ಜೂನ್18 ರಿಂದ ವಿದ್ಯುತ್ ಅದಾಲತ್ ಆರಂಭ : ಮತ್ತೊಂದು ಜನಪರ ಯೋಜನೆ
ಮೂರನೇ ಶನಿವಾರ ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ನಡೆಸುವ ವಿದ್ಯುತ್ ಅದಾಲತ್
Team Udayavani, Jun 14, 2022, 5:32 PM IST
ಬೆಂಗಳೂರು : ಗ್ರಾಮೀಣ ವಿದ್ಯುತ್ ಸಮಸ್ಯೆಗಳ ತಕ್ಷಣ ಪರಿಹಾರಕ್ಕೆ ಇಂಧನ ಇಲಾಖೆ ಮುಂದಾಗಿದ್ದು, ಪ್ರತಿ ತಿಂಗಳು ಮೂರನೇ ಶನಿವಾರ ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ನಡೆಸುವ ವಿದ್ಯುತ್ ಅದಾಲತ್ ಗೆ ಜೂನ್ 18 ರಿಂದ ಚಾಲನೆ ಸಿಗಲಿದೆ.
ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಲ್ಪಿಸುವುದಕ್ಕಾಗಿ ರಾಜ್ಯ ಸರಕಾರ ಜಾರಿಗೆ ತರುತ್ತಿರುವ ಮಹತ್ವಾಕಾಂಕ್ಷೆಯ ಜನಸ್ನೇಹಿ ಯೋಜನೆಗಳಲ್ಲಿ ಇದು ಒಂದಾಗಿದೆ. ಆಯಾ ತಾಲೂಕು ವ್ಯಾಪ್ತಿಯ ಕಾರ್ಯಪಾಲಕ ಎಂಜಿನಿಯರ್ ಗಳು ಹಾಗೂ ಅಧಿಕಾರಿಗಳು ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
ರಾಜ್ಯಾದ್ಯಂತ ನಡೆಯುವ ಈ ಅದಾಲತ್ ಗೆ ಎಲ್ಲ ಎಸ್ಕಾಂ ವ್ಯಾಪ್ತಿಯ ಸುಮಾರು 600 ಸ್ಥಳಗಳಲ್ಲಿ ಅದಾಲತ್ ಆಯೋಜಿಸಲಾಗುತ್ತದೆ. ಅಲ್ಲಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಜನಸ್ನೇಹಿ ಅಭಿಯಾನ
ಸರಕಾರಿ ಯೋಜನೆಗಳು ಜನರಿಗೆ ತ್ವರಿತವಾಗಿ ತಲುಪಬೇಕು ಹಾಗೂ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂಬ ಉದ್ದೇಶದಿಂದ ಎಲ್ಲ ಇಲಾಖೆಗಳಲ್ಲೂ ಜನಸ್ನೇಹಿ ಕಾರ್ಯಕ್ರಮಗಳ ಜಾರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಇಂಧನ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಎರಡನೇ ಕಾರ್ಯಕ್ರಮ ಇದಾಗಿದೆ. ಕಳೆದ ತಿಂಗಳು ನಡೆಸಿದ ಟ್ರಾನ್ಸಫಾರ್ಮ್ ದುರಸ್ತಿ ಅಭಿಯಾನದಲ್ಲಿ ಎರಡು ಲಕ್ಷಕ್ಕೂ ಮೇಲ್ಪಟ್ಟು ಟಿಸಿ ನಿರ್ವಹಣೆ ಮಾಡಲಾಗಿದೆ. ಈಗ ವಿದ್ಯುತ್ ಅದಾಲತ್ ಮೂಲಕ ಗ್ರಾಮೀಣ ವಿದ್ಯುತ್ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಜೂನ್ 5 ರಂದೇ ಆದೇಶ
ಈ ಬಗ್ಗೆ ಜೂನ್ 5 ರಂದೇ ಇಂಧನ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ಪ್ರತಿ ತಿಂಗಳ 3ನೇ ಶನಿವಾರ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸಹಾಯಕ ಕಾರ್ಯಪಾಲಕ ಇಂಜಿನಿಯರ್ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದು ಸೂಚಿಸಿದ್ದಾರೆ.
ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ 3ನೇ ಸೋಮವಾರ ತಪ್ಪದೇ emg 1 [email protected] ಇ-ಮೇಲ್ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.