ಮಳಲಿ ಮಸೀದಿ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Team Udayavani, Jun 24, 2022, 9:30 PM IST

ಮಳಲಿ ಮಸೀದಿ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್‌ ನ್ಯಾಯಾಲಯವು ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ.

ಈ ವಿಚಾರವಾಗಿ ಮಂಗಳೂರಿನ ತೆಂಕಳೈಪಾಡಿ ಗ್ರಾಮದ ಧನಂಜಯ್‌ ಹಾಗೂ ಬಡುಗಳೈಪಾಡಿ ಗ್ರಾಮದ ಮನೋಜ್‌ ಕುಮಾರ್‌ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರು ಹಾಗೂ ಪ್ರತಿವಾದಿಗಳ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ತೀರ್ಪನ್ನು ಕಾಯ್ದರಿಸುವುದಾಗಿ ಹೇಳಿತು.

ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಾದ-ಪ್ರತಿವಾದ ಆಲಿಸಿದರೂ, ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯಕ್ಕೆ ನೀಡಿರುವ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ನ್ಯಾಯಪೀಠ ಹೇಳಿದೆ. ಸೋಮವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.

ಶುಕ್ರವಾರ ಅರ್ಜಿ ವಿಚಾರಣೆಗೆ ಬಂದಾಗ ವಕ್ಫ್ ಮಂಡಳಿ ಪರ ಹಿರಿಯ ನ್ಯಾಯವಾದಿ ಜಯಕುಮಾರ್‌ ಎಸ್‌. ಪಾಟೀಲ್‌ ವಾದ ಮಂಡಿಸಿ, ಅಸಲು ದಾವೆಯನ್ನು ಆಲಿಸಲು ವಿಚಾರಣಾ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ನಿರ್ಧಾರವಾಗುವ ಮೊದಲು ಕಮಿಷನರ್‌ ವರದಿ ಅಗತ್ಯವಿಲ್ಲ. ಒಂದೊಮ್ಮೆ ಮೊದಲು ಕಮಿಷನರ್‌ ನೇಮಕ ಆಗಿ ವರದಿ ಬಂದ ಮೇಲೆ ಪ್ರಕರಣದ ಸಿಂಧುತ್ವದ ಬಗ್ಗೆ ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಬಂದರೆ, ಕಮಿಷನರ್‌ ನೇಮಕ ಮತ್ತು ಅದರ ವರದಿ ಎರಡೂ ಮಾನ್ಯತೆ ಪಡೆದುಕೊಳ್ಳುವುದಿಲ್ಲ. ಹಾಗಾಗಿ, ಅಸಲು ದಾವೆಯ ಸಿಂಧುತ್ವದ ಬಗ್ಗೆ ಮೊದಲು ನಿರ್ಧಾರವಾಗಲಿ ಎಂದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ವಿವೇಕ್‌ ಸುಬ್ಟಾರೆಡ್ಡಿ, ಸ್ಥಳ ಪರಿಶೀಲನೆ ನಡೆದು ಮಾಹಿತಿಗಳನ್ನು ವೈಜ್ಞಾನಿಕವಾಗಿ ಪಡೆದುಕೊಂಡರೆ ಮಾತ್ರ ಕಟ್ಟಡದ ಇತಿಹಾಸ ಮತ್ತು ಪುರಾತನತೆ ಗೊತ್ತಾಗುತ್ತದೆ. ಅಸಲು ದಾವೆ ಮತ್ತು ಸ್ಥಳ ಪರಿಶೀಲನೆ ವಿಚಾರ ಬಂದಾಗ ಮೊದಲು ಅಸಲು ದಾವೆ ಅರ್ಜಿಗೆ ಮನ್ನಣೆ ಕೊಡಬೇಕೋ ಅಥವಾ ಸ್ಥಳ ಪರಿಶೀಲನೆಗೆ ಮಾನ್ಯತೆ ನೀಡಬೇಕೋ ಎಂದು ಕಾನೂನಿನಲ್ಲಿ ನಿರ್ದಿಷ್ಠವಾಗಿ ಹೇಳಲಾಗಿಲ್ಲ. ಜ್ಞಾನವಾಪಿ ಮಸೀದಿ ಪ್ರಕರಣ ಇಲ್ಲಿ ಅನ್ವಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿ ವಿಚಾರಣೆಯನ್ನು ಮುಂದೂಡಿತು.

ಪ್ರಕರಣವೇನು?
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್‌ ಹಾಗೂ ಮನೋಜ್‌ ಕುಮಾರ್‌ ಸಿವಿಲ್‌ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್‌, ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅಡಿಯಲ್ಲಿ ಅಸಲು ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು. ಮತ್ತೂಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್‌ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್‌ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿದೆ. ಇದರಿಂದ, ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಟಾಪ್ ನ್ಯೂಸ್

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.