ಶಿಕ್ಷಕನಿಂದ ಹಲ್ಲೆ ಆರೋಪ: ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
Team Udayavani, Jun 25, 2022, 12:50 AM IST
ಕಡಬ: ಶಿಕ್ಷಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಇಲ್ಲಿನ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ ಘಟನೆ ಶುಕ್ರವಾರ ಸಂಭವಿಸಿದೆ.
ಕಡಬ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಅಬ್ದುಲ್ ಖಾದರ್ ಅವರು ನಮ್ಮ ಮೇಲೆ ತರಗತಿಯಲ್ಲಿ ಹಲ್ಲೆ ನಡೆಸಿದ್ದು, ಕುತ್ತಿಗೆ ಹಿಡಿದು ಕೆನ್ನೆಗೆ ಹೊಡೆದಿದ್ದಾರೆ. ಅದರಿಂದಾಗಿ ಕುತ್ತಿಗೆ ನೋವಾಗಿದ್ದು, ಕೆನ್ನೆ ಊದಿಕೊಂಡಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ಶಿಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿ ಆಗ್ರಹಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿ ಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಅವರು ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸ್ಥಳೀಯ ಶಿಕ್ಷಣ ಸಂಯೋಜಕರಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಮುಖಂಡರು ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಶಿಕ್ಷಕನ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಜರಗಿಸಬೇಕು. ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಅಗ್ರಹಿಸಿ ಕಡಬ ತಹಶೀಲ್ದಾರ್ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.