ಶಿವರಾಜಕುಮಾರ್ ‘ಬೈರಾಗಿ’ ರೋಡ್ ಶೋ
Team Udayavani, Jun 19, 2022, 12:49 PM IST
ಶಿವಣ್ಣ ನಟನೆಯ “ಬೈರಾಗಿ’ ಚಿತ್ರ ಜುಲೈ 01 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು “ಬೈರಾಗಿ’ ರೋಡ್ ಶೋ ನಡೆಯಲಿದೆ. ಹೌದು, ಸಿನಿಮಾದ ಪ್ರಚಾರಾರ್ಥ ಚಿತ್ರತಂಡ ಬೇರೆ ಬೇರೆ ಊರುಗಳಿಗೆ ತೆರಳಲಿದೆ.
ಜೂನ್ 24ರಂದು ಬೆಂಗಳೂರಿನಿಂದ ಶುರುವಾಗುವ ರೋಡ್ ಶೋ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಮೈಸೂರು ತಲುಪಲಿದೆ. ನಂಜನಗೂಡು ಮಾರ್ಗವಾಗಿ ಚಾಮರಾಜನಗರ ತಲುಪಲಿದ್ದು, ಜೂನ್ 25ರಂದು ಕಾರ್ಯಕ್ರಮ ನಡೆಯಲಿದೆ.
ಚಾಮರಾಜನಗರದಲ್ಲಿ “ಬೈರಾಗಿ’ ಚಿತ್ರದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಶಿವರಾಜ್‌ಕುಮಾರ್ ನಟನೆಯ 123ನೇ ಚಿತ್ರ “ಬೈರಾಗಿ’ಯಾಗಿದ್ದು, ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಚಿತ್ರವನ್ನು ವಿಜಯ್ ಮಿಲ್ಟನ್ ನಿರ್ದೇಶಿಸಿದ್ದು, ಕೃಷ್ಣ ಸಾರ್ಥಕ್ ನಿರ್ಮಿಸಿದ್ದಾರೆ. ಈಗಾಗಲೇ ಒಟಿಟಿ, ಸ್ಯಾಟಲೈಟ್ ಹಕ್ಕುಗಳು ಸೇಲ್ ಆಗಿದ್ದು ಬಿಡುಗಡೆಗೂ ಮುಂಚೆಯೇ “ಬೈರಾಗಿ’ ಹತ್ತು ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿಕೊಂಡಿದೆ. ಈ ವಿಚಾರವನ್ನು ಸ್ವತಃ ನಿರ್ಮಾಪಕರೇ ಒಪ್ಪಿಕೊಂಡಿದ್ದಾರೆ.
“ಬೈರಾಗಿ’ ಚಿತ್ರ ಆ್ಯಕ್ಷನ್ ಜೊತೆಗೆ ಎಮೋಶನ್ ಮೇಲೆ ಸಾಗುವ ಚಿತ್ರವಾಗಿದ್ದು, ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎನ್ನುವುದು ಶಿವಣ್ಣ ಮಾತು. ಚಿತ್ರದ ಬಗ್ಗೆ ಮಾತನಾಡುವ ಶಿವಣ್ಣ, “ಚಿತ್ರದಲ್ಲಿ ಎಮೋಶನ್ಸ್‌ಗೆ ಹೆಚ್ಚಿನ ಮಹತ್ವವಿದೆ. ಮೈಮೇಲೆ ಆಗಿರುವ ಗಾಯ ವಾಸಿಯಾದರೂ ಮನಸ್ಸಿಗೆ ಆಗಿರುವ ಗಾಯ ಮಾಸುವುದಿಲ್ಲ ಎಂಬ ಅಂಶದ ಜೊತೆಗೆ ಇನ್ನೂ ಹಲವು ವಿಚಾರಗಳನ್ನು ಸಿನಿಮಾ ಒಳಗೊಂಡಿದೆ’ ಎನ್ನುತ್ತಾರೆ ಶಿವಣ್ಣ.
ಇನ್ನು, ಈಗಾಗಲೇ ಚಿತ್ರದ “ರಿದಮ್ ಆಫ್ ಶಿವಪ್ಪ’ ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿದೆ. ಈ ಹಾಡನ್ನು ಶಿವರಾಜ್‌ಕುಮಾರ್ ಹಾಗೂ ಶರಣ್ ಜೊತೆಯಾಗಿ ಹಾಡಿದ್ದಾರೆ. ಆರಂಭದಲ್ಲಿ ಈ ಹಾಡನ್ನು ಶಿವಣ್ಣ-ಪುನೀತ್ ರಾಜ್‌ಕುಮಾರ್ ಜೊತೆಯಾಗಿ ಹಾಡಲು ನಿರ್ಧರಿಸಿದ್ದರಂತೆ. ಪುನೀತ್ ಅವರು ಕೂಡಾ ಈ ಹಾಡಲು ಒಪ್ಪಿದ್ದರು. ಇತ್ತೀಚೆಗಷ್ಟೇ ಈ ವಿಚಾರವನ್ನು ಶಿವಣ್ಣ ಹೇಳಿಕೊಂಡಿದ್ದಾರೆ. “ವಜ್ರಕಾಯ’ ಬಳಿಕ ಶಿವಣ್ಣನ ಸಿನಿಮಾಕ್ಕೆ ಶರಣ್ ದನಿಗೂಡಿಸಿದ ಹಾಡು ಮಾಸ್‌ಪ್ರಿಯರನ್ನು ಸೆಳೆಯುತ್ತಿದೆ.
ಪ್ರಮೋದ್ ಮರವಂತೆ ಸಾಹಿತ್ಯವಿರುವ “ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ…’ ಎಂಬ ಹಾಡು ಸಿಂಗಲ್ ಶಾಟ್‌ನಲ್ಲಿ ಶೂಟ್ ಮಾಡಿರುವುದು ಮತ್ತೂಂದು ವಿಶೇಷ. ಹಾಡು ಮಾಸ್ ಪ್ರಿಯರನ್ನು ಹೆಚ್ಚೆಚ್ಚು ಸೆಳೆಯುತ್ತಿದೆ.
“ರಿದಮ್ ಆಫ್ ಶಿವಪ್ಪ’ ಕಾನ್ಸೆಪ್ಟ್’ನಡಿ ಮೂಡಿಬಂದಿರುವ ಈ ಹಾಡಿಗೆ ಇಡೀ “ಬೈರಾಗಿ’ ತಂಡ ಹೆಜ್ಜೆ ಹಾಕಿದ್ದು, ದೇವನಹಳ್ಳಿ ಬಳಿಯಿರುವ ನೂತನ ಮಾಲ್ ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮುರಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ “ನಖರನಖ’ ಹಾಡಿಗೆ ಆ್ಯಂಥೋನಿ ದಾಸ್ ದನಿಗೂಡಿಸಿದ್ದರು. ಇದೀಗ “ಸಂಡೆ-ಮಂಡೆ’ ಹಾಡು ಶಿವಣ್ಣ-ಶರಣ್‌ದನಿಯಲ್ಲಿ ಮೂಡಿಬಂದಿದ್ದು ಜೆ.ಪಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ರಿಲೀಸ್ ಆಗಿದೆ. ಹಿರಿಯ ನಟ ಶಶಿಕುಮಾರ್, ಅನು ಪ್ರಭಾಕರ್, ಅಂಜಲಿ, ಯಶ ಶಿವಕುಮಾರ್, ಚಿಕ್ಕಣ್ಣ ಇತರ ಪಾತ್ರಗಳಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.