ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕ ಸಾವು: ವಾಸ್ತುಶಿಲ್ಪಿ ವಿರುದ್ಧದ ಪ್ರಕರಣ ರದ್ದು

Team Udayavani, Jun 21, 2022, 9:30 PM IST

ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕ ಸಾವು: ವಾಸ್ತುಶಿಲ್ಪಿ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಅವಘಡ ಸಂಭವಿಸಿ ಕಾರ್ಮಿಕ ಮೃತಪಟ್ಟರೆ, ಅದಕ್ಕೆ ಕಟ್ಟಡ ವಿನ್ಯಾಸ ಮಾಡಿರುವ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಇಂಜಿನಿಯರ್‌ ಹೊಣೆ ಆಗುವುದಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಕಟ್ಟಡ ನಿರ್ಮಾಣ ವೇಳೆ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಸಂಬಂಧ ತಮ್ಮ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣ ರದ್ದು ಕೋರಿ ನಗರದ ವಾಸ್ತುಶಿಲ್ಪ ಎಂಜಿನಿಯರ್‌ ವಿ.ವಿಶ್ವಾಸ್‌ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ತನ್ನ ಆದೇಶದಲ್ಲಿ ಈ ರೀತಿ ಹೇಳಿದೆ.
ನಗರದ ನಂದಿನಿ ಲೇಔಟ್‌ನಲ್ಲಿ ನಿವಾಸಿ ಚಂದ್ರಶೇಖರ್‌ ಎಂಬುವರಿಗೆ ವಿಶ್ವಾಸ್‌ ಮನೆಯ ಕಟ್ಟಡದ ವಿನ್ಯಾಸ ಮಾಡಿಕೊಟ್ಟಿದ್ದರು. ಅದರಂತೆ ಚಂದ್ರಶೇಖರ್‌ ಗುತ್ತಿಗೆದಾರರಿಗೆ ನಿರ್ಮಾಣ ಕಾಮಗಾರಿ ವಹಿಸಿದ್ದರು. 2020ರ ಅ.10ರಂದು ಮುಖೇಶ್‌ ಎಂಬ ಕಾರ್ಮಿಕ ವಿದ್ಯುತ್‌ ತಗುಲಿ ಸಾವನ್ನಪ್ಪಿದ್ದರು.

ಗೃಹ ಪ್ರವೇಶದ ವೇಳೆ ವಿಶ್ವಾಸ್‌ ಅವರಿಗೆ ಈ ವಿಷಯ ತಿಳಿದಿತ್ತು. ಈ ಸಂಬಂಧ ನಂದಿನಿಲೇಔಟ್‌ ಪೊಲೀಸ್‌ ಠಾಣೆಯಲ್ಲಿ ವಿಶ್ವಾಸ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಟ್ಟಡದ ಮಾಲೀಕ ಚಂದ್ರಶೇಖರ್‌ ಅವರನ್ನು ಬಿಟ್ಟು ವಿಶ್ವಾಸ್‌ ವಿರುದ್ಧ ವಿಚಾರಣಾಯಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ವಿಶ್ವಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, 2020ರ ಅ.10ರಂದು ದುರುದೃಷ್ಟವಶಾತ್‌ ಆಗಿ ನಡೆದ ಘಟನೆಯಿಂದ ಓರ್ವ ಕಾರ್ಮಿಕನ ಸಾವು ಸಂಭವಿಸಿದೆ.

ಮೃತನು ವಸತಿ ನಿವೇಶನದ ಮಾಲೀಕರು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ವಹಿಸಿಕೊಟ್ಟಿದ್ದ ಗುತ್ತಿಗೆದಾರನ ಅಧೀನದಲ್ಲಿ ಕೆಲಸ ಮಾಡುತ್ತಿದ್ದ. ಅರ್ಜಿದಾರ ವಿಶ್ವಾಸ್‌ ಆಗಾಗ್ಗೆ ನಿವೇಶನಕ್ಕೆ ಭೇಟಿ ನೀಡುತ್ತಿದ್ದರಷ್ಟೆ. ಮನೆಯ ಕಟ್ಟಡದ ವಿನ್ಯಾಸ ಮಾಡಿ ಮನೆ ಮಾಲೀಕರಿಗೆ ನೀಡಿದ್ದಾರೆ. ಅವರು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗಾರನಿಗೆ ವಹಿಸಿದ್ದರು.

ಗುತ್ತಿಗೆದಾರನ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ವಿದ್ಯುತ್‌ ಅವಘಡದಿಂದ ಸಾವನ್ನಪ್ಪಿದ್ದಾನೆ. ಗುತ್ತಿಗೆದಾನ ಅಧೀನದಲ್ಲಿ ಕೆಲಸಮಾಡುವ ಕಾರ್ಮಿಕ ಮೃತಪಟ್ಟರೆ, ಅದಕ್ಕೆ ಕಟ್ಟಡ ನಿರ್ಮಾಣಕ್ಕೆ ವಿನ್ಯಾಸಕ ಮಾಡಿಕೊಟ್ಟ ವಾಸ್ತುಶಿಲ್ಪ ಎಂಜಿನಿಯರ್‌ ಯಾವುದೇ ರೀತಿಯಲ್ಲೂ ಹೊಣೆಯಾಗುವುದಿಲ್ಲ. ಘಟನೆಯಲ್ಲಿ ಅರ್ಜಿದಾರರ ನಿರ್ಲಕ್ಷ್ಯ ಕಂಡುಬರುವುದಿಲ್ಲ. ಹಾಗಾಗಿ, ಅರ್ಜಿದಾರರ ವಿರುದ್ಧ ನಂದಿನಿಲೇಔಟ್‌ ಠಾಣಾ ಪೊಲೀಸರು ದಾಖಲಿಸಿದ್ದ ದೂರು ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಆದೇಶಿಸಿದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.