ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ
Team Udayavani, Jun 15, 2022, 12:58 AM IST
ಉಡುಪಿ : ಕೃಷಿ ಇಲಾಖೆ ಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ.
ರೈತರು ಗೂಗಲ್ ಪ್ಲೇಸ್ಟೋರ್ನಿಂದ Kharif Farmer Crop Survey 2022 - 23 ಆ್ಯಪ್ನ್ನು ಡೌನ್ಲೋಡ್ ಮಾಡಿಕೊಂಡು ಆರ್ಥಿಕ ವರ್ಷ ಹಾಗೂ ಋತುವನ್ನು ಅನಂತರ ಆಧಾರ್ನಲ್ಲಿರುವಂತೆ ಮಾಹಿತಿ ದಾಖಲಿಸಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿ ಸುವುದರಿಂದ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದೆ. ಒಟಿಪಿಯನ್ನು ದಾಖಲಿಸಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್, ಹಿಸ್ಸಾ, ಮಾಲಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೇ ನಂಬರ್ಗಳಡಿ ರೇಖೆಯೊಳಗೆ ನಿಂತು ವಿವರ ದಾಖಲಿಸಿ, ಫೋಟೋ ತೆಗೆದು ಮಾಹಿತಿಯನ್ನು ಅಪ್ಲೋಡ್ ಮಾಡಬೇಕು.
ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ.
ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪ ದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರಕಾರದಿಂದ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್ನಲ್ಲಿ ತಮ್ಮ ಜಮೀನಿನ ಸರ್ವೇ ನಂಬರ್ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ, ಮುಂಗಾರು ಬೆಳೆ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.