ಚೇತರಿಕೆಯತ್ತ ಮಂಗಳೂರು ಚಾಲಿ ಅಡಿಕೆ ಧಾರಣೆ: ಆಮದು ಸುಂಕ ಹೆಚ್ಚಳಕ್ಕೆ ಬೆಳೆಗಾರರ ಆಗ್ರಹ
Team Udayavani, Jun 16, 2022, 7:30 AM IST
ಪುತ್ತೂರು: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದ ಹೊಸ ಅಡಿಕೆ ಧಾರಣೆಯಲ್ಲಿ ಕೊಂಚ ಚೇತರಿಕೆಯ ಲಕ್ಷಣ ಕಂಡು ಬಂದಿದೆ.
ಅಡಿಕೆ ಸುಲಿದು ಮಾರಾಟ ಮಾಡುವ ಸಂದರ್ಭದಲ್ಲಿ ಏಕಾಏಕಿ ಧಾರಣೆ ಕುಸಿತ ಆಗಿರುವುದರಿಂದ ಬೆಳೆಗಾರರಿಗೆ ನಷ್ಟದ ಭೀತಿ ಉಂಟಾಗಿತ್ತು. ಆದರೆ ಇದೀಗ ಧಾರಣೆ ಏರಿಕೆಯತ್ತ ಮುಖ ಮಾಡಿದ್ದು ಇನ್ನಷ್ಟು ಹೆಚ್ಚಳದ ನಿರೀಕ್ಷೆ ಮೂಡಿಸಿದೆ.
ಏರಿಳಿತದ ನೋಟ
ಹೊರ ಮಾರುಕಟ್ಟೆಯಲ್ಲಿ ಮೇಯಲ್ಲಿ 435-440 ರೂ. ತನಕ ಇದ್ದ ಧಾರಣೆ ಜೂನ್ ಮೊದಲ ವಾರದಲ್ಲಿ 400 ರೂ.ಗಿಂತ ಕೆಳಗೆ ಇಳಿದಿತ್ತು. ಅಂದರೆ 40 ರೂಗಳಷ್ಟು ಇಳಿಕೆ ಕಂಡಿತ್ತು. ಜೂ. 14ರಂದು ಹೊಸ ಅಡಿಕೆ ಧಾರಣೆ 410 ರೂ. ಇದ್ದರೆ, ಜೂ. 15ರಂದು 415 ರೂ. ತನಕ ಏರಿಕೆ ಕಂಡಿದೆ. ಹಳೆ ಅಡಿಕೆ ಧಾರಣೆಯು ಇಳಿಕೆ ಕಾಣದೆ ಮೊದಲಿನಂತೆ ಸ್ಥಿರವಾಗಿತ್ತು.
ಸುಂಕ ಹೆಚ್ಚಳಕ್ಕೆ ಆಗ್ರಹ
ಶ್ರೀಲಂಕಾ, ಮ್ಯಾನ್ಮಾರ್, ಬರ್ಮ ಮತ್ತಿತರ ದೇಶಗಳಿಂದ ಅಡಿಕೆ ಆಮದಾಗುವ ಕಾರಣ ಮಂಗಳೂರು ಚಾಲಿ ಅಡಿಕೆಗೆ ಬೇಡಿಕೆ ಕಡಿಮೆ ಆಗಿರುವುದು ದರ ಕುಸಿಯಲು ಕಾರಣ, ಆದುದರಿಂದ ಕೇಂದ್ರ ಸರಕಾರ ಆಮದು ಸುಂಕ ಹೆಚ್ಚಿಸಿ ವಿದೇಶದಿಂದ ಅಡಿಕೆ ಬರುವುದಕ್ಕೆ ಕಡಿವಾಣ ಹಾಕಿದರೆ ಅಡಿಕೆಗೆ ಬೇಡಿಕೆ ಹೆಚ್ಚಳಗೊಂಡು ಧಾರಣೆ 450 ರೂ. ದಾಟಬಹುದು ಎನ್ನುತ್ತಾರೆ ಹೊರ ಮಾರುಕಟ್ಟೆಯ ವರ್ತಕರು.
ಬೇಡಿಕೆಗೆ ತಕ್ಕಷ್ಟು ಪೂರೈಕೆ ಆಗದಿರುವ ಕಾರಣ ಉತ್ತರ ಭಾರತದ ವ್ಯಾಪಾರಿಗಳು ಕರಾವಳಿ ಮಾರುಕಟ್ಟೆಯನ್ನೇ ನೆಚ್ಚಿಕೊಂಡಿದ್ದಾರೆ. ಉತ್ತರ ಭಾರತದಲ್ಲಿ ಅತೀ ಹೆಚ್ಚು ಉಷ್ಣತೆ ಇರುವುದರಿಂದ ಕರಾವಳಿ ಭಾಗದ ಅಡಿಕೆಯ ಬೇಡಿಕೆಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಸಮಸ್ಯೆ ಪರಿಹಾರದ ನಿರೀಕ್ಷೆಯಿದೆ ಎನ್ನುವುದು ಕ್ಯಾಂಪ್ಕೋ ಸಂಸ್ಥೆ ನೀಡುವ ಉತ್ತರ.
ಕ್ಯಾಂಪ್ಕೋ ಧಾರಣೆ ಪಟ್ಟಿಯಲ್ಲಿ ವ್ಯತ್ಯಾಸ
ಕ್ಯಾಂಪ್ಕೋ ಸಂಸ್ಥೆಯು ಪ್ರತೀ ದಿನ ನೀಡುವ ಅಡಿಕೆ ಧಾರಣೆ ಪಟ್ಟಿಗೂ ಅಡಿಕೆ ಖರೀದಿ ವೇಳೆ ಬೆಳೆಗಾರರಿಗೆ ನೀಡುತ್ತಿರುವ ಧಾರಣೆಗೆ ಅಜಗಜಾಂತರ ಇದೆ ಅನ್ನುತ್ತಾರೆ ಬೆಳೆಗಾರರು. ಹೊರ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ 400-410 ರೂ. ಆಸುಪಾಸಿನಲ್ಲಿದೆ. ಅದಾಗ್ಯೂ ಕ್ಯಾಂಪ್ಕೋ ನೀಡುವ ಮಾರುಕಟ್ಟೆ ಧಾರಣೆಯ ಪ್ರಕಾರ ಜೂ. 15ರಂದು ಹೊಸ ಅಡಿಕೆಗೆ 375 ರಿಂದ 450 ರೂ. ಎಂದಿದೆ.
ಕಳೆದ ಒಂದು ವಾರದಿಂದಲು ಪಟ್ಟಿಯಲ್ಲಿ ಇದೇ ಧಾರಣೆ ಇದೆ. ಆದರೆ ಬೆಳೆಗಾರರು ಕ್ಯಾಂಪ್ಕೋದಲ್ಲಿ ಅಡಿಕೆ ಮಾರಾಟ ಮಾಡಿದರೆ 410 ರೂ.ಗಿಂತ ಹೆಚ್ಚು ದೊರೆಯುತ್ತಿಲ್ಲ ಎಂಬ ದೂರು ಬೆಳೆಗಾರರಿಂದ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.