ಬಸ್ ಹತ್ತುವಾಗ ವೃದ್ಧೆಯ 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ದೋಚಿ ಪರಾರಿ
Team Udayavani, Jun 22, 2022, 11:48 AM IST
ಗಂಗಾವತಿ: ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ವೃದ್ಧೆಯೋರ್ವಳ 3ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ನಡೆದಿದೆ.
ತಾಲ್ಲೂಕಿನ ಬಾಪಿರೆಡ್ಡಿ ಕ್ಯಾಂಪ್ ನ ನಿವಾಸಿ ಕನಕರತ್ನ ಎಂಬ ವೃದ್ಧೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿ ಊರಿಗೆ ಬಸ್ ಹತ್ತುವ ಸಂದರ್ಭದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ವೃದ್ಧೆಯ ಕೊರಳಲ್ಲಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ದೋಚಿದ್ದಾರೆ.
ಈ ಕುರಿತು ಕನಕರತ್ನಮ್ಮ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ
ಇತ್ತೀಚಿನ ವರ್ಷಗಳಲ್ಲಿ ಗಂಗಾವತಿ ನಗರದಲ್ಲಿ ಚಿನ್ನದ ಸರ ದೋಚುವ ಪ್ರಕರಣಗಳು ಹೆಚ್ಚಾಗಿದ್ದು, ಅಲ್ಲಲ್ಲಿ ಸಿಸಿ ಕ್ಯಾಮೆರಾಗಳ ಮುಖಾಂತರ ಕಳ್ಳರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ. ಅಮೂಲ್ಯ ವಸ್ತುಗಳೊಂದಿಗೆ ಒಂಟಿಯಾಗಿ ನಗರಕ್ಕೆ ಆಗಮಿಸುವ ವ್ಯಕ್ತಿಗಳನ್ನು ಗುರಿಯಾಗಿಸಿ, ಬಸ್ ಮತ್ತು ರೈಲು ನಿಲ್ದಾಣಗಳಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸುತ್ತಾರೆ. ಈ ಕುರಿತು ಜಾಗೃತವಾಗಿರುವಂತೆ ಹಲವು ಬಾರಿ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.