ಜ್ಯೇಷ್ಠ ಮಾಸದ ಸೂಪರ್ ಮೂನ್
Team Udayavani, Jun 14, 2022, 6:20 AM IST
ಇಂದು ಜೂನ್ 14. ಜ್ಯೇಷ್ಠ ಮಾಸದ ಹುಣ್ಣಿಮೆ. ಇಂದೇ ಸೂಪರ್ ಮೂನ್. ಚಂದ್ರ ಭೂಮಿಯ ಸುತ್ತ 28 ದಿನಗಳಿಗೊಮ್ಮೆ ಸುತ್ತುವ ತಿರುಗಾಟದಲ್ಲಿ ಇಂದು ಪೆರಿಜಿಯಲ್ಲಿ, ಅಂದರೆ ಭೂಮಿಗೆ ಸಮೀಪ ಸರಾಸರಿ ದೂರಕ್ಕಿಂತ ಸುಮಾರು 30 ಸಾವಿರ ಕಿ. ಮೀ. ಹತ್ತಿರ. ಚಂದ್ರ ತನ್ನ ದೀರ್ಘ ವೃತ್ತಾಕಾರದ ಪಥದಲ್ಲಿ 28 ದಿನಗಳಿಗೊಮ್ಮೆ ಭೂಮಿಗೆ ಸಮೀಪ, ಪೆರಿಜಿಯಲ್ಲಿ ಹಾಗೂ ದೂರದ ಅಪೊಜಿಯಲ್ಲಿ ಬರುವುದು ವಾಡಿಕೆ. ಈ ಪೆರಿಜಿಗೆ ಬಂದಾಗ ಹುಣ್ಣಿಮೆಯಾದರೆ ಸೂಪರ್ ಚಂದ್ರ ಹತ್ತಿರ ಬರುವುದರಿಂದ ಈ ದಿನ ಚಂದ್ರ ನಮಗೆ ಸುಮಾರು 15 ಅಂಶ ಗಾತ್ರದಲ್ಲಿ ದೊಡ್ಡದಾಗಿ 25 ಅಂಶ ಹೆಚ್ಚಿನ ಬೆಳಕಿನಿಂದ ಗೋಚರಿಸುತ್ತದೆ. ಚಂದ್ರ ಭೂಮಿಗಳ ಸರಾಸರಿ ದೂರ 3 ಲಕ್ಷದ 84 ಸಾವಿರ ಕಿ.ಮೀ. ಆದರೆ ಇಂದು 3 ಲಕ್ಷದ 57 ಸಾವಿರ.
ಈಗ ಜ್ಯೇಷ್ಠ ಮಾಸ
ಭಾರತೀಯರ ಮಾಸಗಳ ಕಲ್ಪನೆ ಬಲು ಚಂದ. ಹುಣ್ಣಿಮೆಯ ಚಂದ್ರ ಆ ದಿನ ಯಾವ ನಕ್ಷತ್ರದ ಜತೆಗಿರುವನೋ ಆ ನಕ್ಷತ್ರದ ಹೆಸರನ್ನು ಆ ತಿಂಗಳಿಗೆ ನಮ್ಮ ಹಿರಿಯರು ಇಟ್ಟಿರುವುದು ಅವರ ಆಕಾಶ ವೀಕ್ಷಣಾ ಪ್ರೌಢ ಜ್ಞಾನವನ್ನು ತಿಳಿಸುತ್ತದೆ. ಇಂದು ವೃಶ್ಚಿಕ ರಾಶಿಯ ಸುಂದರ ನಕ್ಷತ್ರ ಜ್ಯೇಷ್ಠ, ಅಂಟಾರಸ್‌ನ ಪಕ್ಕದಲ್ಲಿ ಚಂದ್ರ ಉದಯಿಸುತ್ತದೆ. ಹಾಗಾಗಿ ಈ ತಿಂಗಳಿನ ಹೆಸರು ಜ್ಯೇಷ್ಠ ಮಾಸ.
ಅದೇನು ಕಾಕತಾಳೀಯವೋ, ಸತ್ಯ ದರ್ಶನವೋ ತಿಳಿಯದು. ನಮ್ಮ ಭಾರತೀಯ ಪೂರ್ವಿಕರು 27 ನಕ್ಷತ್ರಗಳಲ್ಲಿ ಈ ಅಂಟಾರಸ್ ಅನ್ನು ಜ್ಯೇಷ್ಠ ಎಂದು ನಾಮಕರಣ ಅದು ಹೇಗೆ ಮಾಡಿದರೋ ತಿಳಿಯದು. ಜ್ಯೇಷ್ಠ ಅಂದರೆ ಹಿರಿದು, ದೊಡ್ಡದು ಎಂದರ್ಥ.
ಇಂದಿನ ಖಗೋಳ ವಿಜ್ಞಾನವೂ ಈಗ ಬರಿಗಣ್ಣಿಗೆ ಕಾಣುವ ನಕ್ಷತ್ರಗಳಲ್ಲಿ ಈ ಅಂಟಾರಸ್ ತುಂಬಾ ದೊಡ್ಡದೆಂದು ಸಾರಿದ್ದಾರೆ. ಈ ನಕ್ಷತ್ರ ನಮ್ಮ ಸೂರ್ಯನ ವ್ಯಾಸಕ್ಕಿಂತ ಸುಮಾರು 700 ಪಟ್ಟು ದೊಡ್ಡದು. ಹಾಗಾಗಿ ಸೂರ್ಯನಿಗಿಂತ ಕೋಟಿ ಕೋಟಿ ಪಟ್ಟು ದೊಡ್ಡದು.
ಭೂಮಿಗೆ ಚಂದ್ರ ಹತ್ತಿರ ಬಂದಾಗಲೆಲ್ಲಾ ಸಮುದ್ರದ ಭರತ ಇಳಿತಗಳ ಅಬ್ಬರ ಜೋರು. ಇದೀಗ ಮುಂಗಾರೂ ಅಬ್ಬರಿಸುವ ಸೂಚನೆ. ಇದರೊಂದಿಗೆ ಹುಣ್ಣಿಮೆ ಹಾಗೂ ಸೂಪರ್‌ಮೂನ್‌ಗಳಿಂದ ಸಮುದ್ರದ ತೆರೆಗಳ ನರ್ತನ ಈ ದಿನ ಜೋರಿರಬಹುದು. ಎಲ್ಲೆಲ್ಲೂ ಪ್ರಕೃತಿಯ ನರ್ತನವೇ. ನಾವು ಪ್ರೇಕ್ಷಕರು ಮಾತ್ರ.
– ಡಾ| ಎ. ಪಿ. ಭಟ್ ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.