ಕೀವ್ ಗೆ ಬ್ರಿಟನ್ ಪ್ರಧಾನಿ ಅಚ್ಚರಿಯ ಭೇಟಿ : ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ಬೆಂಬಲ
ಯೂರೋಪಿಯನ್ ಯೂನಿಯನ್ ಗೆ ಸೇರಿಸಲು ಬೆಂಬಲ ; ರಷ್ಯಾ ಇನ್ನಷ್ಟು ಕೆಂಡ
Team Udayavani, Jun 18, 2022, 4:11 PM IST
ಕೀವ್ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಕೀವ್ ನಲ್ಲಿ ಎರಡನೇ ಬಾರಿಗೆ ಅಚ್ಚರಿಯ ಭೇಟಿಯಾಗಿದ್ದಾರೆ ಎಂದು ಉಕ್ರೇನ್ ಪ್ರೆಸಿಡೆನ್ಸಿ ತಿಳಿಸಿದೆ.
ಪ್ರಧಾನ ಮಂತ್ರಿ ಕಚೇರಿಯ ಪ್ರಕಾರ, ಜಾನ್ಸನ್ ಉಕ್ರೇನಿಯನ್ ಪಡೆಗಳಿಗೆ ಪ್ರಮುಖ ತರಬೇತಿ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ.
ರಷ್ಯನ್ನರ ವಿರುದ್ಧ ಉಕ್ರೇನ್ ಗೆಲ್ಲಬಹುದು ಮತ್ತು ಗೆಲ್ಲುತ್ತದೆ ಎಂದು ನಮಗೆ ತಿಳಿದಿರುವ ಸತ್ಯವನ್ನು ತೋರಿಸುವುದು ನಮಗೆ ಅತ್ಯಗತ್ಯ ಎಂದು ಬೋರಿಸ್ ಜಾನ್ಸನ್ ಹೇಳಿರುವುದಾಗಿ ಅಂತಾರಾಷ್ಟ್ರೀಯ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಮತ್ತು ಇಟಲಿಪ್ರಧಾನಿ ಮಾರಿಯೋ ಡ್ರಾಗಿ ಅವರು ಗುರುವಾರ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಯೂರೋಪ್ ಒಕ್ಕೂಟಕ್ಕೆ ಸೇರಲು ಉಕ್ರೇನ್ನ ಉಮೇದುವಾರಿಕೆಯನ್ನು ಬೆಂಬಲಿಸುವುದಾಗಿ ಹೇಳಿದ ನಂತರ ಜಾನ್ಸನ್ ಅವರ ಮಹತ್ವದ ಭೇಟಿ ನಡೆಯುತ್ತಿದೆ.
ಯೂರೋಪಿಯನ್ ಯೂನಿಯನ್ ಗೆ ಉಕ್ರೇನ್ ಅನ್ನು ಸೇರ್ಪಡೆ ಮಾಡಿಕೊಳ್ಳದಂತೆ ದಾಳಿ ನಿರತ ರಷ್ಯಾ ತೀವ್ರ ವಿರೋಧ ತೋರುತ್ತಲೇ ಬಂದಿದೆ. ಈ ಭೇಟಿಯ ಬಳಿಕ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.