ಪುರಸಭೆ ವಿರುದ್ಧ ಅಸಮಾಧಾನ; ಘಟಕಕ್ಕೆ ಬೀಗ: ಕಂಚಿನಡ್ಕಪದವು ತ್ಯಾಜ್ಯ ಘಟಕಕ್ಕೆ ಖಾದರ್ ಭೇಟಿ
Team Udayavani, Jun 29, 2022, 6:30 AM IST
ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕದ ಅವ್ಯವಸ್ಥೆಯ ದೂರಿನ ಹಿನ್ನೆಲೆಯಲ್ಲಿ ಮಂಗಳ ವಾರ ಸಂಜೆ ಘಟಕಕ್ಕೆ ಭೇಟಿ ನೀಡಿದ ವಿಧಾನಸಭಾ ವಿಪಕ್ಷ ಉಪನಾಯಕ, ಶಾಸಕ ಯು.ಟಿ. ಖಾದರ್ ಅವರು ಪರಿಶೀಲನೆ ನಡೆಸಿ ಮುಂದೆ ಸ್ಪಷ್ಟ ತೀರ್ಮಾನ ಕೈಗೊಳ್ಳುವವರೆಗೆ ಯಾವುದೇ ಕಸ ವಾಹನ ಸಾಗಾಟ ವಾಹನ ಬರುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೀಗ ಜಡಿದರು.
ಈ ವೇಳೆ ಮಾತನಾಡಿದ ಶಾಸಕರು, ಗ್ರಾ.ಪಂ., ಸ್ಥಳೀಯರ ವಿರೋಧದ ನಡುವೆಯೂ ಪುರಸಭೆ ಇಲ್ಲಿ ತ್ಯಾಜ್ಯ ಘಟಕ ಆರಂಭಿಸಿದ್ದು, ಆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೇವಲ ಒಣ ಕಸವನ್ನು ಮಾತ್ರ ಹಾಕಲು ಅವಕಾಶ ನೀಡಲಾಗಿತ್ತು. ಆದರೆ ಪುರಸಭೆಯು ಅವೈಜ್ಞಾನಿಕ ರೀತಿಯಲ್ಲಿ ಕಸವನ್ನು ನಿರ್ವಹಿಸುತ್ತಿದ್ದು ಇಲ್ಲಿನ ಪರಿಸರದ ಮೇಲೆ ಸವಾರಿ ಮಾಡಲು ಹೊರಟಿದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುವವರೆಗೆ ಯಾವುದೇ ಕಸದ ವಾಹನಕ್ಕೆ ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ಹೋರಾಟ ಸಮಿತಿಯ ನೇತೃತ್ವ ವಹಿಸುವುದಾಗಿ ತಿಳಿಸಿದರು.
ಬಂಟ್ವಾಳ ತಾ.ಪಂ. ಮಾಜಿ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಯಶವಂತ ದೇರಾಜೆ, ಪ್ರಮುಖರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಅಬೂಬಕ್ಕರ್ ಸಜೀಪ, ತುಳಸಿ, ಹನೀಫ್, ಮೋಹನ ಪೂಜಾರಿ, ಪ್ರತಾಪ್ ಕರ್ಕೇರ, ಕೆ.ಬಿ. ಸುಲೈಮಾನ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.