ಭೂ ಪರಿಹಾರ ನೀಡಲು ನಿರ್ಲಕ್ಷ್ಯ: ಉಪವಿಭಾಗಾಧಿಕಾರಿ ವಾಹನ ಜಪ್ತಿ
Team Udayavani, Jun 28, 2022, 3:48 PM IST
ಪಾಂಡವಪುರ: ಪಟ್ಟಣದ ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಜಮೀನು ನೀಡಿದ ರೈತರಿಗೆ ಪರಿಹಾರ ಒದಗಿಸಲು ವಿಫಲರಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಉಪವಿಭಾಗಾಧಿಕಾರಿಗಳ ವಾಹನ ಜಪ್ತಿ ಮಾಡಲಾಯಿತು.
ಏನಿದು ಪ್ರಕರಣ?: ಪಾಂಡವಪುರ ಪಟ್ಟಣದಲ್ಲಿ 2006 ರಲ್ಲಿ ನಿರ್ಮಾಣಗೊಂಡ ಒಳಚರಂಡಿ ವ್ಯವಸ್ಥೆಯ ಮಲಿನ ನೀರು ಸಂಸ್ಕರಣೆ ಮಾಡಲು ಪಟ್ಟಣದ ಹೊರವಲಯದಲ್ಲಿ ರೈತರ 5.20 ಎಕರೆ ಭೂಮಿಯನ್ನು ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿ 2008 ಮತ್ತು 2009ರಲ್ಲಿ ಸ್ವಾ ಧೀನಪಡಿಸಿಕೊಂಡಿತ್ತು. ಈ ವೇಳೆ ರೈತರಿಗೆ ಅಲ್ಪ ಮೊತ್ತದ ಪರಿಹಾರ ನೀಡಲು ಮುಂದಾಯಿತು. ಪರಿಹಾರದ ಮೊತ್ತಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರೈತರು, ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಅವಕಾಶ ನೀಡದೆ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ನೇತೃತ್ವದಲ್ಲಿ ಹೋರಾಟ ನಡೆಸಿ, ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು.
ಆದೇಶಿಸಿ 3 ವರ್ಷ ಕಳೆದರೂ ಪರಿಹಾರ ನೀಡಿರಲಿಲ್ಲ : ರೈತರ ಮನವಿಯನ್ನು ಪುರಸ್ಕರಿಸಿದ ಪಾಂಡವಪುರ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ, ರೈತರ ಜಮೀನಿಗೆ ಪರಿಹಾರ ನೀಡಲು ಆದೇಶಿಸಿತ್ತು. ನ್ಯಾಯಾಲಯ ಆದೇಶ ನೀಡಿ ಮೂರು ವರ್ಷ ಕಳೆದರೂ ನ್ಯಾಯಾಲಯದ ಆದೇಶ ಪಾಲಿಸಿದ ಉಪವಿಭಾಗಾಧಿ ಕಾರಿಗಳ ನಡೆ ಪ್ರಶ್ನಿಸಿ ರೈತ ಸತ್ಯನಾರಾಯಣ ಎಂಬವರು ಅ ಧಿಕಾರಿಗಳ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ್ದರು. ಹೀಗಾಗಿ ಕೋರ್ಟ್ ಉಪವಿಭಾಗಾಧಿಕಾರಿಗಳ ವಾಹನ ಜಪ್ತಿಗೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.