ಅಭಿವೃದ್ದಿ ವಿಷಯದಲ್ಲಿ ಬೇಡ ರಾಜಕೀಯ


Team Udayavani, Jun 23, 2022, 3:53 PM IST

17dvp

ಬಸವನಬಾಗೇವಾಡಿ: ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ. ಚುನಾವಣೆ ಬಂದಾಗ ರಾಜಕೀಯ ಮಾಡೋಣ, ಅವಾಗ ಜನರು ತೀರ್ಮಾನಿಸುತ್ತಾರೆ ಎಂದು ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಹೇಳಿದರು.

ಮನಗೂಳಿ ಪಟ್ಟಣದಲ್ಲಿ ಪಪಂ ವತಿಯಿಂದ 2017-18ನೇ ಸಾಲಿನ ನಗರೋತ್ಥಾನ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಿದ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ ಎಂದರು.

ನನಗೂ ರಾಜಕೀಯ ಮಾಡೋಕ್ಕೆ ಬರುತ್ತೆ. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಬೇಕು. ವರ್ಷವಿಡಿ ರಾಜಕೀಯ ಮಾಡಿದರೆ ಜನರ ಸಮಸ್ಯೆ ಆಲಿಸಲು ಸಾಧ್ಯವಾಗಲ್ಲ. ಜನರ ಹಿತ ಕಾಯುವ ಕೆಲಸವಾಗಬೇಕು ಹೊರತು ಪದೆ ಪದೆ ರಾಜಕೀಯ ಮಾಡುವುದು ಸರಿಯಲ್ಲ. ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗದೆ ಹರಿಯುವ ನೀರಾದಾಗ ಮಾತ್ರ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ ಎಂದು ಹೇಳಿದರು.

ಯಾವುದೇ ಒಂದು ಸ್ಥಳೀಯ ಸಂಸ್ಥೆಗಳು ತನ್ನ ಕಾಲ ಮೇಲೆ ನಿಂತಾಗ ಮಾತ್ರ ಪಟ್ಟಣದ ಅಭಿವೃದ್ಧಿಗೆ ಸಹಕಾರವಾಗುತ್ತದೆ. ಮನಗೂಳಿ ಗ್ರಾಪಂ ಅನ್ನು ಪಪಂ ಆಗಿ ಮೇಲ್ದರ್ಜೆಗೆ ಏರಿಸಿದಾಗ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲು ಸಾಧ್ಯವಾಯಿತು ಎಂದರು.

ಬಸವನಬಾಗೇವಾಡಿ ಪಟ್ಟಣದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. ಇದರಿಂದ ವರ್ಷಕ್ಕೆ ಪುರಸಭೆಗೆ ಲಕ್ಷಾಂತರ ಆದಾಯ ಬರುತ್ತದೆ. 10 ಕೋಟಿ ವೆಚ್ಚದಲ್ಲಿ ಬಸವ ಭವನ ನಿರ್ಮಾಣವಾಗಿದ್ದು ಇದರ ಆದಾಯ ಕೂಡಾ ಪುರಸಭೆಗೆ ಬರುತ್ತಿದೆ. 12 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ ಪಟ್ಟಣದಲ್ಲಿ ತಲೆ ಎತ್ತುತ್ತಿದೆ ಎಂದು ಹೇಳಿದರು.

ಮನಗೂಳಿ ಪಟ್ಟಣದಲ್ಲಿ ಕೂಡಾ ಬಡ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಕಲ್ಯಾಣ ಮಂಟಪ, 400ಕ್ಕೂ ಹೆಚ್ಚು ಆಸರೆ ಮನೆಗಳ ನಿರ್ಮಾಣ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳನ್ನು ಬರುವ ದಿನನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಜಿಪಂ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ ಮಾತನಾಡಿ, ಶಾಸಕ ಶಿವಾನಂದ ಪಾಟೀಲರು ಮನಗೂಳಿಗೆ ಸಾವಿರಾರು ಕೋಟಿ ಹಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಪಟ್ಟಣದ ಜನರ ಅನುಕೂಲಕ್ಕಾಗಿ 35 ಕೋಟಿ ವೆಚ್ಚದಲ್ಲಿ ಸರ್ಕಾರಿ ಡಿಗ್ರಿ ಕಾಲೇಜ್‌, 8 ಕೋಟಿಯಲ್ಲಿ ಹೆಣ್ಣು ಮಕ್ಕಳಿಗೆ ವಸತಿ ನಿಲಯ ಸೇರಿದಂತೆ ಪಟ್ಟಣದ ಪ್ರತಿ ವಾರ್ಡ್‌ಗಳಿಗೆ ವಿಶೇಷ ಅನುದಾನ ತಂದು ಸಿಸಿ ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುತ್‌ ದೀಪ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರು.

ಈಗ ನಗರೋತ್ಥಾನ ಯೋಜನೆಯಡಿ 5 ಕೋಟಿ ರೂ. ಅನುದಾನ ಬಂದಿದ್ದು ಇದರಲ್ಲಿ ಮನಗೂಳಿ ಪಟ್ಟಣದ ಬಸ್‌ ನಿಲ್ದಾಣದಿಂದ ಪೊಲೀಸ್‌ ಠಾಣೆವರೆಗೆ 2.50 ಕೋಟಿ ಹಣದಲ್ಲಿ ಬೀದಿ ದೀಪ ಅಳವಡಿಸುವ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.