ಸಾಲು ಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ
Team Udayavani, Jun 22, 2022, 8:26 PM IST
ಬೆಂಗಳೂರು:ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, ಶತಾಯುಷಿ ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.
ಇದೇ ವೇಳೆ ಮಾತನಾಡಿದ ವಿಶ್ವನಾಥ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆ ಮೇರೆಗೆ ಬಿಡಿಎ ವತಿಯಿಂದ ನಮ್ಮೆಲ್ಲರ ಮಾರ್ಗದರ್ಶಿಯಾಗಿರುವ ಸಾಲು ಮರದ ತಿಮ್ಮಕ್ಕ ಅವರಿಗೆ ನಿವೇಶನ ನೀಡಿರುವುದು ಸಂತೋಷ ತಂದಿದೆ ಎಂದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.