ಭಕ್ತಿ ಮಾರ್ಗದಲ್ಲಿ ದೇವರ ಕಾಣಲು ಸಾಧ್ಯ: ರಾಷ್ಟ್ರಪತಿ ರಾಮನಾಥ ಕೋವಿಂದ್
ಶ್ರೀ ರಾಜಾಧಿರಾಜ ಗೋವಿಂದ ಮಂದಿರ ಲೋಕಾರ್ಪಣೆ
Team Udayavani, Jun 14, 2022, 11:52 PM IST
ಬೆಂಗಳೂರು: ಗುರಿಯನ್ನು ಸಾಧಿಸಲು ಹಲವು ಮಾರ್ಗಗಳಿವೆ. ಅಂತೆಯೇ ನಾವು ಜ್ಞಾನ, ಕರ್ಮ, ಭಕ್ತಿ ಮಾರ್ಗದ ಮೂಲಕ ಪರಮಾತ್ಮನನ್ನು ಕಾಣಲು ಸಾಧ್ಯ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ತಿಳಿಸಿದರು.
ಕನಕಪುರ ರಸ್ತೆಯ ವಸಂತಪುರ ಕ್ಷೇತ್ರದಲ್ಲಿ ಶ್ರೀಲ ಪ್ರಭುಪಾದರ 125ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ರಾಜಾಧಿರಾಜ ಗೋವಿಂದ ಮಂದಿರ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು, ಶಂಕರಾಚಾರ್ಯ, ರಾಮಾನುಜಾ ಚಾರ್ಯ, ಮಧ್ವಾಚಾರ್ಯರು, ಶ್ರೀ ಚೈತನ್ಯ ಮಹಾಪ್ರಭುಗಳಂತ ಶ್ರೇಷ್ಠ ಆಧ್ಯಾತ್ಮಿಕ ನಾಯಕರು. ವಿವಿಧ ಮಾರ್ಗಗಳ ಮೂಲಕ ಭಗವಂತನನ್ನು ತೋರಿಸಿಕೊಟ್ಟವರು.
ಅಂತೆಯೇ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರು ಸಹ ಇದೇ ಮನೋ ಭಾವವನ್ನು ಹೊಂದಿದ್ದರು. ಇದನ್ನೇ ಪ್ರತಿಪಾದಿಸಿದ್ದಾರೆ ಎಂದು ಹೇಳಿದರು.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾತನಾಡಿ, ರಾಜಾಧಿ ರಾಜ ಗೋವಿಂದ ದೇವಸ್ಥಾನ ಮತ್ತು ಸಾಂಸ್ಕೃತಿಕ ಸಂಕೀರ್ಣವು ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆಗೆ ಅನುಕೂಲವಾಗಲಿ ಎಂದರು.
ಮಂದಿರದಲ್ಲಿ ರಾಜಾಧಿರಾಜ ಗೋವಿಂದ ಮುಖ್ಯ ದೇವರ, ಜತೆಗೆ ಮಹಾಲಕ್ಷ್ಮೀ, ಲಕ್ಷ್ಮೀ ನರಸಿಂಹ, ಸುದರ್ಶನ ನರಸಿಂಹ ದೇವರು ಹಾಗೂ ಇಸ್ಕಾನ್ ಸಂಸ್ಥಾಪಕ ಶ್ರೀಲ ಭಕ್ತಿ ವೇದಾಂತ ಪ್ರಭು ಪಾದರ ಮೂರ್ತಿಗೆ ನಮಿಸಿದರು. ರಾಷ್ಟ್ರಪತಿ ಅವರ ಪತ್ನಿ ಸವಿತಾ ಕೋವಿಂದ್, ಪುತ್ರಿ ಸ್ವಾತಿ ಕೋವಿಂದ್, ಇಸ್ಕಾನ್ ಅಧ್ಯಕ್ಷ ಮಧು ಪಂಡಿತ್ ದಾಸ್ ಹಾಗೂ ಇತರರಿದ್ದರು.
ಆ. 1ರಿಂದ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ
ಬೆಂಗಳೂರು: ರಾಜಾಧಿರಾಜ ಗೋವಿಂದ ಮಂದಿರದ ವಿಗ್ರಹಗಳ ಪ್ರತಿಷ್ಠಾಪನೆಗೊಂಡು ಲೋಕಾರ್ಪಣೆಗೊಂಡಿದೆ. ಮಂಡಲ ಪೂಜೆ ಪೂರ್ಣಗೊಂಡ ಅನಂತರ ಆ. 1ರಿಂದ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಇಸ್ಕಾನ್ ಉಪಾಧ್ಯಕ್ಷ ಚಲಪತಿ ದಾಸ್ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಣಪ್ರತಿಷ್ಠಾಪನೆಯಾದ 48 ದಿನಗಳ ವಿಗ್ರಹಕ್ಕೆ ವಿಧಿ-ವಿಧಾನಗಳಂತೆ ಪ್ರತಿದಿನ ಮಂಡಲ ಪೂಜೆಯು ನಡೆಯಲಿದೆ. ಆ ಸಮಯದಲ್ಲಿ ಸಾರ್ವಜನಿಕರಿಗೆ ಪ್ರವೇಶಿವಿಲ್ಲ. ಅನಂತರ ದಿನದಲ್ಲಿ ಉಚಿತ ಪ್ರವೇಶ ಇರಲಿದ್ದು, ಬೆಳಗ್ಗೆ ಮತ್ತು ಸಂಜೆ ಎರಡು ಪಾಳಿಯಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶವಿರಲಿದೆ ಎಂದರು.
ದೇಗುಲದ ವಿಶೇಷತೆಗಳು
ದೇಗುಲವು ಸುಮಾರು 28 ಎಕರೆ ಪ್ರದೇಶದಲ್ಲಿ 105 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಇದು ಟಿಟಿಡಿ ಶ್ರೀ ವೆಂಕಟೇಶ್ವರ ದೇಗುಲದ ಪ್ರತಿರೂಪವಾಗಿದೆ. ಶ್ರೀನಿವಾಸ ಶಿಲಾ ವಿಗ್ರಹವೂ ತಿರುಮಲೆಯ ವೆಂಕಟೇಶ್ವರ ದೇವರ ಎತ್ತರಕ್ಕಿಂತ 1 ಸೆಂ.ಮೀ. ಕಡಿಮೆ ಮಾಡಲಾಗಿದೆ. ಜತೆಗೆ ದೇಗುಲದ ಹೊರಾಂಗಣ ವಿನ್ಯಾಸ ತಿರುಪತಿಯನ್ನು ಸಂಪೂರ್ಣವಾಗಿ ಹೋಲುತ್ತದೆ. 2ನೇ ಹಂತದಲ್ಲಿ ದೇವಸ್ಥಾನದ ಹಿಂಬದಿಯಲ್ಲಿ 700 ಅಡಿ ಎತ್ತರದ 70 ಅಂತಸ್ತಿನ ಬೃಹತ್ ಕಟ್ಟಡದಲ್ಲಿ ರಾಧಾಕೃಷ್ಣ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇಲ್ಲಿ ರಾಧಾಕೃಷ್ಣರ ಜೀವನ ಚರಿತ್ರೆ ಒಳಗೊಂಡ ಕಲಾಕೃತಿಗಳು ಇರಲಿವೆ. ಟವರ್ ಕೊನೆ ಮಹಡಿಯಲ್ಲಿ ರಾಧಾಕೃಷ್ಣರ ದೇಗುಲವಿರಲಿದೆ. ಈ ಟವರ್ ಬೆಂಗಳೂರಿನ ಅತೀ ಎತ್ತರ ಕಟ್ಟಡವಾಗಲಿದೆ.
ಭಕ್ತಿ ಮಾರ್ಗ ವಿಶ್ವಕ್ಕೆ ಭಾರತ ನೀಡಿದ ಅನನ್ಯ ಕೊಡುಗೆ ದೊರಕಿದೆ. ಅದರ ಸಾರವೇ ನಮ್ಮೆಲ್ಲರ ಅಂತರಂಗ ಹಾಗೂ ಸರ್ವ ಸಮಾಜದ ಅಭಿವೃದ್ಧಿ. ಸರಕಾರವು ಇಸ್ಕಾನ್ ಬೆಂಗಳೂರಿನ ಎಲ್ಲ ಜನಹಿತ ಯೋಜನೆಗಳಲ್ಲಿ ಯಾವಾಗಲೂ ಬೆಂಬಲವಾಗಿ ನಿಂತಿದೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ಪ್ರೋತ್ಸಾಹವನ್ನು ಮುಂದುವರಿಸುತ್ತೇವೆ.
– ಬಸವರಾಜ ಬೊಮ್ಮಾಯಿ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.