![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 18, 2022, 5:51 PM IST
ಪುತ್ತೂರು : ಕಾಂಗ್ರೆಸ್ ಐಟಿ ಸೆಲ್ ಕಾಯದರ್ಶಿ ನ್ಯಾಯವಾದಿ ಶೈಲಜಾ ಅಮರನಾಥ ಅವರ ಬಪ್ಪಳಿಗೆಯ ನಿವಾಸಕ್ಕೆ ಯುವಕರ ತಂಡ ದಾಳಿ ನಡೆಸಿರುವ ಘಟನೆ ಜೂನ್ 18 ರಂದು ಸಂಜೆ ನಡೆದಿದೆ.
ಶೈಲಜಾ ಅಮರನಾಥ ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ನಲ್ಲಿ ನಡೆದ ಚರ್ಚಾಕೂಟದಲ್ಲಿ ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಹನುಮಂತ ದೇವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷದ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಮುಖರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ಬೆನ್ನಲ್ಲಿಯೇ ಶೈಲಜಾ ಅಮರನಾಥರವರು ಮನೆಯಂಗಳಕ್ಕೆ ಬಂದಿರುವ ಯುವಕರ ತಂಡವೊಂದು ಮನೆಗೆ ದಾಳಿ ನಡೆಸಿ ಗಾಜುಗಳನ್ನು ಪುಡಿಗೈದು, ಕಪ್ಪು ಮಸಿ ಎರಚಿ ಪರಾರಿಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಪ್ರೇಮಿಗಳ ಆತ್ಮಹತ್ಯೆ ಯತ್ನ; ಈಜಿ ಮೇಲಕ್ಕೆ ಬಂದು ಪ್ರಿಯಕರನ ವಿರುದ್ಧ ದೂರು ನೀಡಿದ ಮಹಿಳೆ
ಪುತ್ತೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.