ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ : ತಪ್ಪಿಸ್ಥರ ವಿರುದ್ದ ಕ್ರಮ ; ಶಾಸಕ ಡಾ.ರಂಗನಾಥ್
Team Udayavani, Jun 27, 2022, 9:27 PM IST
ಕುಣಿಗಲ್ : ಪುರಸಭೆಯ ಕಸ ಸಾಗಿಸುವ ವಾಹನದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರ ಮೆರವಣಿಗೆ ಸಂಬಂಧ ಪ್ರತಿಕ್ರಿಯಿಸಿದ ಶಾಸಕ ಡಾ.ಹೆಚ್.ರಂಗನಾಥ್ ನನ್ನ ಗಮನಕ್ಕೆ ಭಾರದೇ ಅಚಾತುರ್ಯ ನಡೆದಿದೆ, ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದ್ದಾಗಿ ತಿಳಿಸಿದ್ದಾರೆ.
ಸೋಮವಾರ ಸಂಜೆ ಉದಯವಾಣಿ ಪತ್ರಿಕೆಯೊಂದಿಗೆ ಮಾತನಾಡಿ ಶಾಸಕರು ಎಂದು ಇಲ್ಲದಂತಹ ಇಂದು ನಾಡಪ್ರಭು ಕೆಂಪೇಗೌಡ ಅವರ ಜಯಂತೋತ್ಸವ ಕಾರ್ಯಕ್ರಮ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆಯಿತು, ತಾಲೂಕಿನಾದ್ಯಂತ ನೂರಾರು ಮಂದಿ ಭಾಗವಹಿಸಿದರು, ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಕೆಂಪೇಗೌಡ ಅವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು, ಆದರೆ ಕಸ ತುಂಬುವ ವಾಹನವನ್ನು ಸಿಂಗರಿಸಿದ ಕಾರಣ ವಾಹನ ಯಾವುದೆಂದು ಗೊತ್ತಾಗಲಿಲ್ಲ, ಕಾರ್ಯಕ್ರಮ ಮುಗಿದ ಬಳಿಕ ಕೆಲವರು ಈ ವಿಷಯ ತಿಳಿಸಿದ ಮೇಲೆ ಗೊತ್ತಾಯಿತು, ಇದು ಆಗ ಬಾರದಾಗಿತ್ತು, ನಾನು ಸಹಾ ಒಕ್ಕಲಿಗ ಸಮುದಾಯದವನ್ನಾಗಿದ್ದು ಕೆಂಪೇಗೌಡ ಅವರು ಸಮುದಾಯ ಮಹಾನ್ ನಾಯಕರಾಗಿದ್ದರು ಅವರಿಗೆ ಆಗಿರುವ ಅಪಮಾನ ಸಹಿಸಲು ಸಾಧ್ಯವಿಲ್ಲ, ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ, ಈ ಸಂಬಂಧ ತುರ್ತಾಗಿ ಅಧಿಕಾರಿಗೊಂದಿಗೆ ಚರ್ಚಿಸಿ ಕರ್ತವ್ಯ ಲೋಪ ಎಸಗಿರುವ ಎಷ್ಟೇ ದೊಡ್ಡ ಅಧಿಕಾರಿ ಆಗಿರಲಿ ಅಥವಾ ಇನ್ಯಾರೇ ಆಗಿರಲ್ಲಿ ಅವರ ವಿರುದ್ದ ಕ್ರಮಕೈಗೊಳ್ಳಲಾಗುವುದೆಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.