ಮರಳಿದ ಕುಶ: ದುಬಾರೆಯಲ್ಲಿ ಹರ್ಷ


Team Udayavani, Jun 15, 2022, 1:18 AM IST

ಮರಳಿದ ಕುಶ: ದುಬಾರೆಯಲ್ಲಿ ಹರ್ಷ

ಮಡಿಕೇರಿ: ಕೃಷಿಕರಿಗೆ ಉಪಟಳ ನೀಡಿದ ಕಾರಣಕ್ಕೆ ಸೆರೆಯಾಗಿ ಕುಶನಾಗಿ ಮಾರ್ಪಟ್ಟು ಅನಂತರ ಪರಿಸರವಾದಿಗಳ ಒತ್ತಾಯಕ್ಕೆ ಮಣಿದು ಕಾಡು ಸೇರಿದ್ದ ಕಾಡಾನೆ ಮತ್ತೆ ಮರಳಿದೆ.

2018ರಲ್ಲಿ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ಕೃಷಿಕರಿಗೆ ತೊಂದ‌ರೆ ನೀಡುತ್ತಿದ್ದ ಕಾಡಾನೆಯನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರದಲ್ಲಿ ಪಳಗಿಸಿ ಕುಶ ಎಂದು ಹೆಸರಿಡ ಲಾಗಿತ್ತು. 2019ರಲ್ಲಿ ಮದವೇರಿದ ಕುಶ ಶಿಬಿರದಿಂದ ತಪ್ಪಿಸಿಕೊಂಡು ಅರಣ್ಯದೊಳಗೆ ಸೇರಿಕೊಂಡಿತ್ತು. ವರ್ಷ ಉರುಳಿದರೂ ಶಿಬಿರಕ್ಕೆ ಕಾಲಿಡಲಿಲ್ಲ.

ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿ ತಂಡೋಪತಂಡವಾಗಿ ಹುಡು ಕಾಡಿ ದಾಗ ಕಾಡಾನೆಗಳ ಹಿಂಡಿನಲ್ಲಿ ಕುಶ ಕಂಡು ಬಂದಿತ್ತು. ಅರಣ್ಯ ಸಿಬಂದಿ ಹರಸಾಹಸ ಪಟ್ಟು ಕುಶನನ್ನು ಮರಳಿ ಸೆರೆ ಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.

ಆದರೆ ರಾಷ್ಟ್ರೀಯ ಪರಿಸರವಾದಿಗಳು ವನ್ಯಜೀವಿ ಪ್ರೇಮದ ಕಾರಣ ನೀಡಿ ಮತ್ತು ಪಳಗಿಸುವ ಸಂದರ್ಭ ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಕುಶನನ್ನು ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಬೇಕೆಂದು ಕಾನೂನಾತ್ಮಕ ಹೋರಾಟ ನಡೆಸಿ ಜಯಶಾಲಿಗಳಾಗಿದ್ದರು. ಅನಿವಾರ್ಯವಾಗಿ ಅರಣ್ಯ ಇಲಾಖೆ ಸಾಕಾನೆ ಕುಶನನ್ನು 2021 ಜೂನ್‌ ತಿಂಗಳಿನಲ್ಲಿ ಬಂಡೀಪುರ ಅರಣ್ಯಕ್ಕೆ ಬಿಟ್ಟು ಬಂದಿತ್ತು.

ಇದೀಗ 1 ವರ್ಷದ ಬಳಿಕ ಕುಶ ಮತ್ತೆ ದುಬಾರೆ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದಾನೆ. ಆತನಿಗೆ ಅಳವಡಿಸಿದ್ದ ರೇಡಿಯೋ ಕಾಲರ್‌ ನೀಡಿದ ಮಾಹಿತಿಯಾಧರಿಸಿ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದಾಗ ದುಬಾರೆ ಸಾಕಾನೆ ಶಿಬಿರದ ಸಮೀಪವೇ ಕುಶ 4ಕಾಡಾನೆ ಸಂಗಾತಿಗಳೊಂದಿಗೆ ಸ್ವತ್ಛಂದವಾಗಿರುವುದು ಕಂಡು ಬಂದಿದೆ.

ತಾನು ಪಳಗಿದ ಸಾಕಾನೆ ಶಿಬಿರದ ಮೇಲಿನ ಅಭಿಮಾನ ದಿಂದ ಸಾವಿರಾರು ಕಿ.ಮೀ. ದೂರ ಕ್ರಮಿಸಿ ಮತ್ತೆ ಕುಶ ದುಬಾರೆಗೆ ಮರಳಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ವಿಶ್ಲೇಷಿಸಿದ್ದಾರೆ. ಸುತ್ತಮುತ್ತಲ ಪ್ರಾಣಿ ಪ್ರಿಯರು ಕುಶನನ್ನು ಕಂಡು ಹರ್ಷಗೊಂಡಿದ್ದಾರೆ.

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.