ಅಂಜನಾದ್ರಿಗೆ ಭೂಸ್ವಾಧೀನ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ, ಹೆಚ್ಚಿನ ಪರಿಹಾರಕ್ಕೆ ಪಟ್ಟು

2013 ರ ಭೂಸ್ವಾಧೀನ ಕಾಯ್ದೆಯಡಿ ಅಂದಾಜು 42 ಲಕ್ಷ ರೂ.ಪರಿಹಾರ

Team Udayavani, Jun 27, 2022, 8:50 PM IST

ಅಂಜನಾದ್ರಿಗೆ ಭೂಸ್ವಾಧೀನ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ, ಹೆಚ್ಚಿನ ಪರಿಹಾರಕ್ಕೆ ಪಟ್ಟು

ಗಂಗಾವತಿ: ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಕೆಳಗಡೆ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲು ರೈತರ ಭೂಮಿ ಸ್ವಾಧೀನ ಮಾಡಿಕೊಳ್ಳಲು ಸರಕಾರ ನಿರ್ಧರಿಸಿದ್ದು ಸೋಮವಾರ ಆನೆಗೊಂದಿ ಗ್ರಾ.ಪಂ.ಕಚೇರಿಯಲ್ಲಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಶ ಕಿಶೋರ್ ನೇತೃತ್ವದಲ್ಲಿ ರೈತರು ಮತ್ತು ಗ್ರಾಮಸ್ಥರ ಸಭೆ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಶ ಕಿಶೋರ್ ಮಾತನಾಡಿ, 2013 ಕೇಂದ್ರ ಸರಕಾರದ ಭೂಸ್ವಾಧೀನ ಕಾಯ್ದೆಯಡಿ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಕೆಳಗಡೆ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲು ರೈತರ 61 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅಗತ್ಯ ಕಟ್ಟಡಗಳನ್ನು 120 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಬೇಕಿದ್ದು ರೈತರ ಭೂಮಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಕಲ್ಪಿಸಲಾಗುತ್ತದೆ. ಸರಕಾರದ ನಿಯಮಾವಳಿಗಳ ಪ್ರಕಾರ ಅಂದಾಜು 42 ಲಕ್ಷ ರೂ. ಒಂದು ಎಕರೆಗೆ ನಿಗದಿ ಮಾಡಬಹುದಾಗಿದ್ದು ಈ ಪರಿಹಾರ ಭೂಮಿ ಸರ್ವೇ ನಂಬರ್‌ಗಳನ್ನು ಅವಲಂಭಿಸಿರುತ್ತದೆ.ಸದ್ಯ ರೈತರ ಜತೆ ಪ್ರಥಮ ಸಭೆ ನಡೆಸಿ ಭೂಮಿ ಕೊಡುವಂತೆ ಕೋರಲಾಗಿದೆ. ರೈತರು 15 ದಿನಗಳ ಕಾಲಾವಕಾಶ ಕೇಳಿದ್ದು ಜು.15 ರಂದು ಪುನಹ ಎರಡನೇಯ ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ರೈತರು ಭೂಮಿ ಕೊಡಲು ಮೊದಲ ಹಂತದಲ್ಲಿ ಒಪ್ಪದಿದ್ದರೆ 2013 ರ ಕೇಂದ್ರ ಸರಕಾರದ ನಿಯಮದಂತೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲಾಗುತ್ತದೆ.ರೈತರ ಎಲ್ಲಾ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರಲಾಗುತ್ತದೆ ಎಂದರು.

ರೈತ ಮುಖಂಡ ಸುದರ್ಶನವರ್ಮಾ ಮಾಡನಾಡಿ, ಭೂಮಿ ಕಳೆದುಕೊಳ್ಳಲು ರೈತರಿಗೆ ಇಷ್ಟವಿಲ್ಲ ಆದ್ದರಿಂದ ಜಿಲ್ಲಾಡಳಿತ ಕೂಡಲೇ ಮುಖ್ಯಮಂತ್ರಿಯವರ ಬಳಿಗೆ ನಿರಾಶ್ರಿತರಾಗುವ ರೈತರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸಬೇಕು. ಅಭಿವೃದ್ಧಿ ಕಾರ್ಯಕ್ಕೆ ಪ್ರಸ್ತಾವನೆ ಕಳಿಸಿರುವ 61 ಎಕರೆ ಭೂಮಿಯ ಬದಲು ಬಲಭಾಗದ ಭೂಮಿ ಮತ್ತು ಸರಕಾರಿ ಭೂಮಿಯನ್ನು ಮೂಲಸೌಕರ್ಯ ಕಲ್ಪಿಸಲು ಬಳಕೆ ಮಾಡಿಕೊಳ್ಳಬೇಕು ಇದು ಸಾಧ್ಯವಾಗದಿದ್ದರೆ ವೈಜ್ಞಾನಿಕವಾಗಿ ಸದ್ಯ ಆನೆಗೊಂದಿ ಭಾಗದಲ್ಲಿ ಭೂಮಿಗೆ ಹೆಚ್ಚಿನ ಬೇಡಿಕೆ ಇದ್ದು ಅದರಂತೆ ಸರಕಾರ ಭೂಮಿಗೆ ಪರಿಹಾರ ನೀಡಬೇಕು.

ಇದನ್ನೂ ಓದಿ : ನನ್ನ ಕೇಸಲ್ಲೂ ಸುಳ್ಳು ಹೇಳಿದ್ದ ಶ್ರೀಕುಮಾರ್‌: ನಂಬಿ ನಾರಾಯಣನ್‌

ಸಭೆಯಲ್ಲಿ ರಾಜವಂಶಸ್ಥರಾದ ಲಲಿತಾರಾಣಿ, ಶ್ರೀಕೃಷ್ಣದೇವರಾಯ, ಹರಿಹರದೇವರಾಯಲು, ಎಡಿಸಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತ ಬಸವಣ್ಣೆಪ್ಪ, ತಹಸೀಲ್ದಾರ್ ಯು.ನಾಗರಾಜ, ರೈತರಾದ ರಾಮಕೃಷ್ಣಶೆಟ್ಟಿ, ಸುದರ್ಶನವರ್ಮಾ, ಶ್ರೀನಾಥ, ಪ್ರಶಾಂತ, ಮರಿಸ್ವಾಮಿ, ಕುಮಾರ, ಶಿವಕುಮಾರ, ತಿರುಕಪ್ಪ, ನಿಂಗಪ್ಪ, ಮಲ್ಲಪ್ಪ, ರಫಿ, ಕೆ.ವೆಂಕಟೇಶ, ಚಂದ್ರಶೇಖರರೆಡ್ಡಿ ಸೇರಿ ಅನೇಕರಿದ್ದರು.

 

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.