![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jun 16, 2022, 12:43 PM IST
ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ಅಭಿನಯದ ಚೊಚ್ಚಲ ಸಿನಿಮಾ “ತ್ರಿವಿಕ್ರಮ’ ಇದೇ ಜೂನ್ 24ರಂದು ಬಿಡುಗಡೆಯಾಗಲಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ಬಿಝಿಯಾಗಿರುವ ಚಿತ್ರತಂಡ, ಬ್ಯಾಕ್ ಟು ಬ್ಯಾಕ್ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಸಿನಿಪ್ರಿಯರ ಗಮನ ಸೆಳೆಯುವ ಕಸರತ್ತು ಮಾಡುತ್ತಿದೆ.
ಈಗಾಗಲೇ ಬಿಡುಗಡೆಯಾಗಿರುವ “ಮಮ್ಮಿ ಪ್ಲೀಸ್ ಮಮ್ಮಿ…’ ಹಾಗೂ “ಹನಿ ಬನಿ ಫೀಲ್ ಮೈ ಲವ್…’ ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಸೌಂಡ್ ಮಾಡುತ್ತಿರುವಂತೆಯೇ, “ತ್ರಿವಿಕ್ರಮ’ ಚಿತ್ರತಂಡ, ಇದೀಗ “ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್…’ ಎಂಬ ಮತ್ತೂಂದು ಹಾಡನ್ನು ಬಿಡುಗಡೆ ಮಾಡಿದೆ. ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ ಈ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದು, ಮೋಹನ್ ಬಿ. ಕೆರೆ ಸ್ಟೂಡಿಯೋದಲ್ಲಿ ಹಾಕಲಾಗಿದ್ದ ಬೃಹತ್ ಕಲರ್‌ಫುಲ್ ಸೆಟ್‌ನಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಭೂಷಣ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ವಿಕ್ರಮ್ ಹಾಗೂ ಆಕಾಂಕ್ಷಾ ಶರ್ಮಾ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ.
ಇದನ್ನೂ ಓದಿ:ವಾಮನ ಅಖಾಡಕ್ಕೆ ಸಂಪತ್ ಎಂಟ್ರಿ: ಧನ್ವೀರ್ ಜೊತೆ ಗುದ್ದಾಟಕ್ಕೆ ಖಡಕ್ ವಿಲನ್
ಈ ಹಿಂದೆ “ರೋಸ್’, “ಮಾಸ್ ಲೀಡರ್’ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಹನಾ ಮೂರ್ತಿ “ತ್ರಿವಿಕ್ರಮ’ನಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. “ಸೋಮಣ್ಣ ಟಾಕೀಸ್’ ಬ್ಯಾನರ್‌ನಲ್ಲಿ ರಾಮ್ಕೋ ಸೋಮಣ್ಣ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.
ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು “ತ್ರಿವಿಕ್ರಮ’ನ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಿರುವ “ತ್ರಿವಿಕ್ರಮ’ನ ಹಾಡು ಸಿನಿಪ್ರಿಯರ ಗಮನ ಸೆಳೆಯುತ್ತಿದ್ದು, ಸಿನಿಮಾ ಹೇಗಿದೆ ಎಂಬ ಕುತೂಹಲಕ್ಕೆ ಮುಂದಿನ ವಾರ ಉತ್ತರ ಸಿಗಲಿದೆ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.