ಬಾಲಕಿಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ
Team Udayavani, Jun 22, 2022, 12:23 AM IST
ಉಡುಪಿ: ಪರಿಶಿಷ್ಟ ಜಾತಿಯ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾ ಗಿದ್ದು ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾ ಲಯದ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ತೀರ್ಪು ಪ್ರಕಟಿಸಿದ್ದಾರೆ.
ಪೋಕ್ಸೊ ಕಾಯ್ದೆಯಡಿಯಲ್ಲಿ 20 ವರ್ಷ ಪ್ರಾಯದ ಪಶ್ಚಿಮ ಬಂಗಾಲ ಮೂಲದ ರಾಜೀಬ್ ಅಲಿಯಾಸ್ ಚೋಟು ಎನ್ನುವ ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ, 56 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಘಟನೆ ಹಿನ್ನೆಲೆ: 2018 ಫೆಬ್ರವರಿ ತಿಂಗಳಿನಲ್ಲಿ ಉಡುಪಿ ಜಿಲ್ಲೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಪಶ್ಚಿಮ ಬಂಗಾಲ ಮೂಲದ ರಾಜೀಬ್ ರಸ್ತೆ ಕೆಲಸಕ್ಕೆಂದು ಬಂದಿದ್ದು 14 ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿದ್ದ. ಮಗಳು ಕಾಣೆಯಾದ ಬಗ್ಗೆ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಬಾಲಕಿಯನ್ನು ರೈಲು ನಿಲ್ದಾಣವೊಂದರಲ್ಲಿ ಪತ್ತೆ ಮಾಡಿ ಪೊಲೀಸರು ಕರೆತಂದಿದ್ದರು. ಬಳಿಕ ಆಪ್ತ ಸಮಾಲೋಚನೆ ವೇಳೆ ಬಾಲಕಿಯು ಒಂದನೇ ಆರೋಪಿ ರಾಜೀಬ್ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಇತರ ಐವರ ವಿರುದ್ಧ ಮಾಹಿತಿ ನೀಡಿದ ಆಧಾರದಲ್ಲಿ ಎಲ್ಲರನ್ನು ಬಂಧಿಸಲಾಗಿತ್ತು. ಮೊದಲಿಗೆ ಅಂದಿನ ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ ಭಾಗಶಃ ತನಿಖೆ ನಡೆಸಿದ್ದು ತರುವಾಯ ಡಿವೈಎಸ್ಪಿ ಟಿ.ಆರ್. ಜೈಶಂಕರ್ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
46 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 28 ಸಾಕ್ಷಿಗಳ ವಿಚಾರಣೆ ನಡೆದಿದ್ದು ಸಂತ್ರಸ್ತ ಬಾಲಕಿ ನುಡಿದ ಸಾಕ್ಷಿ ಹಾಗೂ ಆಕೆ ಸಹೋದರ, ಸಹೋದರಿ ಸಾಕ್ಷಿಗಳು, ಸಾಂದರ್ಭಿಕ ಸಾಕ್ಷಿಗಳು ಮೊದಲನೇ ಆರೋಪಿ ಅಪರಾಧಿ ಎಂಬುದನ್ನು ಸಾಬೀತು ಪಡಿಸಲು ಪ್ರಾಸಿಕ್ಯೂಶನ್ ಪರವಾಗಿತ್ತು. ಉಳಿದ ಐವರು ಆರೋಪಿಗಳು ಖುಲಾಸೆಗೊಂಡಿದ್ದಾರೆ.
ಪ್ರಕರಣದಲ್ಲಿ ಅಪರಾಧಿಯಾದ ರಾಜೀಬ್ ಮೇಲೆ ಪರಿಶಿಷ್ಟ ಜಾತಿಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಆಜೀವ ಕಾರಾಗೃಹ ಶಿಕ್ಷೆ ಸಹಿತ ಅಪಹರಣ, ಅತ್ಯಾಚಾರ ಮೊದಲಾದ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿದ್ದು 56 ಸಾವಿರ ರೂ. ದಂಡ ವಿಧಿಸಲಾಗಿದೆ.
ಈ ದಂಡದಲ್ಲಿ 16 ಸಾವಿರ ರೂ. ಸರಕಾರಕ್ಕೆ ಹಾಗೂ 40 ಸಾವಿರ ರೂ. ನೊಂದ ಬಾಲಕಿಗೆ ನೀಡಲು ಆದೇಶಿಸಿದ್ದಲ್ಲದೆ ಸಂತ್ರಸ್ತೆಗೆ 5 ಲಕ್ಷ ಪರಿಹಾರವನ್ನು ಸರಕಾರ ನೀಡುವಂತೆ ನ್ಯಾಯಾಲಯ ತೀರ್ಪು ನೀಡಿದೆ. ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಪ್ರಾಸಿಕ್ಯೂಶನ್ ಪರವಾಗಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.