ದೇಶ ಬಲಿಷ್ಟಗೊಳಿಸಲು ಮೋದಿ ಕಂಕಣ ಬದ್ದ: ಚಿಂಚನಸೂರ
Team Udayavani, Jun 21, 2022, 3:37 PM IST
ಗುರುಮಠಕಲ್: ದೇಶವನ್ನು ಬಲಿಷ್ಠಗೊಳಿಸಲು ಮೋದಿ ಕಂಕಣ ಬದ್ಧರಾಗಿದ್ದು, ಅವರ ಹೆಗಲಿಗೆ ಹೆಗಲು ಕೊಟ್ಟು ಅವರ ಜತೆಯಲ್ಲಿ ನಾವು ನಡೆಯಬೇಕಾಗಿದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವರು ಹೇಳಿದರು.
ತಾಲೂಕಿನ ಬೋರಬಂಡಾ ಗ್ರಾಮದ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಪಂಕ್ಷನ್ ಹಾಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಗುರುಮಠಕಲ್ ಮಂಡಲದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಧಾನಿ ಮೋದಿ ಭಾರತದ ಶಿಲ್ಪಿಯಾಗಿದ್ದಾರೆ. ಅವರಿಂದ ದೇಶ ಅಭಿವೃದ್ಧಿಯಾಗಲಿದೆ. ಮೋದಿ ಅವರಿಂದಲೇ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು. ಕಾಂಗ್ರೆಸ್ ಪಕ್ಷ ತಾಯಿ, ಮಗನ ಪಕ್ಷವಾಗಿದೆ. ಜೆಡಿಸ್ ಪಕ್ಷ ತಂದೆ, ಮಗನ ಪಕ್ಷವಾಗಿದ್ದು ಎರಡು ಪಕ್ಷಗಳು ಇಂದು ಖಾಲಿಯಾಗಿವೆ. ಎಲ್ಲರೂ ಬಿಜೆಪಿ ಕದ ತಟ್ಟುತ್ತಿದ್ದು, ಮುಂಬರುವ ದಿನಗಳಲ್ಲಿ ಪಕ್ಷ ಮತ್ತೂಮ್ಮೆ ಅಧಿ ಕಾರಕ್ಕೆ ಬರುವುದು ಶತ ಸಿದ್ಧ ಎಂದು ಹೇಳಿದರು.
ಕಾರ್ಯಕಾರಣಿ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರೆಡ್ಡಿ, ವಿಭಾಗದ ಸಹ ಈಶ್ವರಸಿಂಗ್ ಟಾಗೋರ್, ಯಾದಗಿರಿ ಬಿಜೆಪಿ ಜಿಲ್ಲಾ ಪಭಾರಿ ಅಮರನಾಥ ಪಾಟೀಲ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ ಬಿನ್ನಾಡಿ, ರಾಜ್ಯ ಉಪಾಧ್ಯಕ್ಷರಾದ ಲಲಿತಾ ಅನ್ನಪುರ, ಮಾಜಿ ರಾಜ್ಯ ಉಪಾಧ್ಯಕ್ಷರಾದ ನಾಗರಾತ್ನ ಕುಪ್ಪಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ವೀಣಾ ಮೋದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ಗುರು ಕಾಮಾ, ದೇವಿಂದ್ರನಾಥ ನಾದ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಮೊನೇಶ್ ಬೆಳಗೇರಾ, ಯುವಮೋರ್ಚಾ ತಾಲೂಕು ಅಧ್ಯಕ್ಷ ವಿನಾಯಕರಾವ್ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್
Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.