ ಸಾಧ್ಯವಿಲ್ಲ. ಮಕ್ಕಳಿಗೆ ವಿದ್ಯಾವಂತರನ್ನಾಗಿ ಮಾಡಿದರೆ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗುತ್ತಾರೆ ಎಂದು ಹೇಳಿದರು.

ಮಾಲೀಕರನ್ನು ಕರೆಸಿ ಮಾಹಿತಿ ನೀಡಿ: ದೇವನಹಳ್ಳಿ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ಡಿ.ಕೆ. ಮಧುಸೂಧನ್‌ ಮಾತನಾಡಿ, ಕೆಲವು ಅಧಿಕಾರಿಗಳು ತಮ್ಮನ್ನು ಕೇಳಿ ಕೆಲವರು ಹೊರಟಿದ್ದಾರೆ. ಇನ್ನು ಕೆಲವರು ಮೊಬೈಲ್‌ ನೋಡುತ್ತಿದ್ದಾರೆ. ಅಧಿಕಾರಿಗಳು ಇಂತಹ ಸಭೆ ಮಾಡುವಾಗ ಬಾಲಕಾರ್ಮಿಕ ಪದ್ಧತಿಗೆ ಸಂಬಂಧಿಸಿದಂತೆ ಹೋಟೆಲ್‌ ಮಾಲೀಕರು, ಬೇಕರಿ ಮಾಲೀಕರು, ಗ್ಯಾರೇಜ್‌ ಅಂಗಡಿಗಳ ಮಾಲೀಕರು, ಅಪಾರ್ಟ್‌ಮೆಂಟ್‌ ಮಾಲೀಕರನ್ನು ಕರೆಸಿ ಅವರಿಗೆ ಬಾಲ ಕಾರ್ಮಿಕ ಪದ್ಧತಿ ಸಂಬಂಧಪಟ್ಟಂತೆ ಮಾಹಿತಿ ನೀಡಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಎನ್‌.ಶ್ರೀಕಂಠ, ಕಾರ್ಮಿಕ ಜಿಲ್ಲಾಮಟ್ಟದ ಅಧಿಕಾರಿ ನಾಗೇಂದ್ರ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಸುಬಾರಾವ್‌.ಎಸ್‌, ಜಿಲ್ಲಾ ದಿವ್ಯಾಂಗ ಕಲ್ಯಾಣಾಧಿಕಾರಿ ಜಗ ದೀಶ್‌, ಕಾರ್ಮಿಕ ಇಲಾಖೆ ತಾಲೂಕು ಕಾರ್ಮಿಕ ನಿರೀಕ್ಷಕಿ ಅಂಬಿಕಾ, ಪುರಸಭೆ ಮುಖ್ಯಾಧಿಕಾರಿ ಎ. ಎಚ್‌.ನಾಗರಾಜ್‌, ಎನ್‌ಸಿಸಿ ವಿದ್ಯಾರ್ಥಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಇದ್ದರು.

ಬಾಲಕಾರ್ಮಿಕ ಪದ್ಧತಿ ಬುಡಸಮೇತ ತೊಲಗಲಿ : ಮಕ್ಕಳ ಸರ್ವತೋಮುಖ ಬೆಳೆವಣಿಗೆಗೆ ಸಹಕಾರ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ಬುಡಸಮೇತ ತೊಲಗಿಸಬೇಕು. ಇದಕ್ಕೆ ಎಲ್ಲರ ಸಹಕಾರ ಬೇಕು. ಸಂವಿಧಾನ, ಸರ್ಕಾರ ಅನೇಕ ಕಾಯ್ದೆ, ಕಾನೂನು ಜಾರಿಗೊಳಿಸುವುದರ ಮೂಲಕ ಬಾಲಕ ಕಾರ್ಮಿಕ ವಿರೋಧಿ ಪದ್ಧತಿ ಮೂಲಕ ಜಾಗೃತಿ ಮೂಡಿಸುತ್ತಿದೆ. ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆಯನ್ನು ಅನುಷ್ಠಾನಕ್ಕೆ ತರಬೇಕು. ಇಂತಹ ಅನಿಷ್ಟ ಪದ್ಧತಿ ತೊಲಗಿಸಬೇಕು ಎಂದು ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್‌. ಬಿರಾದಾರ ದೇವಿಂದ್ರಪ್ಪ ಹೇಳಿದರು.

ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು : ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯ ಆಗಿರುತ್ತದೆ ಎಂದು ತಹಶೀಲ್ದಾರ್‌ ಶಿವರಾಜ್‌ ಹೇಳಿದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.