ಕೋವಿಡ್‌ನಿಂದಾದ ಶೈಕ್ಷಣಿಕ ನಷ್ಟ ತುಂಬಿ; ಕೃಷ್ಣಮೂರ್ತಿ

ಮಕ್ಕಳನ್ನು ಸಮರ್ಥವಾಗಿ ಸಿದ್ಧಗೊಳಿಸುವಲ್ಲಿ ಹಿಂದಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ

Team Udayavani, Jun 24, 2022, 5:40 PM IST

ಕೋವಿಡ್‌ನಿಂದಾದ ಶೈಕ್ಷಣಿಕ ನಷ್ಟ ತುಂಬಿ; ಕೃಷ್ಣಮೂರ್ತಿ

ಕೋಲಾರ: ಕಲಿಕಾ ಹಾಳೆಗಳನ್ನು ಬಳಸುವ ಮೂಲಕ ಕೋವಿಡ್‌ ಸಂದರ್ಭದಲ್ಲಿ ಆದ ಶೈಕ್ಷಣಿಕ ನಷ್ಟವನ್ನು ತುಂಬಿ, ಪ್ರಾಥಮಿಕ ಶಾಲೆಗಳಲ್ಲಿ ಅನೇಕ ಕಡೆ ಹಿಂದಿ ಕಲಿಕೆಗೆ ಅವಕಾಶವಿಲ್ಲ, ಪ್ರೌಢಶಾಲೆಯಲ್ಲಿ ಹೆಚ್ಚಿನ ಮತುವರ್ಜಿ ವಹಿಸಿ ಕಲಿಕಾ ದೃಢೀಕರಣ ಮಾಡಿ ಎಂದು ಜಿಲ್ಲೆಯ ಹಿಂದಿ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಸಲಹೆ ನೀಡಿದರು.

ಕೆಜಿಎಫ್‌ ನಗರದ ಭಗವಾನ್‌ ಮಹಾವೀರ್‌ ಜೈನ್‌ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಆಶ್ರಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳ ಹಿಂದಿ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಲಿಕಾ ಚೇತರಿಕೆ ಹಾಳೆಗಳನ್ನು ಬಳಸುವಂತೆ ಸೂಚಿಸಿದ ಅವರು, ಮಕ್ಕಳ ಕಲಿಕಾ ಪ್ರಗತಿಯನ್ನು ವಿಶ್ಲೇಷಿಸಿ, ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುವಂತೆ ಮಾಡುವ ಹೊಣೆಯನ್ನು ನಿರ್ವಹಿಸಿ ಎಂದು ಕಿವಿಮಾತು ಹೇಳಿದರು.

ಸುಲಭಗೊಳಿಸಲು ಪ್ರಯತ್ನಿಸಿ: ಹಿಂದಿ ಭಾಷೆ ಕಲಿಕೆಯನ್ನು ಸುಲಭಗೊಳಿಸಲು ಪ್ರಯತ್ನಿಸಿ, ಮಕ್ಕಳಿಗೆ ಪ್ರೀತಿಯಿಂದ ಕಲಿಯುವ ವಾತಾವರಣ ಸೃಷ್ಟಿಸಿ, 8ನೇ ತರಗತಿಯಲ್ಲಿ ನೀವು ವರ್ಣಮಾಲೆಯಿಂದಲೇ ಕಲಿಕೆ ಆರಂಭಿಸಬೇಕಾದ ಕಾರಣ ನಿಮಗೆ ಒತ್ತಡ ಇರುತ್ತದೆ ಆದರೆ ಅದನ್ನು ಮೀರಿ ನೀವು ಮಕ್ಕಳ ಕಲಿಕೆ ದೃಢೀಕರಣ ಮಾಡಬೇಕು ಎಂದು ತಿಳಿಸಿದರು.

ಉತ್ತಮ ಅಂಕ ಗಳಿಕೆ ಸಾಧ್ಯ: ಜಿಲ್ಲಾ ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌, ಶಾಲೆಗಳಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿ, ಶಿಕ್ಷಕರು ಮತ್ತು ಮಕ್ಕಳಲ್ಲಿ ಭಾಷೆ ಕುರಿತಂತೆ ಕೌಶಲ್ಯ ಬೆಳೆಸಲು ತಿಳಿಸಿ, ಶಿಕ್ಷಕರು ತರಗತಿಯಲ್ಲಿ ಹಿಂದಿ ಭಾಷೆಯನ್ನೇ ಮಾತನಾಡುವ ಮೂಲಕ ಭಾಷೆ ಕಲಿಸುವ ಕೆಲಸವಾಗಬೇಕು. ಆಗ ಮಾತ್ರ ಹಿಂದಿ ವಿಷಯದಲ್ಲೂ ಉತ್ತಮ ಅಂಕ ಗಳಿಕೆ ಸಾಧ್ಯ ಎಂದು ಹೇಳಿದರು.

ಶಿಕ್ಷಣ ಇಲಾಖೆ ಅತಿ ಹೆಚ್ಚು ಶ್ರಮ: ಮಹಾವೀರ್‌ ಜೈನ್‌ ಕಾಲೇಜಿನ ಪ್ರಾಂಶುಪಾಲೆ ರೇಖಾ, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗುಣಾತ್ಮಕತೆ ಕಾಪಾಡುವಲ್ಲಿ ಶಿಕ್ಷಣ ಇಲಾಖೆ ಅತಿ ಹೆಚ್ಚು ಶ್ರಮವಹಿಸಿದೆ. ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡಲ್‌ ಅಧಿಕಾರಿ ನಾಗೇಂದ್ರಪ್ರಸಾದ್‌ ನೇತೃತ್ವದಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳ ಕಲಿಕೆಗೆ ಪೂರಕವಾಗಿ ಒದಗಿಸಿದ ಅಧ್ಯಾಯವಾರು ಪ್ರಶ್ನೋತ್ತರ ಮಾಲಿಕೆ, ನನ್ನನ್ನೊಮ್ಮೆ ಗಮನಿಸಿ ಮತ್ತಿತರ ಸಾಧನಗಳು ಹೆಚ್ಚು ಉಪಯುಕ್ತವಾಯಿತು ಎಂದು ಹೇಳಿದರು.

ಗುಣಾತ್ಮಕ ಫ‌ಲಿತಾಂಶ: ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ, ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಹಾಗೂ ಗುಣಾತ್ಮಕ ಫಲಿತಾಂಶ ಬಂದಿದೆ. ಇದಕ್ಕೆ ಕಾರಣರಾದ ಶಿಕ್ಷಕರನ್ನು ಅಭಿನಂದಿಸಿ, ಪ್ರಾಥಮಿಕ ಶಾಲಾ ಹಂತದಲ್ಲಿ ಅನೇಕ ಶಾಲೆಗಳಲ್ಲಿ ಹಿಂದಿ ಕಲಿಕೆಗೆ ಅವಕಾಶವಿಲ್ಲದ ಕಾರಣ, ಪ್ರೌಢಶಾಲೆಗಳಲ್ಲಿ ಕಲಿಕೆ ಸ್ವಲ್ಪ ಕಷ್ಟವಾದರೂ ಮೂರು ವರ್ಷಗಳಲ್ಲಿ ಮಕ್ಕಳನ್ನು ಸಮರ್ಥವಾಗಿ ಸಿದ್ಧಗೊಳಿಸುವಲ್ಲಿ ಹಿಂದಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಗೌರವಾಧ್ಯಕ್ಷೆ ಎಂ.ಆರ್‌.ಜಯಂತಿ, ಕಾರ್ಯದರ್ಶಿ ಎಲ್‌.ನರಸಿಂಹಮೂರ್ತಿ, ಖಜಾಂಚಿ ವೇಣುಗೋಪಾಲ್‌, ಸೋಮಶೇಖರ್‌, ಅರಾಭಿಕೊತ್ತನೂರು ಪ್ರೌಢಶಾಲೆಯ ಶಿಕ್ಷಕಿ ಸಿದ್ದೇಶ್ವರಿ, ಜಿಲ್ಲೆಯ ಎಲ್ಲಾ ಹಿಂದಿ ಶಿಕ್ಷಕರು, ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.