ರೈತರಲ್ಲಿ ಸಚಿವ ಖೂಬಾ ಕ್ಷಮೆ ಕೇಳಲು ಆಗ್ರಹಿಸಿ ಪ್ರತಿಭಟನೆ
Team Udayavani, Jun 18, 2022, 12:18 PM IST
ಕಲಬುರಗಿ: ರೈತರ ಬಗ್ಗೆ ಬೇಜವಾಬ್ದಾರಿ ತೋರಿದ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಕೂಡಲೇ ಸಂಪುಟದಿಂದ ಕೈ ಬಿಡಬೇಕು, ಕೂಡಲೇ ಅವರು ರೈತರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ಮಾಡಿದರು.
ಈ ವೇಳೆ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ಜಿಲ್ಲೆಯಾದ್ಯಂತ ಮುಂಗಾರು ಬಿತ್ತನೆ ಸಲುವಾಗಿ ರೈತರು ರಸಗೊಬ್ಬರ ಕೊರತೆ ಎದ್ದು ಕಾಣುತ್ತಿದೆ. ಗೊಬ್ಬರಕ್ಕಾಗಿ ರೈತರು ಪರದಾಡುವಂತಾಗಿದೆ. ಎಲ್ಲ ರೈತರಿಗೆ ಗೊಬ್ಬರ ಕೊಡಿಸುವುದನ್ನು ಬಿಟ್ಟು ಉಡಾಫೆ ಮಾತಾಡಿ, ರೈತರಿಗೆ ನಿಂದಿಸುವುದನ್ನು ಮಾಡಿರುವ ಕೇಂದ್ರ ಸಚಿವ ಭಗವಂತ ಖೂಬಾ ವರ್ತನೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರನ್ನು ಹೆದರಿಸುವ ರೀತಿ ಯಲ್ಲಿ ಎಚ್ಚರಿಕೆ ನೀಡಿದ ಸಂಭಾ ಷಣೆಯ ಆಡಿಯೋ ವೈರಲ್ ಆಗಿದ್ದು, ಕೇಂದ್ರ ಸಚಿವ ಭಗವಂತ ಖೂಬಾ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೆ ಬಂದು ರೈತರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಿದ್ಧಯ್ನಾ ಅಲ್ಲಾಪೂರ, ಶಿವಕುಮಾರ ಆರ್. ಪಾಟೀಲ, ರಾಮಲಿಂಗ ಕೆ, ಪರಮೇಶ್ವರ ಜಮಾದಾರ, ಶರಣಬಸಪ್ಪಾ ಪೋಲಾ, ರೇವಣಸಿದ್ಧಪ್ಪ ಧರಿ, ಭೀಮಾಶಂಕರ, ಗಂಗಮ್ಮ ಪಾಟೀಲ, ಗುರುಬಾಯಿ ಮಠಪತಿ, ಜಗದೇವಿ ಹರಕಂಚಿ, ಅಂಜಮ್ಮ ಪರೀಟ, ಕಾಶಿಬಾಯಿ ಜಮಾದಾರ, ಸುಶಿಲಾಬಾಯಿ ಚವ್ಹಾಣ, ಜಗದೇವಿ ನರಸಿಂಘ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.