ಆದ್ಯತೆ ಮೇರೆಗೆ ಸುಲಭ ಸಾಲ ಸೌಲಭ್ಯ ಕಲ್ಪಿಸಿ
ಬ್ಯಾಂಕ್‌ಗಳು ಬಡ ಜನರೆಂದ ಮಾತ್ರಕ್ಕೆ ಸಾಲ ನೀಡಲು ಹಿಂಜರಿಯಬಾರದು: ಡಾ| ಚಿಂತಾಲ
Team Udayavani, Jun 23, 2022, 11:50 AM IST
ಧಾರವಾಡ: ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿ ಸ್ವಸಹಾಯ ಗುಂಪುಗಳಿಗೆ ಅದರಲ್ಲೂ ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಜಂಟಿ ಬಾಧ್ಯತಾ ಗುಂಪುಗಳಿಗೆ ಆದ್ಯತೆಯ ಮೇರೆಗೆ ಸುಲಭ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ (ನಬಾರ್ಡ್) ಅಧ್ಯಕ್ಷ ಡಾ|ಜಿ.ಆರ್.ಚಿಂತಾಲ ಹೇಳಿದರು.
ನಗರದಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ಹಮ್ಮಿಕೊಂಡಿದ್ದ ಸ್ವಸಹಾಯ ಸಂಘಗಳ ಸಾಲ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ಯಾಂಕ್‌ಗಳು ಬಡ ಜನರೆಂದ ಮಾತ್ರಕ್ಕೆ ಸಾಲ ನೀಡಲು ಹಿಂಜರಿಯಬಾರದು. ಸ್ವ ಸಹಾಯ ಸಂಘ ಅಥವಾ ಜಂಟಿ ಬಾಧ್ಯತಾ ಗುಂಪುಗಳ ಮೂಲಕ ಅವರೆಲ್ಲರ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷ ಪಿ.ಗೋಪಿಕೃಷ್ಣ ಮಾತನಾಡಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು 30750 ಕೋಟಿ ರೂ. ವಹಿವಾಟು ನಡೆಸುತ್ತಲಿದೆ ಎಂದರು.
ಇದೇ ಸಂದರ್ಭದಲ್ಲಿ ಅವರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ಪರವಾಗಿ 7216 ಸ್ವಸಹಾಯ ಮತ್ತು ಜಂಟಿ ಬಾಧ್ಯತಾ ಗುಂಪುಗಳ ಫಲಾನುಭವಿಗಳಿಗೆ 193 ಕೋಟಿ ರೂ. ಸಾಲ ಹಣದ ಚೆಕ್ ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ಪರವಾಗಿ 49686 ರೈತರಿಗೆ ಸಂಬಂಧಿಸಿ ಕಿಸಾನ್ ಕ್ರಡಿಟ್ ಕಾರ್ಡ್ ಅಡಿಯಲ್ಲಿ 701 ಕೋಟಿ ರೂ. ಸಾಲ ಹಣದ ಚೆಕ್ ಗಳನ್ನು ವಿತರಿಸಲಾಯಿತು.
ಇದಲ್ಲದೇ ಆರ್ಥಿಕ ಶಿಕ್ಷಣ ಹಾಗೂ ಜಂಟಿ ಬಾಧ್ಯತಾ ಗುಂಪುಗಳ ರಚನೆಗೆ ಸಂಬಂ ಧಿಸಿದಂತೆ ನಬಾರ್ಡ್ ಪರವಾಗಿ 34ಲಕ್ಷ ರೂ. ಗಳ ಸಹಾಯಧನ ವಿತರಿಸಲಾಯಿತು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀನಾಥ ಜೋಶಿ, ಕೆನರಾ ಬ್ಯಾಂಕ್ ಮಹಾ ಪ್ರಬಂಧಕ ಭಾಸ್ಕರ್ ಚಕ್ರವರ್ತಿ, ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ, ಬ್ಯಾಂಕ್ ಮಹಾ ಪ್ರಬಂಧಕ ಚಂದ್ರಶೇಖರ ಡಿ. ಮೋರೂ, ಸ್ಥಳೀಯ ನಬಾರ್ಡ್ ಜಿಲ್ಲಾ ಅಭಿವೃದ್ಧಿ ಪ್ರಬಂಧಕ ವೈ. ಮಯೂರ ಕಾಂಬ್ಳೆ ಸೇರಿದಂತೆ ಹಲವರು ಇದ್ದರು.
ಕೆನರಾ ಬ್ಯಾಂಕ್ ಜತೆ ಒಡಂಬಡಿಕೆ
ಜಂಟಿ ಬಾಧ್ಯತಾ ಗೊಪುಗಳ ರಚನೆ ಮತ್ತು ಸಾಲ ಸಂಪರ್ಕಕ್ಕೆ ಸಂಬಂಧಿ ಸಿ ನಬಾರ್ಡ್, ಕೆನರಾ ಬ್ಯಾಂಕ್ ಜತೆ ಮಹತ್ವದ ಒಡಂಬಡಿಕೆಗೆ ಸಹಿ ಹಾಕಿತು. ಕೆನರಾ ಬ್ಯಾಂಕ್ ಪರವಾಗಿ ಬ್ಯಾಂಕಿನ ಮಹಾಪ್ರಬಂಧಕ ದೇಬಾನಂದ ಸಾಹು ಮತ್ತು ನಬಾರ್ಡ್‌ನ ಮುಖ್ಯ ಮಹಾಪ್ರಬಂಧಕ ಟಿ. ರಮೇಶ ಒಡಂಬಡಿಕೆಗೆ ಪರಸ್ಪರ ಸಹಿ ಹಾಕಿದರು. ಈ ಒಡಂಬಡಿಕೆಯ ಅನುಸಾರ ಕೆನರಾ ಬ್ಯಾಂಕ್ ರಾಜ್ಯದಲ್ಲಿ 2510 ಜಂಟಿ ಬಾಧ್ಯತಾ ಗುಂಪುಗಳನ್ನು ರಚಿಸಿ ಸಾಲ ಸಂಪರ್ಕಕ್ಕೆ ತರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.