ಉಳ್ಳಾಲ: ಹತ್ತಿ ದಾಸ್ತಾನು ಗೋದಾಮಿಗೆ ಆಕಸ್ಮಿಕ ಬೆಂಕಿ : 8 ಲಕ್ಷಕ್ಕೂ ಹೆಚ್ಚು ನಷ್ಟ
Team Udayavani, Jun 21, 2022, 9:01 PM IST
ಉಳ್ಳಾಲ: ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್‌ನಲ್ಲಿರುವ ಗ್ರಾಮ ಪಂಚಾಯತ್ ಕಚೇರಿ ಬಳಿಯ ಹತ್ತಿ ದಾಸ್ತಾನು ಗೋದಾಮು ಮತ್ತು ಹತ್ತಿಯಿಂದ ಉತ್ಪನ್ನಗಳ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿದ್ದು, ಸುಮಾರು 8 ಲಕ್ಷಕ್ಕೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.
ಉಳ್ಳಾಲದ ಉದ್ಯಮಿ ನೌಮಾನ್ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು , ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ.
ಮಂಗಳೂರಿನ ಪಾಂಡೇಶ್ವರದಿಂದ ಅಗ್ನಿಶಾಮಕದಳ ಆಗಮಿಸಿದಾಗ ಗೋದಾಮು ಸಹಿತ ಯಂತ್ರಗಳು ಭಾಗಶ: ಸುಟ್ಟು ಹೋಗಿತ್ತು. ಸ್ಥಳಕ್ಕೆ ಕೊಣಾಜೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.