ಕುಡಿವ ನೀರು ಪೂರೈಕೆಗೆ ಒತ್ತಾಯ
Team Udayavani, Jun 24, 2022, 12:23 PM IST
ಕಲಬುರಗಿ: ನಗರದ ಕೊಠಾರಿ ಭವನದ ಟ್ಯಾಂಕ್‌ನಿಂದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಹನುಮಾನ ನಗರಕ್ಕೆ ನೀರಿನ ಪೈಪ್‌ಲೈನ್ ಅಳವಡಿಸಬೇಕು ಎಂದು ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದಿಂದ ಗುರುವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.
ಕಳೆದ ಐದು ವರ್ಷದ ಹಿಂದೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ವಿಶೇಷ ಅನುದಾನದಲ್ಲಿ ಈ ಬಡಾವಣೆಗೆ ಶಾಶ್ವತ ನೀರಿನ ವ್ಯವಸ್ಥೆಗಾಗಿ ಹೊಸ ಪೈಪ್‌ಲೈನ್ ಅಳವಡಿಸಲು ಯೋಜಿಸಲಾಗಿತ್ತು. ಪಿಡಬ್ಲ್ಯುಡಿ ಇಲಾಖೆಯಿಂದ ಬಡಾವಣೆಯಿಂದ ಕೊಠಾರಿ ಭವನದ ನೀರಿನ ಟ್ಯಾಂಕ್ ವರೆಗೆ ಹೊಸ ಪೈಪ್‌ಲೈನ್ ಅಳವಡಿಸಲಾಗಿದೆ. ಆದರೆ ನೀರು ಸರಬರಾಜಿನ ಸಂಪರ್ಕ ಮಾತ್ರ ಕಲ್ಪಿಸಿಲ್ಲ. ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಬೇಸಿಗೆ ಯಿಂದಲೂ ಜನರು ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ದಶಕದ ಹೋರಾಟಕ್ಕೆ ಫಲ ದೊರೆತರೂ ಇನ್ನೂವರೆಗೆ ಹನುಮಾನ ನಗರದ ನಿವಾಸಿಗಳಿಗೆ ನೀರು ದೊರೆಯುತ್ತಿಲ್ಲ. ಈಗ ಈ ಪೈಪ್‌ಗೆ ಕೋಠಾರಿ ಭವನದ ನೀರಿನ ಟ್ಯಾಂಕ್‌ನ ಸಂಪರ್ಕ ಸ್ಥಾಪಿಸಲು ಅನಾವಶ್ಯಕವಾದ ಕಾಲಹರಣ ಮಾಡಲಾಗುತ್ತಿದೆ. ಇದರಿಂದಾಗಿ ಬಡಾವಣೆ ಜನರು ನೀರಿಗಾಗಿ ಕಾಯುತ್ತಿದ್ದಾರೆ. ಅದ್ದರಿಂದ ಕೂಡಲೇ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಬಡಾವಣೆಯ ಗೌರಮ್ಮ ಸಿ.ಕೆ, ಮಹೇಶ ಎಸ್.ಬಿ, ಸಾಬಮ್ಮ, ಶರಣಮ್ಮ, ಮಹಾದೇವಿ, ಲಕ್ಷ್ಮಿಬಾಯಿ, ಪಾರ್ವತಿ, ಸುನೀತಾ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.