ಬಾಲ ಕಾರ್ಮಿಕ ಪದ್ಧತಿ ತಡೆಗೆ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ; ಜಾಗೃತಿ ಜಾಥಾಕ್ಕೆ ಚಾಲನೆ

Team Udayavani, Jun 14, 2022, 5:01 PM IST

19

ಹಾವೇರಿ: ಬಾಲ ಕಾರ್ಮಿಕತೆ ಒಂದು ಅನಿಷ್ಠ ಪದ್ಧತಿಯಾಗಿದ್ದು, ಬಾಲ ಕಾರ್ಮಿಕ ಪದ್ಧತಿ ತಡೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ನಗರದ ಮುನ್ಸಿಪಲ್‌ ಹೈಸ್ಕೂಲ್‌ನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಡತನ, ಅನಕ್ಷರತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಂಡಿದ್ದಾರೆ. ಮಕ್ಕಳ ಓದು ಹಾಗೂ ಆಟೋಟಕ್ಕೆ ಮುಕ್ತ ವಾತಾವರಣ ಬೇಕು. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ತಂದೆ, ತಾಯಿಯರ ಪಾತ್ರ ಮುಖ್ಯವಾಗಿದೆ ಎಂದರು. ಮಕ್ಕಳ ರಕ್ಷಣೆ ಕೇವಲ ತಂದೆ-ತಾಯಿ ಯರ ಜವಾಬ್ದಾರಿಯಲ್ಲ. ಸರ್ಕಾರ ಸಹ ಮಕ್ಕಳ ರಕ್ಷಣೆಗೆ ಸದಾ ಸಿದ್ಧವಿದೆ. 14 ವರ್ಷದ ಮಕ್ಕಳಿಗೆ ಕಡ್ಡಾಯ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಕೋವಿಡ್‌ನ‌ಲ್ಲಿ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಆರ್ಥಿಕವಾಗಿ ತೊಂದರೆಯಾಗದಂತೆ ಸರ್ಕಾರದಿಂದ ಪ್ರತಿ ತಿಂಗಳು ಧನ ಸಹಾಯ ಮಾಡಲಾಗುತ್ತಿದೆ. ಮಕ್ಕಳು ನಮ್ಮ ಸಂಸ್ಕೃತಿ, ಪರಂಪರೆ ಮುನ್ನಡೆಸಿ ಕೊಂಡು ಹೋಗುವ ಪ್ರಜೆಗಳಾಗಿದ್ದಾರೆ. ನಿಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡುಬಂದಲ್ಲಿ ಉಚಿತ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.

ಪೊಲೀಸ್‌ ಇಲಾಖೆಯ ಎಂ.ಆರ್‌.ಜಾಲಗಾರ ಮಾತನಾಡಿ, 14 ವರ್ಷದ ಮಕ್ಕಳನ್ನು ಯಾವುದೇ ಕೆಲಸಕ್ಕೆ ಸೇರಿಸಿಕೊಳ್ಳುವಂತಿಲ್ಲ. 16ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಮಕ್ಕಳಿಂದ ಅಪಾಯಕಾರಿ ಕೆಲಸ ಮಾಡಿಸುವುದು ಕಾನೂನು ಬಾಹೀರವಾಗಿದ್ದು, 20 ಸಾವಿರ ರೂ. ದಂಡ, 6 ತಿಂಗಳಿಂದ ಎರಡು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ ಕಾರ್ಮಿಕರು ಕಂಡುಬಂದಲ್ಲಿ ಪೊಲೀಸ್‌ ಇಲಾಖೆ ಸಹಾಯವಾಣಿ ಸಂಖ್ಯೆ 112 ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಬಹುದು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್‌ ನ್ಯಾಯವಾದಿ ಪಿ.ಎಂ. ಬೆನ್ನೂರು ಅವರು ಬಾಲ್ಯಾವ್ಯವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ವಿಷಯ ಕುರಿತು ಉಪನ್ಯಾಸ ನೀಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್‌. ಎಚ್‌.ಮಜೀದ್‌ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಸ್ಪಿ ಹನುಮಂತರಾಯ, ಜಿಪಂ ಸಿಇಒ ಮಹಮ್ಮದ ರೋಷನ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಕಾರಿ ಜಯಶ್ರೀ ಪಾಟೀಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ಈಶ್ವರ ನಂದಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರು, ಕಾರ್ಮಿಕ ನಿರೀಕ್ಷಕ ರಾದ ಲತಾ ಟಿ.ಎಸ್‌., ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಾಘವೇಂದ್ರ ಶಿರೂರು ಇದ್ದರು.

ಪಾಲಕರು ತಮ್ಮ ಬಡತನದ ಸಮಸ್ಯೆಗೆ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡಿದಲ್ಲಿ ಆ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗುತ್ತಾರೆ. ಸರ್ಕಾರದ ಸೌಲಭ್ಯಗಳನ್ನು ಪಡೆದು ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಬೇಕು. ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿದಲ್ಲಿ ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಡೆಯಬಹುದು. –ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.