ಜೂ. 18: ಆಲಂಕಾರು, ಪೇತ್ರಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ
Team Udayavani, Jun 17, 2022, 6:06 AM IST
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜೂ. 18ರಂದು ಕಡಬ ತಾಲೂಕಿನ ಆಲಂಕಾರು ಗ್ರಾಮದ (ದೀನ್ ದಯಾಳು, ರೈತ ಸಭಾಭವನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ)ಲ್ಲಿ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲುಗಳನ್ನು ನೀಡಲು ಬಯಸಿದ್ದಲ್ಲಿ, ಆಲಂಕಾರು ಗ್ರಾಮ ಪಂಚಾಯತ್‌ಗೆ ನೀಡಬಹುದು.
ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳದಲ್ಲಿ ಬಗೆಹರಿಯದ ಸಮಸ್ಯೆಯಾಗಿದ್ದಲ್ಲಿ ಮುಂದಿನ ಸೂಕ್ತ ದಿನವನ್ನು ನಿರ್ಧರಿಸಿ ಅದೇ ಗ್ರಾಮದಲ್ಲಿ ಮತ್ತೂಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲನೆ ಮಾಡುವಂತೆ ಅಪರ ಜಿಲ್ಲಾದಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಪೇತ್ರಿಯ ಯುವಕ ಮಂಡಲದ ವಠಾರದಲ್ಲಿ ಬೆಳಗ್ಗೆ 10ಕ್ಕೆ ಉಡುಪಿ ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗ್ರಾಮದ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಮುಂಚಿತವಾಗಿ ಚೇರ್ಕಾಡಿ ಗ್ರಾಮದ ಗ್ರಾಮಕರಣಿಕರ ಕಚೇರಿಯಲ್ಲಿ ನೀಡುವಂತೆ ಪ್ರಕಟನೆ ತಿಳಿಸಿದೆ.
ಚೆಟ್ಟಳ್ಳಿಯಲ್ಲಿ ಕೊಡಗು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ :
ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಜೂ. 18ರಂದು ಬೆಳಗ್ಗೆ 10 ಗಂಟೆಗೆ ಚೆಟ್ಟಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.