ಶಾಸಕ ಈಶ್ವರ ಖಂಡ್ರೆ ಹೇಳಿಕೆಯಿಂದ ರೈತರಲ್ಲಿ ಆತಂಕ


Team Udayavani, Jun 21, 2022, 12:26 PM IST

9DC

ಭಾಲ್ಕಿ: ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ. ಅಗತ್ಯ ಇರುವಷ್ಟು ಕಾಲಕಾಲಕ್ಕೆ ಪೂರೈಕೆ ಆಗುತ್ತಿದೆ. ಈ ವಿಷಯದ ಬಗ್ಗೆ ಕೇಂದ್ರದ ಸಚಿವ ಭಗವಂತ ಖೂಬಾ, ಅಧಿಕಾರಿಗಳು ಸ್ಪಷ್ಟನೆ ನೀಡುತ್ತಿದ್ದಾರೆ. ಆದರೆ, ಶಾಸಕ ಈಶ್ವರ ಖಂಡ್ರೆ ಅವರು ಜಿಲ್ಲೆಯಲ್ಲಿ ರಸಗೊಬ್ಬರದ ಅಭಾವ ಸೃಷ್ಟಿಯಾಗಿದೆ ಎಂದು ಹೇಳಿಕೆ ನೀಡಿ ರೈತರಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಮತ್ತು ದೇಶದಲ್ಲಿ ಈ ಹಿಂದೆ ಕಾಂಗ್ರೆಸ್‌ ಪಕ್ಷ 60 ವರ್ಷ ಆಡಳಿತ ನಡೆಸಿ ಲೂಟಿ ಮಾಡಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಶಕೆ ಆರಂಭವಾಗಿದೆ. ಕಳೆದ 8 ವರ್ಷಗಳಿಂದ ಪಾರದರ್ಶಕ ಆಡಳಿತ ನಡೆಸುತ್ತಿದ್ದಾರೆ. ಅಂತಹ ಮೋದಿ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿರುವುದು ನಮ್ಮೆಲ್ಲರ ಭಾಗ್ಯ. ಅದರಲ್ಲೂ ಸಂಸದ ಖೂಬಾಗೆ ಮಂತ್ರಿ ಸ್ಥಾನ ಸಿಕ್ಕಿರುವುದಕ್ಕೆ ಖುಷಿ ಪಡಬೇಕು ಎಂದರು.

ಶಾಸಕ ಖಂಡ್ರೆ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇಲ್ಲ. 2005-06ರಲ್ಲಿ ಬಿಎಸ್‌ಎಸ್‌ಕೆಗೆ ಈಶ್ವರ ಖಂಡ್ರೆ ಅಧ್ಯಕ್ಷರಾಗಿದ್ದರು. ಎಂಜಿಎಸ್‌ ಎಸ್‌ಕೆ ಅವರ ಹಿಡಿತದಲ್ಲಿತ್ತು. ಆಗ ರೈತರು ಕಾರ್ಖಾನೆಗೆ ಕಬ್ಬು ಸಾಗಿಸಲು ಪರದಾಟ ನಡೆಸಿದರು. ಕಬ್ಬು ಸಾಗಿಸಲು ಸಾಧ್ಯವಾಗದೇ ಆನಂದವಾಡಿ, ನೇಳಗಿ ಸೇರಿ ಹಲವೆಡೆ ರೈತರು ಆತ್ಮಹತ್ಯೆ ಮಾಡಿಕೊಂಡರು. ಆ ಸಂದರ್ಭದಲ್ಲಿ ಶಾಸಕರಿಗೆ ರೈತರ ಬಗ್ಗೆ ಕಾಳಜಿ ಏಕೆ ಇರಲಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿ ಮುಖಂಡ ಡಿ.ಕೆ. ಸಿದ್ರಾಮ ಮಾತನಾಡಿ, ಭಗವಂತ ಖೂಬಾ ಅವರು ಸರಳ, ಸಜ್ಜನ ರಾಜಕಾರಣಿ ಆಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಪಾರದರ್ಶಕ ಆಡಳಿತ ನಡೆಸುತ್ತಿರುವ ಖೂಬಾ ಅವರು ಜಿಲ್ಲೆಯ ರೈತರಿಗೆ ಬೆಳೆ ವಿಮೆ ಮೂಲಕ ಕೋಟ್ಯಂತರ ಹಣ ಪರಿಹಾರ ಕೊಡಿಸಿದ್ದಾರೆ. ಖೂಬಾ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ. ವಿರೋಧಿಗಳಿಗೆ ಇವರ ಬಗ್ಗೆ ಮಾತನಾಡಲು ಅವಕಾಶ ಸಿಗುತ್ತಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡ ಶಾಸಕ ಈಶ್ವರ ಖಂಡ್ರೆ ಅವರು ಖೂಬಾ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ರೈಲ್ವೆ ಪ್ರಯಾಣಿಕರ ಸೇವಾ ಸಮಿತಿ ಸದಸ್ಯ ಶಿವರಾಜ ಗಂದಗೆ ಮಾತನಾಡಿದರು. ಈ ಸಂದರ್ಭದಲ್ಲಿ ಡಿಗಂಬರರಾವ ಮಾನಕಾರಿ, ಪಂಡಿತ ಶಿರೋಳೆ, ಸುರೇಶ ಬಿರಾದಾರ್‌, ಸಂತೋಷ ಪಾಟೀಲ್‌, ಸುರೇಶ ಹುಬಳಿಕರ್‌ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.