ಯೋಗ ಕಾರ್ಯಕ್ರಮಕ್ಕೆ 12 ಸಾವಿರ ನೋಂದಣಿ: ಸಚಿವ ಸೋಮಶೇಖರ್
Team Udayavani, Jun 14, 2022, 11:56 PM IST
ಮೈಸೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇದಕ್ಕಾಗಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಮಂಗಳವಾರ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಯೋಗ ದಿನಾಚರಣೆ ಕಾರ್ಯಕ್ರಮದ ಉನ್ನತ ಸಮಿತಿಗೆ ನಾನು ಅಧ್ಯಕ್ಷನಾದರೆ ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಉಪಾಧ್ಯಕ್ಷರಾಗಿದ್ದಾರೆ. ಉಳಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಸಮಿತಿಯಲ್ಲಿದ್ದಾರೆ ಎಂದು ಹೇಳಿದರು.
ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ 15 ಸಾವಿರ ಮಂದಿಗೆ ಅವಕಾಶ ನೀಡುತ್ತಿದ್ದು, ಈ ಪೈಕಿ ರಾಜ್ಯ ಸರಕಾರದಿಂದ 12 ಸಾವಿರ, ಉಳಿದ 3 ಸಾವಿರ ಮಂದಿ ಕೇಂದ್ರ ಸರಕಾರದಿಂದ ಪ್ರತಿನಿಧಿಸುತ್ತಿದ್ದಾರೆ ಎಂದರು.
2 ಡೋಸ್ ಕಡ್ಡಾಯ
ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ ಯೋಗ ದಿನಾಚರಣೆಗೆ ತಾಂತ್ರಿಕ ಸಲಹಾ ಸಮಿತಿಯಿಂದ ಒಪ್ಪಿಗೆ ಸಿಕ್ಕಿದೆ. ಮುಂಜಾಗ್ರತ ಕ್ರಮವಾಗಿ ಯೋಗದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಇಲ್ಲವಾದಲ್ಲಿ 72 ಗಂಟೆಗಳ ಆರ್‌ಟಿಪಿಸಿಆರ್ ವರದಿ ತರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.