ಬೆಂಗಳೂರಿನಲ್ಲಿ ಭಾರಿ ಮಳೆ: ಶಿವಮೊಗ್ಗದ ಇಂಜಿನಿಯರ್ ನೀರು ಪಾಲು
Team Udayavani, Jun 18, 2022, 11:22 AM IST
ಕೆ.ಆರ್.ಪುರ: ನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಯುವಕನೊರ್ವ ನೀರು ಪಾಲಾದ ಘಟನೆ ಕೆ ಆರ್ ಪುರದ ಗಾಯತ್ರಿ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.
ಶಿವಮೊಗ್ಗದ ಸಾಗರದ ಮೂಲದ ಸಿವಿಲ್ ಎಂಜಿನಿಯರ್ ಮಿಥುನ್ (24) ನೀರುಪಾಲಾದ ವ್ಯಕ್ತಿ.
ಸೀಗೆಹಳ್ಳಿ ಕೆರೆ ಸಂಪರ್ಕ ಕಲ್ಪಿಸುವ ಗಾಯತ್ರಿ ಬಡವಾಣೆಯ ರಾಜಕಾಲುವೆಯಲ್ಲಿ ತಡರಾತ್ರಿ ಸುಮಾರು 12 ಗಂಟೆಗೆ ನೀರು ಸಂಪೂರ್ಣವಾಗಿ ಅವರಿಸಿಕೊಂಡಿತ್ತು. ಈ ವೇಳೆ ಯುವಕ ವಾಸವಿದ್ದ ಕಟ್ಟಡದ ಬಳಿ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಯುವಕನ ಬೈಕ್ ಕೊಚ್ಚಿಕೊಂಡು ಹೋಗಲು ಆರಂಭವಾಗಿದೆ. ಈ ವೇಳೆ ಯುವಕ ಬೈಕ್ ರಕ್ಷಣೆ ಮಾಡಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಬೈಕ್ ಜೊತೆಗೆ ನೀರಿನಲ್ಲಿ ಯುವಕ ಕೊಚ್ಚಿಹೋಗಿದ್ದಾನೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂಎಸ್.ಡಿ.ಆರ್.ಎಫ್ ಸಿಬ್ಬಂದಿ ಆಗಮಿಸಿದ್ದು, ಮಿಥುನ್ ಪತ್ತೆ ಕಾರ್ಯ ಆರಂಭವಾಗಿದೆ. ಘಟನೆ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಪಂಚಾಯತ್ ಪ್ರತಿನಿಧಿಗಳಿಂದ ಕಿರಿಕುಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಜಲಾವೃತ
ಕೆ.ಆರ್.ಪುರಂ ದಕ್ಷಿಣ ವಲಯ 4ರ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ನೀರಿನಿಂದ ಆವೃತವಾಗಿದ್ದು ಮೂರರಿಂದ ನಾಲ್ಕು ಅಡಿ ನೀರು ನಿಂತು ಕಚೇರಿಯ ಹಲವು ಮಹತ್ವದ ದಾಖಲೆ ಪತ್ರಗಳು ಹಾಗೂ ಪೀಠೋಪಕರಣ ಗಳು, 16ಕ್ಕೂ ಹೆಚ್ಚು ಕಂಪ್ಯೂಟರ್ ಇನ್ನಿತರ ಲಕ್ಷಾಂತರ ಮೌಲ್ಯದ ವಸ್ತುಗಳು ಸಂಪೂರ್ಣ ಜಲಾವೃತವಾಗಿದೆ.
ಬಿಇ ಓ ಕಚೇರಿ ಸ್ವಂತ ಕಟ್ಟಡವಿಲ್ಲದೆ ತ್ರೀವೇಣಿನಗರ ಪ್ರಾಥಮಿಕ ಹಿರಿಯ ಶಾಲೆಯ ಕಟ್ಟಡದದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಆವರಣದಲ್ಲಿ ನೀರು ನಿಂತಿದೆ. ಸಿಬ್ಬಂದಿಗಳು ದಾಖಲೆಗಳನ್ನು ಸಂಗ್ರಹಿಸಲು ಪರದಾಡಿದ ಪ್ರಸಂಗ ನಡೆದಿದೆ. ಪ್ರತಿ ಸಲ ಮಳೆ ಬಂದಾಗ ಈ ರೀತಿಯ ಸಮಸ್ಯೆ ಉಂಟಾಗುತ್ತಿದೆ ಪ್ರತಿ ಸಲ ದಾಖಲೆಗಳು ಸಂಗ್ರಹಿಸಲು ಹೆಣಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮೃತ ದೇಹ ಶೋಧ ಕಾರ‍್ಯ: ಈ ಕುರಿತು ಮಾಹಿತಿ ನೀಡಿದ ಕೆಳದಿ ಗ್ರಾಪಂ ಪಿಡಿಒ ಅಶ್ಪಾಕ್ ಅಹಮ್ಮದ್ ಮಾತನಾಡಿ, ಮಿಥುನ್ ಆಕಸ್ಮಿಕ ಮರಣ ಬೇಸರದ ವಿಷಯ. ಕುಟುಂಬದವರನ್ನು ಭೇಟಿ ಮಾಡಿದ್ದೇನೆ. ಅಲ್ಲದೆ ಬೆಂಗಳೂರಿನ ಅಧಿಕಾರಿಗಳ ಜತೆ ಸಹ ಸಂಪರ್ಕದಲ್ಲಿ ಮೃತದೇಹ ಶೋಧ ಕಾರ‍್ಯ ನಡೆಯುತ್ತಿದ್ದು, ಎನ್‌ಟಿಆರ್‌ಎಫ್ ತಂಡ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ‍್ಯಾಚರಣೆ ನಡೆಸಿದ್ದಾರೆ. ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಶಾಸಕ ಎಚ್.ಹಾಲಪ್ಪ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.