![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 20, 2022, 7:05 PM IST
ವಿಜಯಪುರ : ಆಧಾರ ರಹಿತವಾಗಿ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಲಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ನನಗೆ ಹಣ ಕೊಟ್ಟವನೂ ಇಲ್ಲ, ನಾನು ಹಣ ಪಡೆದ ದಾಖಲೆಗಳೂ ಇಲ್ಲ.ಆದರೂ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಲಾಗುತ್ತಿದೆ ಎಂದು ರೈತ ಸಂಘಟನೆಯ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಸೋಮವಾರ ರೈತ ಸಮಾವೇಶದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾವೂ ಅನ್ನ ತಿಂದವರೇ, ಹೀಗಾಗಿ ಭ್ರಷ್ಟಾಚಾರ ಮಾಡುವ ಜಾಯಮಾನ ನನ್ನದಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡುವುದಕ್ಕೆ ನನ್ನ ವಿರೋಧವಿಲ್ಲ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಹಕ್ಕಿದೆ ಎಂದರು.
ಖಾಸಗಿ ಚಾನೆಲ್ ನಲ್ಲಿ ಬಂದ ಭಾರಿ ಪ್ರಮಾಣದಲ್ಲಿ ಹಣ ಪಡೆದ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.