ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 100 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ


Team Udayavani, Jun 28, 2022, 1:03 PM IST

BDA

ಬೆಂಗಳೂರು: ಮಂಗಳವಾರ ಬೆಳ್ಳಂಬೆಳಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ.

ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನ ಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟು ಕೊಡದೆ ಭೂಮಾಲೀಕರು ಆ ಜಾಗದಲ್ಲಿ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ನಿರ್ಮಿಸಿದ್ದರು.

ಬಿಡಿಎ ಸ್ವಾಧೀನವನ್ನು ಪ್ರಶ್ನಿಸಿ ಮಾಲೀಕರು 1989 ರಲ್ಲಿ ಸಿಟಿ ಸಿವಿಲ್ ಕೋರ್ಟಿನ ಮೊರೆ ಹೋಗಿದ್ದರಾದರೂ, ಬಿಡಿಎ ಪರವಾಗಿ ತೀರ್ಪು ಬಂದಿತ್ತು. ಇದಲ್ಲದೇ, ಎರಡು ಬಾರಿ ಹೈಕೋರ್ಟ್ ಗೆ ಹೋಗಿದ್ದರೂ ಅಲ್ಲಿಯೂ ಅವರಿಗೆ ಸೋಲುಂಟಾಗಿತ್ತು. ಆದಾಗ್ಯೂ ಸದರಿ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ ಅದರಿಂದ ಆದಾಯ ಗಳಿಸುತ್ತಿದ್ದರು. ಹಲವು ಬಾರಿ ಬಿಡಿಎ ಎಚ್ಚರಿಕೆ ನೀಡಿದ್ದರೂ ತೆರವು ಮಾಡಿರಲಿಲ್ಲ.

ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: ಈ ಹಿನ್ನೆಲೆಯಲ್ಲಿ ಮಂಗಳವಾರ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ.ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳೀಯ ಪೊಲೀಸರ ನೆರವಿನಿಂದ 15 ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್ ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

ಪೊಲೀಸ್ ಭದ್ರತೆ: ಈ ಹಿಂದೆ ಮೂರ್ನಾಲ್ಕು ಬಾರಿ ಕಟ್ಟಡಗಳನ್ನು ನೆಲಸಮ ಮಾಡಲು ತೆರಳಿದ ಸಂದರ್ಭದಲ್ಲಿ ಮಾಲೀಕರು ತಮ್ಮ ಪ್ರಭಾವ ಬೀರಿ ಮತ್ತು ಪ್ರತಿಭಟನೆ ನಡೆಸಿದ್ದರಿಂದ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಡಿಎ ಅಧಿಕಾರಿಗಳು 200 ಕ್ಕೂ ಹೆಚ್ಚು ಪೊಲೀಸರ ಭದ್ರತೆಯನ್ನು ಪಡೆದುಕೊಂಡು ನೆಲಸಮ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಕ್ರಿಮಿನಲ್ ಕೇಸ್: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎ ಉಸ್ತುವಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಷ್ಟೇ ಪ್ರಭಾವಿಗಳು ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಜಾಗವನ್ನು ವಶಕ್ಕೆ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಅದರಂತೆ ಬಿಡಿಎ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಎಚ್ ಬಿಆರ್, ಎಚ್ಎಸ್ಆರ್ ಬಡಾವಣೆಗಳು ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಮಾಹಿತಿಗಳು ಇವೆ. ಈ ಹಿನ್ನೆಲೆಯಲ್ಲಿ ಒತ್ತುವರಿದಾರರು ಬಿಡಿಎ ಜಾಗವನ್ನು ಸ್ವಯಂಪ್ರೇರಿತವಾಗಿ ಕೂಡಲೇ ಬಿಟ್ಟುಕೊಡಬೇಕು. ಇಲ್ಲವಾದರೆ, ಕಾನೂನು ರೀತಿಯಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸದರಿ ಜಾಗಗಳನ್ನು ವಶಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.