ಸಾಲ ನೀಡುವ ಪ್ರಮಾಣ ಹೆಚ್ಚಿಸಿ: ಬ್ಯಾಂಕ್‌ಗಳಿಗೆ ಜಿ.ಪಂ. ಸಿಇಒ ಸೂಚನೆ
Team Udayavani, Jun 29, 2022, 6:25 AM IST
ಉಡುಪಿ: ಕೇಂದ್ರ, ರಾಜ್ಯ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ಬ್ಯಾಂಕ್‌ಗಳ ಪಾತ್ರ ಬಹುಮುಖ್ಯ. ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಎಚ್. ನಿರ್ದೇ ಶನ ನೀಡಿದರು.
ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಹೆಚ್ಚಿನ ಪ್ರಮಾಣ ದಲ್ಲಿ ಠೇವಣಿ ಸಂಗ್ರಹವಾಗುತ್ತಿದ್ದರೂ ಸಾಲ ನೀಡುವ ಪ್ರಮಾಣ ಕಡಿಮೆಯಿದೆ. ಸಾಲ ಮತ್ತು ಠೇವಣಿ ಅನುಪಾತವನ್ನು ಶೇ. 60ಕ್ಕೆ ಹೆಚ್ಚಿಸಬೇಕು. ಸರಕಾರಿ ಯೋಜನೆಗಳ ಫಲಾನುಭವಿಗಳ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸಬಾರದು. ಅರ್ಜಿಗಳಲ್ಲಿ ದೋಷಗಳಿದ್ದರೆ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿ ಸಾಲ ಮಂಜೂರು ಮಾಡುವ ಮೂಲಕ ಯೋಜನೆಗಳ ಪ್ರಗತಿ ಸಾಧಿಸಬೇಕು ಎಂದರು.
ಗ್ರಾ.ಪಂ.ನಿಂದ ಟ್ರೇಡ್
ಲೈಸನ್ಸ್ ಕೇಳಬೇಡಿ
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬ್ಯಾಂಕ್ ಖಾತೆಗಳನ್ನು ಉದ್ಯಮ್ ನೋಂದಣಿ ಪೋರ್ಟಲ್‌ನಲ್ಲಿ ನೋಂದಣಿ ಮಾಡಬೇಕು. ನೋಂದಾಯಿತ ಕೈಗಾರಿಕೆಗಳಿಗೆ ಸಾಲ ನೀಡುವಾಗ ಗ್ರಾ.ಪಂ.ನಿಂದ ಟ್ರೇಡ್ ಲೈಸನ್ಸ್‌ನ ಅನುಮತಿ ಪತ್ರಕ್ಕೆ ಸತಾಯಿಸದೆ ಸ್ಥಳೀಯ ಪ್ರಾಧಿಕಾರ ದಿಂದ ಎನ್‌ಒಸಿ ಪಡೆದು ಸಾಲ ವಿತರಿಸಿ ಎಂದರು.
ಸಾಲ ವಿತರಣೆ ಪ್ರಮಾಣ ವೃದ್ಧಿ
ಕೆನರಾ ಬ್ಯಾಂಕ್‌ನ ಪ್ರಾದೇಶಿಕ ಮ್ಯಾನೇ ಜರ್ ಲೀನಾ ಪಿಂಟೋ ಮಾತ ನಾಡಿ, 2021-22ರ ಸಾಲಿನ ಅಂತ್ಯಕ್ಕೆ ಜಿಲ್ಲೆಯಲ್ಲಿ 15,173 ಕೋ. ರೂ. ಸಾಲ ವಿತರಿಸುವ ನಿಗ ದಿತ ಗುರಿ ಗಿಂತ ಶೇ. 13.81 ಹೆಚ್ಚಿನ ಬೆಳ ವಣಿಗೆ ಸಾಧಿಸಲಾಗಿದೆ ಎಂದರು.
ಆರ್‌ಬಿಐ ಅಧಿಕಾರಿ ತನು ನಂಜಪ್ಪ, ಯೂನಿಯನ್ ಬ್ಯಾಂಕ್ ಪ್ರಾದೇಶಿಕ ಮ್ಯಾನೇಜರ್ ಡಾ| ವಾಸಪ್ಪ ಉಪಸ್ಥಿತರಿದ್ದರು. ಲೀಡ್ ಬ್ಯಾಂಕ್ ಮ್ಯಾನೇಜರ್ ಪಿ.ಎಂ. ಪಿಂಜಾರ ಸ್ವಾಗತಿಸಿದರು.
ಜಿಲ್ಲಾಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ!
ಜಿ.ಪಂ.ನ ಹಿರಿಯ ಅಧಿಕಾರಿಯೊಬ್ಬರಿಗೆ ಜಿಲ್ಲಾಧಿಕಾರಿ ಚಿತ್ರ ಇರುವ ವಾಟ್ಸ್‌ಆ್ಯಪ್ ನಂಬರ್‌ನಿಂದ ಸಂದೇಶ ಕಳುಹಿಸಿ ತುರ್ತಾಗಿ 10 ಸಾವಿರ ರೂ.ಗಳ ಅಮೆಜಾನ್ ವೋಚರ್‌ಗೆ ಬೇಡಿಕೆ ಇಟ್ಟಿದ್ದರು. ಅಧಿಕಾರಿಯು ಪರಿಶೀಲಿಸಿದಾಗ ಅದು ನಕಲಿ ಎಂಬುದು ತಿಳಿದು ಬಂದಿದೆ. ಹೀಗೆ ಉನ್ನತ ಅಧಿಕಾರಿಗಳ ಹೆಸರಿನಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿರುವುದರಿಂದ ಬ್ಯಾಂಕ್‌ಗಳು ವಿಶೇಷ ಕ್ರಮ ಹಾಗೂ ಅರಿವು ಮೂಡಿಸುವ ಅಗತ್ಯ ಇದೆ ಎಂದು ಜಿ.ಪಂ. ಸಿಇಒ ಪ್ರಸನ್ನ ಎಚ್. ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.