ಜೂನ್.23ಕ್ಕೆ ಬಿಡುಗಡೆಯಾಗಲಿದೆ ‘ವಿಕ್ರಾಂತ್ ರೋಣ’ ಟ್ರೇಲರ್
Team Udayavani, Jun 18, 2022, 9:36 AM IST
‘ಕೆಜಿಎಫ್ ಚಾಪ್ಟರ್ 2’ ಮತ್ತು ‘777 ಚಾರ್ಲಿ’ ಚಿತ್ರಗಳು ಸೂಪರ್ ಹಿಟ್ ಆದ ಬಳಿಕ ಭಾರತೀಯ ಚಿತ್ರರಂಗ ಎದುರು ನೋಡುತ್ತಿರುವ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ದ ಟ್ರೇಲರ್ ಇದೇ 23ರಂದು ಬಿಡುಗಡೆಯಾಗಲಿದೆ.
ಕಿಚ್ಚ ಸುದೀಪ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಈಗಾಗಲೇ ಹಲವು ಕಾರಣಗಳಿಂದ ದೊಡ್ಡ ಕ್ರೇಜ್ ಹುಟ್ಟುಹಾಕಿದೆ. ಟ್ರೇಲರ್ ಬಿಡುಗಡೆ ದಿನಾಂಕವನ್ನು ಸ್ವತಃ ಕಿಚ್ಚ ಸುದೀಪ್ ಅವರೇ ಟ್ವೀಟ್ ಮಾಡಿದ್ದಾರೆ.
‘ವಿಕ್ರಾಂತ್ ರೋಣ’ ಚಿತ್ರವನ್ನು ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಜ್ಯಾಕ್ ಮಂಜು, ಶಾಲಿನಿ ಮಂಜುನಾಥ್ ನಿರ್ಮಾಣವಿದೆ. ಅಜನೀಶ್ ಬಿ ಲೋಕನಾಥ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ:ಬಹುಭಾಷಾ ನಟಿ Nikhila Vimal ಬ್ಯೂಟಿಫುಲ್ ಫೋಟೋ ಗ್ಯಾಲರಿ
ಈಗಾಗಲೇ ಬಿಡುಗಡೆಯಾಗಿರುವ ರಾ.ರಾ. ರಕ್ಕಮ್ಮ ಹಾಡು ಸಖತ್ ಹಿಟ್ ಆಗಿದೆ. ಹಾಡಿನಲ್ಲಿ ಹೆಜ್ಜೆ ಹಾಕಿರುವ ಕಿಚ್ಚ ಸುದೀಪ್ ಮತ್ತು ಜ್ಯಾಕ್ವೆಲಿನ್ ಫೆರ್ನಾಂಡಿಸ್ ಅವರ ಹುಕ್ ಸ್ಟೆಪ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
‘Once You Enter The Maze, Escape is Not An Option’
Vikrant Rona Official Trailer on 23rd June. Get Ready!!!#VikrantRonaTrailer #VRTrailerOnJune23 @anupsbhandari @JackManjunath @shaliniartss @InvenioF @ZeeStudios_ #VRonJuly28 #VRin3D pic.twitter.com/QPr19w8wni
— Kichcha Sudeepa (@KicchaSudeep) June 17, 2022
ಚಿತ್ರದಲ್ಲಿ ಕಿಚ್ಚ ಸುದೀಪ್ ಜೊತೆಗೆ ನೀತಾ ಅಶೋಕ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್, ಮಧುಸೂಧನ್ ರಾವ್ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಟ್ರೇಲರ್ ಏಕಕಾಲದಲ್ಲಿ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರವು ಜುಲೈ 28ರಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.