ಸ್ಲಂ-ಗುಡಿಸಲು ಮುಕ್ತ ರಾಜ್ಯದ ಗುರಿ: ಅಭಯ

ವಾಜಪೇಯಿ ನಗರ ವಸತಿ ಆವಾಸ್‌ ಯೋಜನೆಯಡಿ 250 ಮನೆ

Team Udayavani, Jun 28, 2022, 5:58 PM IST

19

ಬೆಳಗಾವಿ: ಸ್ಲಂ ಮತ್ತು ಗುಡಿಸಲು ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ನಮ್ಮ ಸರ್ಕಾರದ ಮೂಲ ಗುರಿಯಾಗಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು.

ನಗರದ ಉದ್ಯಮಬಾಗದಲ್ಲಿ ಸೋಮವಾರ ವಾಜಪೇಯಿ ನಗರ ವಸತಿ ಆವಾಸ್‌ ಯೋಜನೆಯಡಿ ಮನೆಗಳ ನಿರ್ಮಾಣದ ಅಡಿಗಲ್ಲು ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೊಳಗೇರಿ ಮತ್ತು ಗುಡಿಸಲುಗಳಲ್ಲಿ ವಾಸಿಸುವ ಬಡಜನರ ಜೀವನ ಮತ್ತು ಆರೋಗ್ಯ ಸ್ಥಿತಿ ಹದಗೆಟ್ಟದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಧಾನಮಂತ್ರಿ ವಾಜಪೇಯಿ ಆವಾಸ್‌ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

ಕೊರೊನಾ ಸಮಯದಲ್ಲಿ ಕೊಳಚೆ ಪ್ರದೇಶದ ಜನರ ಪರಿಸ್ಥಿತಿಯನ್ನು ನೋಡಲಾರದೆ ಅವರಿಗೆ ಗುಣಮಟ್ಟದ ಬದುಕನ್ನು ಕಟ್ಟಿಕೊಡುವ ಉದ್ದೇಶದಿಂದ ಮೂರು ಮಜಲುಗಳಲ್ಲಿ ಒಟ್ಟು 250 ಮನೆಗಳನ್ನು ಆವಾಸ್‌ ಯೋಜನೆಯಡಿ ನಿರ್ಮಿಸಲಾಗುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ವಸತಿ ಯೋಜನೆ ಕಾರ್ಯ ಕಾರ್ಯರೂಪಕ್ಕೆ ಬಂದಿದೆ. ರಾಜ್ಯ ಸರಕಾರದ ವಸತಿ ಸಚಿವರಾದ ವಿ.ಸೋಮಣ್ಣ ಅವರು ನಾನು ಮಾಡಿದ ಮನವಿಗೆ ಸ್ಪಂದಿಸಿ ಆವಾಸ್‌ ಯೋಜನೆಗೆ ಸಹಕರಿಸಿದ್ದಾರೆ ಎಂದು ಹೇಳಿದರು.

ಉದ್ಯಮಬಾಗದಲ್ಲಿ ನಿರ್ಮಾಣವಾಗುತ್ತಿರುವ ಮನೆಗಳು ಪಿ.ಕೆ ಕ್ವಾರ್ಟರ್ಸ್‌ ನಲ್ಲಿ ಇರುವ ಮನೆಗಳ ಸ್ವರೂಪವನ್ನು ಹೊಂದಿರುತ್ತವೆ. ಅಪಾರ್ಟಮೆಟ್‌ ದಲ್ಲಿ ನಾವೆಲ್ಲ ಒಂದೇ ಕುಟುಂಬದ ಸದಸ್ಯರು ಎಂದು ಬಾಳಿದರೆ ಸಾಕು, ಆವಾಸ್‌ ಯೋಜನೆ ಸಾರ್ಥಕವಾಗುತ್ತದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ಆವಾಸ್‌ ಯೋಜನೆಯಲ್ಲಿ ಯಾವುದೇ ಅದಿಕಾರಿ ಹಾಗೂ ಫಲಾನುಭವಿಯು ಆಮಿಷಕ್ಕೆ ಒಳಗಾಗಬಾರದು. ಆಮಿಷವನ್ನು ಒಡ್ಡಬಾರದು. ಅಂಥವರು ಕಂಡಬಂದರೆ ಅವರ ವಿರುದ್ದ ನಾನೇ ದೂರು ನೀಡುತ್ತೇನೆ ಎಂದರು.

ಆವಾಸ್‌ ಯೋಜನೆಯಲ್ಲಿ ಸ್ವಂತ ಮನೆಗಳನ್ನು ಹೊಂದುವುದು ಬಡಜನರ ಕನಸು. ಈ ಕನಸನ್ನು ಪ್ರಾಮಾಣಿಕತೆಯಿಂದ ನನಸು ಮಾಡುವುದು ಜನ ಪ್ರತಿನಿಧಿಗಳ ಮತ್ತು ಸಾರ್ವಜನಿಕ ಅಧಿಕಾರಿಗಳ ಕರ್ತವ್ಯ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ನಗರದಲ್ಲಿ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಕಾಮಗಾರಿಗಳು ಮುಕ್ತಾಯದ ಹಂತವನ್ನು ತಲುಪಿದ್ದು ಸಾರ್ವಜನಿಕರು ಇನ್ನೂ ಸ್ವಲ್ಪ ದಿನ ಸಹಕರಿಸಬೇಕು. ಉದ್ಯಮಬಾಗದಲ್ಲಿ ಎರಡು ಮೂರು ವರ್ಷಗಳಿಂದ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಮುಂದಿನ ವಾರದಲ್ಲಿ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಗಾಳಿ ಪ್ರಾಸ್ತಾವಿಕ ಭಾಷಣ ಮಾಡಿದರು. ಪಾಲಿಕೆಯ ಉಪ ಆಯುಕ್ತೆ(ಆಡಳಿತ) ಭಾಗ್ಯಶ್ರೀ ಹುಗ್ಗಿ ಸ್ವಾಗತಿಸಿದರು. ದಕ್ಷಿಣ ಕ್ಷೇತ್ರದ ಎಲ್ಲ ನಗರಸೇವಕರು, ಆವಾಸ್‌ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.