![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Jun 21, 2022, 10:47 PM IST
ಕೊರಟಗೆರೆ : ವಿದ್ಯುತ್ ತಂತಿ ಸ್ಪರ್ಶಗೊಂಡು ಜಮೀನಿನಲ್ಲಿ ಕೆಲಸಮಾಡುತ್ತಿದ್ದ ಯುವಕನೋರ್ವ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ರಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮಶೇಖರ್(25) ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಈತ ತನ್ನ ಜಮೀನಿನಲ್ಲಿ ಮಿಡಿ ಸೌತೆ ಕಾಯಿ ಬೆಳೆಸಿದ್ದು ಸೌತೆ ಕಾಯಿ ಬಳ್ಳಿ ಹಬ್ಬಲು ಮರದ ಕೋಲುಗಳನ್ನು ಉರುತ್ತಿದ್ದ ವೇಳೆ ಮರದ ಕೋಲು ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಗೊಂಡು ಯುವಕ ಬಿದ್ದಿದ್ದಾನೆ, ಈ ವೇಳೆ ಅಲ್ಲೇ ಇದ್ದ ಸಹೋದರ ಸಿದ್ದರಾಜು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆ ಕುರಿತು ಸಿದ್ದರಾಜು ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರಾಜ್ಯದಲ್ಲಿ738 ಪಾಸಿಟಿವ್ ವರದಿ: ಸೋಂಕಿನ ಪಾಸಿಟಿವ್ ದರ ಶೇ. 3.76ಕ್ಕೆ ಏರಿಕೆ
ಜೂಜು ಅಡ್ಡೆ ಮೇಲೆ ದಾಳಿ. 10,200 ಹಣ ವಶ
ಕೊರಟಗೆರೆ : ಪೋಲೀಸ್ ಠಾಣೆಗೆ ಬಂದ ಖಚಿತ ಮಾಹಿತಿ ಆಧಾರದ ಮೇರೆಗೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿಗರನಹಟ್ಟಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗುಂಪೊಂದು ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ಮಾಡಿ ,10200 ಹಣ , 01ರೂನ ಎರಡು ಕಾಯಿನ್ ಗಳು, 1 ಬೋಕಿ ಬಿಲ್ಲೆ ಹಾಗೂ 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿರುವ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ರಮೇಶ್ ಬಾಬು ಮತ್ತು ಇತರೆ 13 ಜನರ ತಂಡದ ಸದಸ್ಯರು ಜೂಜಾಟವಾಡುತ್ತಿದ್ದ ಸ್ಥಳಕ್ಕೆ ಕೊರಟಗೆರೆ ಪೊಲೀಸರು ದಾಳಿ ಮಾಡಿದ್ದಾರೆ.
ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಾಗರಾಜು.ಬಿ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.