ಮಳೆಹಾನಿ; ತಕ್ಷಣ ಬಾಕಿ ಪರಿಹಾರ ಕೊಡಿ: ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಸ್ತುವಾರಿ ಕಾರ್ಯದರ್ಶಿ ಕಳಸದ ಸೂಚನೆ

Team Udayavani, Jun 23, 2022, 12:43 PM IST

8

ಬಾಗಲಕೋಟೆ: ಜಿಲ್ಲೆಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ರೈತರ ಬೆಳೆಗಳಿಗೆ ವಿತರಿಸಬೇಕಾದ ಬಾಕಿ ಪರಿಹಾರ ಒಂದು ದಿನದೊಳಗಾಗಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಸೂಚಿಸಿದರು.

ಜಿಪಂ ಸಭಾ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿಗೆ ಮುಂಗಾರು ಹಂಗಾಮಿನ ಬೆಳೆ ವಿವರ ದಾಖಲಿಸಲು ರೈತರಿಂದಲೇ ಸ್ವಯಂ ಬೆಳೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಬೆಳೆ ಸಮೀಕ್ಷೆಯಿಂದ ರೈತರಿಗೆ ಉಂಟಾಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಿ ಬೆಳೆ ಸಮೀಕ್ಷೆ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಶ್ರಮಿಸಬೇಕು. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಶೇ.45ರಷ್ಟು ಬಿತ್ತನೆಯಾಗಿದ್ದು, ರೈತರು ತಾವು ಬೆಳೆದ ಬೆಳೆಯನ್ನು ವಿಮೆಗೆ ಒಳಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಏಕೆಂದರೆ ಪ್ರಕೃಷಿ ವಿಕೋಪದಿಂದ ನಷ್ಟ ಸಂಭವಿಸಿದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದರು.

ಕೃಷಿ ಚಟುವಟಿಕೆಗಳು ಚುರುಕಾಗಿ ನಡೆದಿದ್ದು, ಜಿಲ್ಲೆಯಲ್ಲಿ ರಸಗೊಬ್ಬರ ಅಕ್ರಮವಾಗಿ ದಾಸ್ತಾನು ಮಾಡುವವರ ಮೇಲೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ರಸಗೊಬ್ಬರ ಅಭಾವ ಸೃಷ್ಟಿಯಾಗದಂತೆ ಕೇವಲ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ದಾಳಿ ನಡೆಸದೇ ಕಂದಾಯ ಇಲಾಖೆಯೂ ದಾಳಿ ನಡೆಸಿ ಅಕ್ರಮ ದಾಸ್ತಾನು ತಡೆಯಲು ಮುಂದಾಗಬೇಕು ಎಂದು ತಿಳಿಸಿದ ಅವರು, ಎಫ್‌ಪಿಒಗಳಿಗೆ ಸಾಕಷ್ಟು ಸೌಲಭ್ಯ ದೊರೆಯುತ್ತಿದ್ದು, ಸಾಕಷ್ಟು ಅನುದಾನ ದೊರೆಯುತ್ತಿದೆ ಎಂದು ತಿಳಿಸಿದರು.

ಜಲಜೀವನ ಮಿಷನ್‌ ಯೋಜನೆಗೆ ಹೆಚ್ಚಿನ ಒತ್ತು ನೀಡಿ ಮನೆ-ಮನೆಗೆ ನೀರು ಪೂರೈಸಬೇಕು. ನರೇಗಾ ಯೋಜನೆಯಲ್ಲಿ ಕಳೆದ ಸಾಲಿನಲ್ಲಿ ಟಾಪ್‌ ಲೆವೆಲ್‌ ಮಟ್ಟಕ್ಕೆ ಹೋಗಿತ್ತು. ಈ ವರ್ಷ ಪ್ರಗತಿಯಲ್ಲಿ ತಡವಾಗಿದೆ. ಹೆಚ್ಚಾಗಿ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳಲ್ಲಿ ಹೆಚ್ಚಿನ ಒತ್ತು ಕೊಡಿ. ಅರಣ್ಯ ಇಲಾಖೆಯಲ್ಲಿ ಕ್ರಿಯಾ ಯೋಜನೆಗಳು ಕೇಂದ್ರ ಮಟ್ಟದಲ್ಲಿ ಅನುಮತಿ ಪಡೆಯಬೇಕಿದೆ. ಇನ್ನು ಮುಂದೆ ಜಿಲ್ಲಾ ಹಂತದಲ್ಲಿಯೇ ಅನುಮೋದನೆ ಕ್ರಮವಹಿಸುವುದಾಗಿ ತಿಳಿಸಲಾಯಿತು. ಜಿಪಂ ಸಿಇಒ ಟಿ. ಭೂಬಾಲನ್‌ ಕೃಷಿ ಮತ್ತು ತೋಟಗಾರಿಕೆಯಲ್ಲಿ ನರ್ಸರಿ ಮಾಡಲಾಗುತ್ತಿದೆ. ಎಸ್‌ಎಚ್‌ಜಿಗಳಿಗೆ ನೀಡಲಾಗುತ್ತಿದೆ. ಸರ್ಕಾರ ಹೊಸದಾಗಿ ಜಾರಿಗೆ ತಂದ ಅಮೃತ ಸರೋವರ ಯೋಜನೆಯಡಿ ಈಗಾಗಲೇ 15 ಪ್ರಸ್ತಾವನೆಗಳು ಬಂದಿದ್ದು, ಬರುವ ಆ.15ರೊಳಗಾಗಿ 75 ಪ್ರಸ್ತಾವನೆ ತಯಾರು ಮಾಡಲಾಗುತ್ತಿದೆ. ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಒತ್ತು ನೀಡುತ್ತಿರುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ರಾಜ್ಯ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನ ಯೋಜನೆಯಡಿ 5.93 ಕೋಟಿ ರೂ. ಕ್ರಿಯಾಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ಇತರರು ಇದ್ದರು.

ಅಧಿಕಾರಿಗಳಿಗೆ ಸೂಚನೆ ಜಿಲ್ಲೆಯಲ್ಲಿ ಜಮಖಂಡಿ, ರಬಕವಿ-ಬನಹಟ್ಟಿ, ಬೀಳಗಿ ಸೇರಿದಂತೆ 18.80 ಲಕ್ಷ ರೂ. ಪರಿಹಾರ ರೈತರ ಖಾತೆಗೆ ಜಮಾ ಮಾಡುವುದು ಬಾಕಿ ಉಳಿದಿದೆ. ಪಾವತಿಗೆ ಕೃಷಿ ಮತ್ತು ಕಂದಾಯ ಇಲಾಖೆಗಳು ಈ ಬಗ್ಗೆ ತಕ್ಷಣ ಜಂಟಿ ಸರ್ವೇ ಮಾಡಿ ಪಾವತಿಗೆ ಕ್ರಮವಹಿಸಬೇಕು. ಕ್ರಮ ವಹಿಸಿದ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿ ಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಟಾಪ್ ನ್ಯೂಸ್

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.