ಗೋಶಾಲೆ ಶೀಘ್ರ ನಿರ್ಮಿಸಿ: ಉಡುಪಿ ಡಿಸಿ ಸೂಚನೆ
Team Udayavani, Jun 18, 2022, 1:44 AM IST
ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೆ ಮಾದರಿ
ಯಾಗುವ ರೀತಿಯಲ್ಲಿ ಶೀಘ್ರದಲ್ಲಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಬಜೆಟ್‌ನಲ್ಲಿ ಗೋಶಾಲೆಯನ್ನು ಪ್ರಾರಂಭಿಸಲು ಸರಕಾರಿ ಘೋಷಿಸಿ, ಸಾಕಷ್ಟು ಅನುದಾನ ನೀಡಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಅಗತ್ಯವಿರುವ ಭೂಮಿಯನ್ನು ಸಹ ನೀಡಿದೆ.
ಗೋಶಾಲೆಯು ಆಧುನಿಕ ಶೈಲಿ, ರೀತಿಯ ಅಗತ್ಯ ಮೂಲಸೌಕರ್ಯಗಳನ್ನು ಲಭ್ಯವಾಗುವ ಹಾಗೆ ನೀಲಿನಕ್ಷೆಯನ್ನು ತಯಾ ರಿಸಿ ಶೀಘ್ರದಲ್ಲಿಯೇ ಕೆಲಸ ಪ್ರಾರಂಭಿಸ ಬೇಕೆಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಮೀನು ಕಾದಿರಿಸಲಾಗಿದೆ
ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದ ಸರ್ವೇ ನಂ. 79/2ರಲ್ಲಿ 13.24 ಎಕ್ರೆ ಜಮೀನನ್ನು ಹಾಗೂ ಕುಂದಾಪುರದ ಗೋಳಿಹೊಳೆ ಗ್ರಾಮದ ಸರ್ವೆ ನಂ. 279ರಲ್ಲಿ 9.85 ಎಕ್ರೆ ಜಮೀನನ್ನು ಸರಕಾರಿ ಗೋಶಾಲೆ ನಿರ್ಮಿಸಲು ಕಾದಿರಿಸಲಾಗಿದೆ. ಗೋಶಾಲೆಗೆ ತಡೆ ಬೇಲಿ, ಕೆರೆ ನಿರ್ಮಾಣದ ಕಾಮಗಾರಿಗಳನ್ನು ಕೈಗೊಳ್ಳ ಬೇಕೆಂದು ತಿಳಿಸಿದರು.
ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜತೆಗೆ ಅದರ ಸಮ ರ್ಪಕ ಅನುಷ್ಠಾನಗೊಳಿಸಬೇಕು.
ಜಿಲ್ಲೆಯಲ್ಲಿ ಈಗಾಗಲೇ 12 ಗೋಶಾಲೆಯನ್ನು ಖಾಸಗಿ ಸಂಸ್ಥೆ ಗಳು ನಡೆಸುತ್ತಿದ್ದು 2,660ಕ್ಕೂ ಹೆಚ್ಚು ಗೋವು ಗಳು ಆಶ್ರಯ ಪಡೆದಿವೆ. ಜಾನುವಾರುಗಳನ್ನು ರಕ್ಷಣೆ ಮಾಡುವ ರೀತಿಯಲ್ಲಿಯೇ ಇತರ ಪ್ರಾಣಿ ಗಳನ್ನು ರಕ್ಷಿಸಲು ಗೋಶಾಲೆ ಮಾದರಿಯ ಲ್ಲಿಯೇ ಪ್ರಾಣಿ ರಕ್ಷಣೆ ಶೆಲ್ಟರ್‌ಗಳನ್ನು ಪ್ರಾರಂಭಿಸಲು ಪ್ರಾಣಿ ಪ್ರಿಯರು ಹಾಗೂ ಅಧಿಕಾರಿಗಳು ಚಿಂತಿಸಬೇಕು ಎಂದರು.
ಸರಕಾರದಿಂದ ಜಿಲ್ಲಾ ಪ್ರಾಣಿ ದಯಾ ಸಂಘಕ್ಕೆ ಪ್ರಾಣಿಗಳ ಕಲ್ಯಾಣಕ್ಕೆ ಬಿಡುಗಡೆಯಾಗಿರುವ ಅನು ದಾನವನ್ನು ಬಳಕೆ ಮಾಡಿಕೊಳ್ಳು ವುರೊಂದಿಗೆ ಅವುಗಳ ರಕ್ಷಣೆಗೆ ಇರುವ ಕಾಯ್ದೆ ಮತ್ತು ನಿಯಮಗಳ ಬಗ್ಗೆ ಜಾಗೃತಿ ಅಭಿಯಾನಗಳನ್ನು ಪರಿಣಾಕಾರಿಯಾಗಿ ಅನುಷ್ಠಾನ ಗೊಳಿಸುವಂತೆ ಸೂಚಿಸಿದರು.
ಸ್ವಾವಲಂಬಿ ಗೋಶಾಲೆ
ಜಿ.ಪಂ. ಸಿಇಒ ಪ್ರಸನ್ನ ಎಚ್. ಮಾತನಾಡಿ, ಹೆಬ್ರಿಯ ಕೆರೆಬೆಟ್ಟುವಿನ ಗೋಶಾಲೆಗೆ ನೀರಿನ ಸೌಲಭ್ಯ ಕಲ್ಪಿಸಲು ಕೊಳವೆ ಬಾವಿಯನ್ನು ಕೊರೆಸಿದರೂ ನೀರು ದೊರೆತಿಲ್ಲ. ಇಲ್ಲಿಗೆ ಅಗತ್ಯವಿರುವ ನೀರನ್ನು ಜಲ ಜೀವನ್ ಮಿಷನ್ ಯೋಜನೆಯಡಿ ಕಲ್ಪಿಸಲಾಗುವುದು. ಗೋಶಾಲೆಗಳ ನಿರ್ವಹಣೆಗೆ ಸರಕಾರವನ್ನು ಎದುರು ನೋಡದೇ ಅಲ್ಲಿಯೇ ಬರುವ ಉತ್ಪನ್ನಗಳಿಂದ ನಿರ್ವಹಣೆ ಮಾಡುವ ಬಗ್ಗೆ ಯೋಜನೆಗಳನ್ನು ರೂಪಿಸಿ, ಗೋಶಾಲೆಗಳು ಸ್ವಾವಲಂಬಿ ಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.