ತಾಲೂಕು ಆಡಳಿತದ ವಿರುದ್ಧ ಧರಣಿ
Team Udayavani, Jun 29, 2022, 4:49 PM IST
ಚನ್ನರಾಯಪಟ್ಟಣ: ಸರ್ಕಾರ ನಿಗದಿ ಮಾಡಿರುವ ದಿನಾಂಕದಂದು ತಾಲೂಕು ಆಡಳಿತದಿಂದ ಕೆಂಪೇಗೌಡ ಜಯಂತಿ ಮಾಡದೆ ಇರುವುದನ್ನು ಖಂಡಿಸಿ ಮಿನಿ ವಿಧಾನಸೌಧದ ಮುಂಭಾಗ ಒಕ್ಕಲಿಗ ಹಿತರಕ್ಷಣಾ ವೇದಿಕೆ ಹಾಗೂ ರೈತ ಸಂಘ ದಿಂದ ಧರಣಿ ನಡೆಸಿದರು.
ಒಕ್ಕಲಿಗ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಧರಣಿ ಉದ್ದೇಶಿಸಿ ಮಾತನಾಡಿದರು. ಪ್ರತಿ ವರ್ಷವೂ ಜೂ.27ರಂ ದು ಕೆಂಪೇಗೌಡ ಜಯಂತಿ ಮಾಡಲಾಗುತ್ತಿದೆ. ಆದರೆ, ಈ ವರ್ಷ ತಾಲೂಕು ಆಡಳಿತ ನಿಗದಿತ ದಿನಾಂಕದಂದು ಆಚರಣೆ ಮಾಡದೆ ಕೆಂಪೇಗೌಡರಿಗೆ ಅಪಮಾನ ಮಾಡುತ್ತಿದೆ ಎಂದು ತಹಶೀಲ್ದಾರ್ ಹಾಗೂ ಶಾಸಕರಿಗೆ ಧಿಕ್ಕಾರ ಕೂಗಿದರು.
ಒಕ್ಕಲಿಗರ ಹಿತ ಕಡೆಗಣನೆ ಆರೋಪ: ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆಯನ್ನು ನಿಗದಿತ ದಿನಾಂಕದಂದು ಮಾಡದೆ ತಹಶೀಲ್ದಾರ್ ಗೋವಿಂದರಾಜು ಒಂದು ದಿವಸ ಮುಂಚೆ ಮಾಡಿದ್ದರು. ಇದರಿಂದ ಕೆಂಪೇಗೌಡ ಜಯಂತಿ ಆಚರಣೆಯ ಲ್ಲಿಯೂ ಗೊಂದಲ ಸೃಷ್ಟಿಸಿದ್ದಾರೆ. ತಾಲೂಕಿನಲ್ಲಿ ಒಕ್ಕಲಿಗರ ಹಿತ ಕಾಯುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ. ಜಿಲ್ಲಾಡಳಿತ ಇಂತಹ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕಿನ ಬಹುಸಂಖ್ಯಾತ ಒಕ್ಕಲಿಗರಿಗೆ ಅನ್ಯಾಯವಾಗುತ್ತಿರುವುದು ನೋಡಿದರೆ ಸಣ್ಣಪುಟ್ಟ ಸಮುದಾಯ ದವರ ಕಥೆ ಏನು? ಇದನ್ನು ನಾವು ಸಹಿಸುವುದಿಲ್ಲ. ಇದರ ವಿರುದ್ಧ ದಂಗೆ ಏಳುವ ಮೊದಲು ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.
ಮಿನಿವಿಧಾನಸೌಧ ಬಂದ್ ಮಾಡುವ ಎಚ್ಚರಿಕೆ: ರೈತ ಸಂಘದ ತಾಲೂಕು ಅಧ್ಯಕ್ಷ ರವಿಗೌಡಯ್ಯ ಮಾತನಾಡಿ, ತಾಲೂಕು ಆಡಳಿತ ಜೂ.27 ರಂದು ಕೆಂಪೇಗೌಡ ಜಯಂತಿ ಆಚರಣೆ ಮಾಡ ದಿದ್ದರೆ, ನಾವೇ ವಿಧಾನಸೌಧದ ಬಾಗಿಲಿ ನಲ್ಲಿ ಜಯಂತಿ ಆಚರಣೆ ಮಾಡಬೇಕಾಗುತ್ತದೆ. ಇನ್ನು ಮಿನಿವಿಧಾನಸೌಧದ ಬಾಗಿಲು ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.
ಶಾಸಕ ಬಾಲಕೃಷ್ಣ ಇಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮೊದಲು ಆದ್ಯತೆ ನೀಡಬೇಕು. ಅದು ಬಿಟ್ಟು ಬೆಂಗಳೂರಿನ ಕಾರ್ಯಕ್ರಮಕ್ಕೆ ಒತ್ತು ನೀಡುತ್ತಿದ್ದಾರೆ. ಮತದಾರರಿಗೆ ಶಾಸಕರು ಅನ್ಯಾಯ ಮಾಡುತ್ತಿದ್ದು ತಾಲೂಕಿಗೆ ಇಂತಹ ಶಾಸಕರ ಅಗತ್ಯವಿಲ್ಲ ಎಂದು ಧಿಕ್ಕಾರ ಕೂಗಿದರು.
ದಿನಾಂಕ ಬದಲಾವಣೆ ನಿರ್ಧಾರ ನೀಡಿದ್ಯಾರು?: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಎಂ.ರಾಮಚಂದ್ರ ಧರಣಿ ನಡೆಯುವ ಸ್ಥಳಕ್ಕೆ ಆಗಮಿಸಿ ತಹಶೀಲ್ದಾರ್ ಗೋವಿಂದರಾಜು ಅವರ ನ್ನು ತರಾಟೆಗೆ ತೆಗೆದುಕೊಂಡರು. ಶಾಸಕ ರ ಅಣತಿಯಿಂದ ಕೆಂಪೇಗೌಡ ಜಯಂತಿ ಮಾಡಲು ನಿಮಗೆ ಸರ್ಕಾರ ಆದೇಶ ನೀಡಿಲ್ಲ. ಏಕಾಏಕಿ ದಿನಾಂಕ ಬದಲಾ ಞವಣೆ ಮಾಡಿರುವುದು ತರವಲ್ಲ. ರಾಜ್ಯವ್ಯಾಪ್ತಿ ಕೆಂಪೇಗೌಡ ಜಯಂತಿ ಆಚರಣೆ ಮಾಡುತ್ತಿದ್ದಾರೆ. ಇಲ್ಲಿಯೂ ಅಂದೇ ಮಾಡಬೇಕು ಎಂದು ಪಟ್ಟು ಹಿಡಿದ ಮೇಲೆ ಜಯಂತಿ ಆಚರಣೆ ಮಾಡಲಾಯಿತು.
ಒಕ್ಕಲಿಗ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ತೇಜುಗೌಡ, ಶ್ರೀನಿವಾಸ ಮೂರ್ತಿ, ಕೆಂಪೇಗೌಡ ವೇದಿಕೆ ರಾಜ್ಯಾ ಧ್ಯಕ್ಷ ಮಾರೇನಹಳ್ಳಿ ರವಿ, ಎಂ.ಶಿವರ ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಎಂ. ಪುನೀತ್, ಜಿಪಂ ಮಾಜಿ ಸದಸ್ಯ ಎನ್ .ಡಿ.ಕಿಶೋರ್, ಮುಖಂಡರಾದ ರವಿ, ಮಹೇಶ್, ಮಂಜುನಾಥ್ ಮೊದಲಾ ದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.